LPG Price Hike: ದಸರಾ ಹಬ್ಬಕ್ಕೆ ಮುನ್ನ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಶಾಕ್‌!

ದಸರಾ ಹಬ್ಬಕ್ಕೆ ಮುನ್ನವೇ ತೈಲ ಕಂಪನಿಗಳು ಬೆಲೆ ಏರಿಕೆ ಶಾಕ್ ನೀಡಿವೆ. ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಿವೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 48.50 ರೂಪಾಯಿ ಏರಿಕೆಯಾಗಿದ್ದು, 5 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 12 ರೂಪಾಯಿ ಏರಿಕೆಯಾಗಿದೆ. ಆದರೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎನ್ನುವುದು ಸದ್ಯದ ಸಮಾಧಾನಕರ ಸಂಗತಿ.

ಸದ್ಯ 14 ಕೆಜಿಯ ಮನೆ ಬಳಕೆ ಸಿಲಿಂಡರ್‌ಗಳ ಬೆಲೆ 803 ರೂಪಾಯಿಯಲ್ಲಿ ಸ್ಥಿರವಾಗಿದೆ. ಆದರೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಮಾತ್ರ ಪ್ರತಿ ತಿಂಗಳು ಏರಿಕೆಯಾಗುತ್ತಿದ್ದು, ಹೋಟೆಲ್ ಸೇರಿದಂತೆ ಪ್ರಮುಖ ಉದ್ಯಮಿಗಳ ತಲೆ ಬಿಸಿ ಹೆಚ್ಚಿಸಿದೆ. ಸೆಪ್ಟೆಂಬರ್ 1ರಂದು ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 39 ರೂಪಾಯಿ ಹೆಚ್ಚಾಗಿತ್ತು, ಅಕ್ಟೋಬರ್ ತಿಂಗಳಿನಲ್ಲಿ ಮತ್ತೆ 48.50 ರೂಪಾಯಿ ಹೆಚ್ಚಳವಾಗಿದೆ.

ದಸರಾ ಹಬ್ಬಕ್ಕೆ ಮುನ್ನ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಶಾಕ್‌!

ನವದೆಹಲಿಯಲ್ಲಿ ಸದ್ಯ 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಚಿಲ್ಲರೆ ಬೆಲೆ 1,741.50 ರೂಪಾಯಿಗೆ ಏರಿಕೆಯಾಗಿದೆ. ಮೇ ತಿಂಗಳಿನಿಂದ ಜುಲೈ ತಿಂಗಳವರೆಗೆ ಮೂರು ತಿಂಗಳ ಕಾಲ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿತ್ತು. ಮೇ ತಿಂಗಳಲ್ಲಿ 19 ರೂಪಾಯಿ ಕಡಿಮೆಯಾಗಿದ್ದರೆ, ಜೂನ್‌ನಲ್ಲಿ 30 ರೂಪಾಯಿ ಮತ್ತು ಜುಲೈನಲ್ಲಿ 69.50 ರೂಪಾಯಿಗಳಷ್ಟು ಕಡಿಮೆ ಮಾಡುವ ಮೂಲಕ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1676 ರೂಪಾಯಿಗೆ ಬಂದಿತ್ತು.

ಬೆಲೆ ಏರಿಕೆಗೆ ಕಾರಣಗಳೇನು?

ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳಕ್ಕೆ ತೈಲ ಕಂಪನಿಗಳು ಯಾವುದೇ ನಿರ್ದಿಷ್ಟ ಕಾರಣಗಳನ್ನು ನೀಡಿಲ್ಲ. ಜಾಗತಿಕವಾಗಿ ನಡೆಯುತ್ತಿರುವ ವಿದ್ಯಮಾನಗಳು ಬೆಲೆ ಏರಿಕೆಗೆ ಕಾರಣವಾಗಿದೆ ಎಂದು ಅಂದಾಜಿಸಿಲಾಗಿದೆ. ಮುಖ್ಯವಾಗಿ ತೈಲ ಬೆಲೆಗಳಲ್ಲಿನ ಏರಿಳಿತಗಳು ಎಲ್‌ಪಿಜಿ ಬೆಲೆ ಹೆಚ್ಚಳದ ಮೇಲೆ ನೇರ ಪರಿಣಾಮ ಬೀರಲಿವೆ.

ಮಧ್ಯಪ್ರಾಚ್ಯದಲ್ಲಿ ತಲೆದೋರಿರುವ ಬಿಕ್ಕಟ್ಟುಗಳು, ಇಸ್ರೇಲ್ - ಲೆಬನಾನ್ ನಡುವಿನ ಸಂಘರ್ಷಗಳಿಂದ ಕಚ್ಛಾ ತೈಲಗಳ ಬೆಲೆಗಳ ಮೇಲೆ ಪರಿಣಾಮ ಬೀರಿವೆ. ಉಭಯ ದೇಶಗಳ ನಡುವಿನ ಮಿಲಿಟರಿ ಕಾರ್ಯಾಚರಣೆಗಳು ಕಚ್ಛಾತೈಲ ಪೂರೈಕೆ ಮೇಲೆ ಪರಿಣಾಮ ಬೀರುವ ಕಾರಣ ಬೆಲೆ ಏರಿಕೆಗೆ ಕಾರಣವಾಗಿರಬಹುದು.

ಸಾರ್ವಜನಿಕರಿಗೆ ಹೆಚ್ಚಿನ ಹೊರೆ

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಸಾರ್ವಜನಿಕರ ಮೇಲೆ ನೇರವಾಗಿ ಪರಿಣಾಮ ಬೀರದೇ ಇದ್ದರೂ, ಪರೋಕ್ಷವಾಗಿ ಹೊರೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಹಲವು ಉತ್ಪನ್ನಗಳ ಬಳಕೆಯಲ್ಲಿ ವಾಣಿಜ್ಯ ಸಿಲಿಂಡರ್ ಬಳಕೆ ಇರುವುದರಿಂದ ಅನಿವಾರ್ಯವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಬಹುದು, ಇದು ಮತ್ತೆ ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆಗೆ ಕಾರಣವಾಗುವ ಸಾಧ್ಯತೆ ಇದೆ.

ದಸರಾ ಮತ್ತು ದೀಪಾವಳಿಯಂತಹ ಪ್ರಮುಖ ಹಬ್ಬಗಳು ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬೆಲೆ ಏರಿಕೆ ಶಾಕ್ ಸಿಕ್ಕಿದೆ. ಮಧ್ಯಪ್ರಾಚ್ಯ ಭಾಗದಲ್ಲಿ ಉದ್ವಿಗ್ನತೆ ಕಡಿಮೆಯಾದರೆ ಮುಂದಿನ ದಿನಗಳಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+