For Quick Alerts
ALLOW NOTIFICATIONS  
For Daily Alerts

ಕಳೆದ ವಾರದ ಟಾಪ್ 10 ಮೌಲ್ಯ: ಟಿಸಿಎಸ್, ರಿಲಯನ್ಸ್‌ಗೆ ಹೆಚ್ಚು ಲಾಭ

|

ಭಾರತದ ಷೇರು ಮಾರುಕಟ್ಟೆಯ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಒಂಭತ್ತು ಕಂಪನಿಗಳು ಒಟ್ಟಾರೆ 2,50,005.88 ಕೋಟಿ ರು ಮೌಲ್ಯ ಹೆಚ್ಚಿಸಿಕೊಂಡಿವೆ. ಇದಕ್ಕೂ ಹಿಂದಿನ ವಾರದಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಭಾರಿ ಲಾಭ ಗಳಿಸಿದ್ದವು. ಇದಕ್ಕೂ ಹಿಂದಿನ ವಾರದಲ್ಲಿ ಭಾರಿ ನಷ್ಟ ಅನುಭವಿಸಿದ್ದ ರಿಲಯನ್ಸ್ ಕಳೆದ ವಾರ ಲಾಭದತ್ತ ಮರಳಿದೆ.

ಕಳೆದ ವಾರ ಬಿಎಸ್ಇ ಬೆಂಚ್ ಮಾರ್ಕ್ ಸೂಚ್ಯಂಕ ಶೇ 2.55ರಷ್ಟು ಏರಿಕೆಯಾಗಿ 1.490.83 ಅಂಕಗಳನ್ನು ಮುಟ್ಟಿತ್ತು. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಕಡಿಮೆ ಕಂಪನಿ ಮೌಲ್ಯ ಗಳಿಸಿಕೊಂಡಿವೆ. ಟಾಪ್ 10 ರಲ್ಲಿ 8 ಕಂಪನಿಗಳ ಮೌಲ್ಯ ಬದಲಾಗಿದೆ. ಓಮಿಕ್ರಾನ್ ಭೀತಿ ನಡುವೆ ಷೇರುಪೇಟೆಯಲ್ಲಿ ಸುಧಾರಣೆ ಕಂಡು ಬಂದಿದೆ.

ಕೊರೊನಾವೈರಸ್ ಹೊಸ ರೂಪಾಂತರಿ ಅಲೆಯಿಂದ ಷೇರುಪೇಟೆ ವಹಿವಾಟು ಭಾರಿ ನಷ್ಟ ಅನುಭವಿಸಿದ್ದವು, ಟಾಪ್ ಕಂಪನಿಗಳು ಭಾರಿ ನಷ್ಟ ಅನುಭವಿಸಿದ್ದವು. ಇನ್ಫೋಸಿಸ್ ಹಾಗೂ ವಿಪ್ರೋ ಮಾತ್ರ ಹಿನ್ನಡೆ ಅನುಭವಿಸಿವೆ ಹಾಗೂ ಯಾವ ಕಂಪನಿ ಮೌಲ್ಯ ಎಷ್ಟಾಗಿದೆ ಎಂಬ ವಿವರ ಮುಂದೆ ಓದಿ..

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(ಟಿಸಿಎಸ್) 43,648.81 ಕೋಟಿ ರು ಕುಸಿತ ಕಂಡು 14,25,928.82 ಕೋಟಿ ರು ಮೌಲ್ಯ ಕಂಡಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆ ಮೌಲ್ಯ 46,380.16 ಕೋಟಿ ರು ಇಳಿಕೆ ಕಂಡು 16,47,762.23 ರು ಆಗಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್

ಎಚ್‌ಡಿಎಫ್‌ಸಿ ಬ್ಯಾಂಕ್

ಬಜಾಜ್ ಫೈನಾನ್ಸ್ 41,273.78 ಕೋಟಿ ರು ಏರಿಸಿಕೊಂಡು 4,62,395.52 ಕೋಟಿ ರುಗೆ ಹೆಚ್ಚಳ ಕಂಡಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ 39,129.34 ಕೋಟಿ ರು ಇಳಿಕೆ ಕಂಡು 8,59,293.61 ಕೋಟಿ ರು ತಲುಪಿದೆ. ಐಸಿಐಸಿಐ ಬ್ಯಾಂಕ್ 36,887.38 ಕೋಟಿ ರು ಏರಿಕೆ ಕಂಡು 5,50,860.60 ಕೋಟಿ ರು ತಲುಪಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 27,532.42 ಕೋಟಿ ರು ಏರಿಸಿಕೊಂಡು 4,38,466.16 ಕೋಟಿ ರು ಮೌಲ್ಯಕ್ಕೆ ಏರಿದೆ. ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ 13,333.93 ಕೋಟಿ ರು ಏರಿಕೆ ಕಂಡು 5,67,778.73 ಕೋಟಿ ರು ಮೌಲ್ಯ ಉಳಿಸಿಕೊಂಡಿದೆ. ಇದೇ ವೇಳೆ ಎಚ್‌ಡಿಎಫ್‌ಸಿ 1,820.06 ಕೋಟಿ ರು ಮೌಲ್ಯ ಇಳಿಕೆ ಕಂಡು 4,70,300.72 ಕೋಟಿ ರು ತಲುಪಿದೆ.

ವಿಪ್ರೋ ಮೌಲ್ಯ

ವಿಪ್ರೋ ಮೌಲ್ಯ

ಎರಡನೇ ಅತಿ ದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ ಇನ್ಫೋಸಿಸ್ ಕಳೆದ ಒಂದು ವಾರದಲ್ಲಿ 32,172.98 ಕೋಟಿ ರು ಮೌಲ್ಯ ಇಳಿಸಿಕೊಂಡು 7,62,541.62 ಕೋಟಿ ರು ಮೌಲ್ಯ ಹೊಂದಿದೆ. ವಿಪ್ರೋ ಮೌಲ್ಯ 2,192.52 ಕೋಟಿ ರು ಇಳಿಕೆ ಕಂಡು 3,89,828.86 ಕೋಟಿ ರು ತಲುಪಿದೆ.

ಟಾಪ್ 10 ಕಂಪನಿಗಳು

ಟಾಪ್ 10 ಕಂಪನಿಗಳು

ಒಟ್ಟಾರೆ, ಟಾಪ್ 10 ಕಂಪನಿಗಳು: ರಿಲಯನ್ಸ್ ಇಂಡಸ್ಟ್ರೀಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್, ಐಸಿಐಸಿಐ ಬ್ಯಾಂಕ್,ಎಚ್‌ಡಿಎಫ್‌ಸಿ, ಬಜಾಜ್ ಫೈನಾನ್ಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ವಿಪ್ರೋ.

English summary

M-cap of eight of top-10 most-valued firms jumps over Rs 2.50 trillion

Eight of the top-10 most-valued firms together added Rs 2,50,005.88 crore in market valuation last week, with Tata Consultancy Services and Reliance Industries emerging as the biggest gainers.
Story first published: Sunday, January 9, 2022, 19:42 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X