ಮಹೀಂದ್ರಾ ಅಂಡ್ ಮಹೀಂದ್ರಾ (M&M) ಸೋಮವಾರ ತಿಳಿಸಿರುವ ಪ್ರಕಾರ, ಮುಂದಿನ ತಿಂಗಳು- ಜನವರಿಯಿಂದ ಟ್ರ್ಯಾಕ್ಟರ್ ಗಳ ಬೆಲೆಯಲ್ಲಿ ಏರಿಕೆ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಇನ್ ಪುಟ್ ವೆಚ್ಚದಲ್ಲಿ ಏರಿಕೆ ಆಗಿರುವುದನ್ನು ಭಾಗಶಃ ಸರಿಪಡಿಸುವುದಕ್ಕೆ ಈ ಕ್ರಮಕ್ಕೆ ಮುಂದಾಗಲಾಗಿದೆ ಎಂದು ತಿಳಿಸಲಾಗಿದೆ.
ರೆಗ್ಯುಲೇಟರಿ ಫೈಲಿಂಗ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಮಹೀಂದ್ರಾ ಅಂಡ್ ಮಹೀಂದ್ರಾದ ಕೃಷಿ ಸಲಕರಣೆಗಳ ವಲಯದಿಂದ ತಿಳಿಸಿ, ಜನವರಿ 1, 2021ರಿಂದ ಎಲ್ಲ ಮಾಡೆಲ್ ಗಳ ಹಾಗೂ ವಿವಿಧ ಬೆಲೆಯ ಟ್ರ್ಯಾಕ್ಟರ್ ಗಳ ದರದಲ್ಲಿ ಏರಿಕೆ ಮಾಡಲಾಗುವುದು ಎಂದು ಹೇಳಿಕೆ ನೀಡಲಾಗಿದೆ.
ವಸ್ತುಗಳ ಬೆಲೆ ಏರಿಕೆ ಹಾಗೂ ಇತರ ಇನ್ ಪುಟ್ ವೆಚ್ಚದಲ್ಲಿನ ಏರಿಕೆ ಕಾರಣಕ್ಕೆ ಟ್ರ್ಯಾಕ್ಟರ್ ಗಳ ಬೆಲೆ ಏರಿಕೆ ಮಾಡಬೇಕಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಮಾಡೆಲ್ ಗಳ ಬೆಲೆ ಏರಿಕೆ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ ಎಂದು ಮಹೀಂದ್ರಾ ಅಂಡ್ ಮಹೀಂದ್ರಾ ತಿಳಿಸಿದೆ.

ಮಹೀಂದ್ರಾದ ಎಲ್ಲ ಪ್ರಯಾಣಿಕರ ವಾಹನ ಹಾಗೂ ವಾಣಿಜ್ಯ ವಾಹನಗಳ ಬೆಲೆಯಲ್ಲಿ ಜನವರಿ 1ರಿಂದ ಬೆಲೆ ಏರಿಕೆ ಮಾಡುವುದಾಗಿ ಕಳೆದ ವಾರವಷ್ಟೇ ಘೋಷಣೆ ಮಾಡಲಾಗಿತ್ತು.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications