ಕೊಲ್ಕತ್ತ, ಜೂನ್ 3: ''ಕೊರೊನಾವೈರಸ್ ಲಾಕ್‌ಡೌನ್ ಪರಿಣಾಮವಾಗಿ ತೀವ್ರ ಸಮಸ್ಯೆ ಅನುಭವಿಸುತ್ತಿರುವ ವಲಸೆ ಕಾರ್ಮಿಕರಿಗೆ ತಲಾ 10 ಸಾವಿರ ರುಪಾಯಿಯನ್ನು ಅವರ ಬ್ಯಾಂಕ್ ಅಕೌಂಟ್‌ಗೆ ಜಮಾ ಮಾಡಬೇಕು'' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ಆಂಫಾನ ಚಂಡ ಮಾರುತದಿಂದ ತೊಂದರೆಗೊಳಗಾದವರಿಗೆ ತಕ್ಷಣದ ಪರಿಹಾರವಾಗಿ ಮಮತಾ ಬ್ಯಾನರ್ಜಿ ಅವರು ತಲಾ 20 ಸಾವಿರ ರುಪಾಯಿ ಜಮಾ ಮಾಡಿದ ಮರುದಿನವೇ ಮಹತ್ವದ ಬೇಡಿಕೆಯನ್ನು ಕೇಂದ್ರದ ಮುಂದೆ ಇಟ್ಟಿದ್ದಾರೆ.
''ಕೋವಿಡ್ ಪರಿಹಾರವಾಗಿ ಸ್ಥಾಪಿಸಲಾಗಿರುವ PM-CARES ನ ಒಂದು ಭಾಗವನ್ನು ಇದಕ್ಕಾಗಿ ಬಳಸಬಹುದು'' ಎಂದು ಬ್ಯಾನರ್ಜಿ ಬುಧವಾರ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ. ಲಾಕ್‌ಡೌನ್ ವಿಚಾರವಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ಸರ್ಕಾರದೊಂದಿಗೆ ಜಟಾಪಟಿ ನಡೆಸಿದೆ. ಯೋಜಿತವಲ್ಲದ ಲಾಕ್‌ಡೌನ್‌ನಿಂದ ಲಕ್ಷಾಂತರ ವಲಸೆ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಮತಾ ಆರೋಪಿಸುತ್ತಿದ್ದಾರೆ.

ಮಮತಾ ಅವರ ಈ ಮಹತ್ವದ ಬೇಡಿಕೆಗೆ ಭಾರತೀಯ ಜನತಾ ಪಕ್ಷ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಹುಲ್ ಸಿನ್ಹಾ, ''ವಲಸೆ ಕಾರ್ಮಿಕರನ್ನು ಇತರ ರಾಜ್ಯಗಳಿಂದ ಮರಳಿ ಕರೆತರುವಲ್ಲಿ ವಿಫಲವಾಗಿರುವ ಮಮತಾ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ'' ಎಂದು ಹೇಳಿದ್ದಾರೆ.
More From GoodReturns

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ನಿರ್ಧಾರ: ನಿಮ್ಮ ಎಸ್ಐಪಿ ಮತ್ತು ಇಎಂಐ ಬದಲಾಯಿಸಬೇಕೇ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ



Click it and Unblock the Notifications