ಡಿಜಿಟಲ್ ಅರೆಸ್ಟ್ ಎನ್ನುವ ಹೊಸ ರೂಪದ ಆನ್‌ಲೈನ್ ವಂಚನೆ ಕರಾಳ ಮುಖ ಸದ್ದಿಲ್ಲದೆ ಭಾರತವನ್ನು ಆವರಿಸುತ್ತಿದೆ. ಎಲ್ಲರ ಕೈಯಲ್ಲು ಸ್ಮಾರ್ಟ್ ಫೋನ್ ಇರುವಾಗ, ಆನ್‌ಲೈನ್ ಬಳಕೆ ಹೆಚ್ಚುತ್ತಿದ್ದು, ವಂಚನೆ ಕೂಡ ಹೆಚ್ಚಾಗುತ್ತಿದೆ. ಡಿಜಿಟಲ್ ಅರೆಸ್ಟ್ ಹೊಸ ಮಾದರಿಯ ಆನ್‌ಲೈನ್ ವಂಚನೆಯಾಗಿದ್ದು, ಇದೀಗ ಮಂಗಳೂರಿನ ವ್ಯಕ್ತಿಯೊಬ್ಬರು ಈ ಜಾಲಕ್ಕೆ ಸಿಲುಕಿ ಬರೋಬ್ಬರಿ 30.65 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.
ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಕೆ ಹಾಕಿರುವ ಖದೀಮರು ಬರೋಬ್ಬರಿ 30.65 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಗುಡ್‌ರಿಟರ್ನ್ ಮತ್ತು ಒನ್‌ಇಂಡಿಯಾ ಜಾಗೃತಿ ಅಭಿಯಾನ ನಡೆಸುತ್ತಿವೆ.

ವಂಚನೆ ಮಾಡಿದ್ದೇಗೆ?
ಅಕ್ಟೋಬರ್ 19ರಂದು ಅಪರಿಚಿತ ಸಂಖ್ಯೆಯಿಂದ ಕರೆ ಮಾಡಿರುವ ವಂಚಕರು ಇಂಗ್ಲೀಷ್‌ನಲ್ಲಿ ಮಾತನಾಡಿದ್ದು ತಾನು ಮುಂಬೈನ ಸಹರ್ ಪೊಲೀಸ್ ಠಾಣೆಯವನು ಎಂದು ಹೇಳಿಕೊಂಡಿದ್ದಾನೆ. ನಿಮ್ಮ ಮೊಬೈಲ್ ಬಳಸಿ ಆನ್‌ಲೈನ್ ವಂಚನೆ ಮಾಡಲಾಗಿದ್ದು ಈ ಸಂಬಂಧ ನಮ್ಮ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ. ಅದೇ ದಿನ ಮತ್ತೊಬ್ಬ ವಂಚಕ ಬೇರೆ ಮೊಬೈಲ್ ಸಂಖ್ಯೆಯಿಂದ ವಿಡಿಯೋ ಕಾಲ್ ಮಾಡಿದ್ದು, ಪೊಲೀಸ್ ಸಮವಸ್ತ್ರ ಧರಿಸಿದ್ದ ವ್ಯಕ್ತಿ ತನ್ನನ್ನು ತಾನು ಮೋಹನ್ ಕುಮಾರ್ ಎಂದು ಪರಿಚಯಿಸಿಕೊಂಡಿದ್ದಾನೆ.
ಮುಂಬೈನ ಎಸ್‌ಬಿಐ ಬ್ಯಾಂಕ್ ಶಾಖೆಯಲ್ಲಿ ನಿಮ್ಮ ಹೆಸರಿನಲ್ಲಿ ಖಾತೆ ತೆರೆದು 3.9 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಅದಕ್ಕಾಗಿ ನಿಮಗೆ 38 ಲಕ್ಷ ರೂಪಾಯಿ ಕಮಿಷನ್ ನೀಡಲಾಗಿದೆ ಎಂದು ಭಯ ಹುಟ್ಟಿಸಿದ್ದಾರೆ. ತಮ್ಮ ಮೇಲಿನ ಆರೋಪಗಳನ್ನು ವ್ಯಕ್ತಿಯು ನಿರಾಕರಿಸಿದಾಗ, ಕರೆ ಮಾಡಿದ ವಂಚಕ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದು, ನಿಮ್ಮ ವಿರುದ್ಧ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದೆ ಎಂದು ಹೆದರಿಸಿದ್ದಾನೆ.
ವಂಚಕರ ಮಾತನ್ನು ನಂಬಿದ ಸಂತ್ರಸ್ತ, ಅವರ ನಿರ್ದೇಶನದಂತೆ ಅಕ್ಟೋಬರ್ 21 ರಂದು 2.65 ಲಕ್ಷ ರೂಪಾಯಿ, ಅಕ್ಟೋಬರ್ 22ರಂದು 14 ಲಕ್ಷ ರೂಪಾಯಿ, ಮತ್ತೊಮ್ಮೆ 14 ಲಕ್ಷ ರೂಪಾಯಿಯನ್ನು ವರ್ಗಾವಣೆ ಮಾಡಿದ್ದಾರೆ. ಬಳಿಕ ತಾನು ವಂಚನೆಗೆ ಒಳಗಾಗಿರುವುದು ಗಮನಕ್ಕೆ ಬಂದಿದ್ದು, ಸೈಬರ್ ಕ್ರೈಂ ಸಹಾಯವಾಣಿ 1930ಕ್ಕೆ ದೂರು ನೀಡಿದ್ದಾರೆ.
ಆದರೆ ಅಷ್ಟರಲ್ಲಾಗಲೇ ಅವರು ಬರೋಬ್ಬರಿ 30.65 ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಇಂತಹ ಅನೇಕ ಪ್ರಕರಣಗಳು ದಿನೇ ದಿನೇ ದೇಶದ ಒಂದಿಲ್ಲೊಂದು ಕಡೆಗಳಲ್ಲಿ ನಡೆಯುತ್ತಲೇ ಇರುತ್ತದೆ. ಯಾರಾದರೂ ನಿಮಗೆ ಕರೆ ಮಾಡಿ ನಿಮ್ಮ ಮೇಲೆ ದೂರು ದಾಖಲಾಗಿದೆ, ಬಂಧನ ವಾರೆಂಟ್ ಇದೆ ಎಂದು ಬೆದರಿಕೆ ಹಾಕಿದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ಕೊಡಿ. ಯಾವುದೇ ಕಾರಣಕ್ಕೂ ಅಪರಿಚಿತರಿಗೆ ನಿಮ್ಮ ಬ್ಯಾಂಕ್ ಖಾತೆಯ ಮಾಹಿತಿ, ಕ್ರೆಡಿಟ್/ಡೆಬಿಟ್ ಕಾರ್ಡ್ ಮಾಹಿತಿಯನ್ನು ನೀಡಬೇಡಿ. ಬ್ಯಾಂಕ್ ಅಧಿಕಾರಿಗಳು ಎಂದು ಕರೆ ಮಾಡಿದರೂ ಯಾವುದೇ ಮಾಹಿತಿ ಕೊಡದೇ ಇದ್ದರೆ ಬಹುತೇಕ ವಂಚನೆಯನ್ನು ತಪ್ಪಿಸಬಹುದು.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications