For Quick Alerts
ALLOW NOTIFICATIONS  
For Daily Alerts

ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ: ಸೇವೆಗಳಲ್ಲಿ ಆಗಲಿದ್ಯಾ ವ್ಯತ್ಯಯ?

|

ಹಲವು ಬ್ಯಾಂಕ್‌ಗಳು ಉದ್ದೇಶಿಸಿರುವ ಎರಡು ದಿನಗಳ ಮುಷ್ಕರದಿಂದಾಗಿ ಬ್ಯಾಂಕಿಂಗ್‌ ಸೇವೆಗಳಲ್ಲಿ ವ್ಯತ್ಯಯವಾಗಬಹುದು ಎಂದು ಕೆನರಾ ಬ್ಯಾಂಕ್ ಹೇಳಿದೆ. ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ತೀರ್ಮಾನವನ್ನು ವಿರೋಧಿಸಿ ಮಾರ್ಚ್ 15-16ರಂದು ಹಲವಾರು ಬ್ಯಾಂಕ್ ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ.

ಬ್ಯಾಂಕ್ ಒಕ್ಕೂಟಗಳು ಕರೆ ನೀಡಿರುವ ಮುಷ್ಕರದ ಕುರಿತಾಗಿ ಪ್ರಮುಖ ಆರು ವಿಷಯಗಳು ಈ ಕೆಳಗಿವೆ:

ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರ: ಸೇವೆಗಳಲ್ಲಿ ಆಗಲಿದ್ಯಾ ವ್ಯತ್ಯಯ?

 

1) ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ಮಾರ್ಚ್ 15 ಮತ್ತು ಮಾರ್ಚ್ 16 ರಂದು ಬ್ಯಾಂಕಿಂಗ್ ಉದ್ಯಮದಲ್ಲಿ ಮುಷ್ಕರಕ್ಕೆ ಕರೆ ನೀಡಿದೆ ಎಂದು ಕೆನರಾ ಬ್ಯಾಂಕ್ ಸ್ಟಾಕ್‌ ಫೈಲಿಂಗ್‌ನಲ್ಲಿ ತಿಳಿಸಿದೆ.

2) ಮುಂಬರುವ ಮುಷ್ಕರ ದಿನಗಳಲ್ಲಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ಸುಗಮ ಕಾರ್ಯನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೆನರಾ ಬ್ಯಾಂಕ್ ಹೇಳಿದೆ.

3) ಆದಾಗ್ಯೂ, ಮುಷ್ಕರ ಕಾರ್ಯರೂಪಕ್ಕೆ ಬಂದಲ್ಲಿ ಶಾಖೆಗಳು/ ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಬಹುದು ಎಂದು ಬ್ಯಾಂಕ್ ಹೇಳಿದೆ.

4) ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ (ಎನ್‌ಸಿಬಿಇ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ), ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್‌ಐ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ನೌಕರರ ಒಕ್ಕೂಟ (ಐಎನ್‌ಬಿಇಎಫ್), ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ (ಐಎನ್‌ಬಿಒಸಿ), ಬ್ಯಾಂಕ್ ಕಾರ್ಮಿಕರ ರಾಷ್ಟ್ರೀಯ ಸಂಸ್ಥೆ (ಎನ್‌ಒಬಿಡಬ್ಲ್ಯೂ), ಬ್ಯಾಂಕ್ ಅಧಿಕಾರಿಗಳ ರಾಷ್ಟ್ರೀಯ ಸಂಸ್ಥೆ (ನೊಬೊ), ಅಖಿಲ ಭಾರತ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ ಮುಷ್ಕರದಲ್ಲಿ ಭಾಗಿಯಾಗಲಿವೆ.

5) ಕೇಂದ್ರ ಬಜೆಟ್‌ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು.

6) ಸರ್ಕಾರವು ಈಗಾಗಲೇ ಐಡಿಬಿಐ ಬ್ಯಾಂಕ್‌ನ ಬಹುಪಾಲು ಪಾಲನ್ನು ಎಲ್‌ಐಸಿಗೆ 2019 ರಲ್ಲಿ ಮಾರಾಟ ಮಾಡುವ ಮೂಲಕ ಖಾಸಗೀಕರಣಗೊಳಿಸಿದೆ. ಕಳೆದ ನಾಲ್ಕು ವರ್ಷಗಳಲ್ಲಿ 14 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸಿದೆ.

English summary

March 15-16th Bank Strike May Impact Banking Service: Know More

Public sector lender Canara Bank today said that banking services may get affected later this month due to the proposed 2 day strike by several bank unions.
Story first published: Thursday, March 4, 2021, 13:53 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X