"ಎಲ್ರೀ, ರಿಯಲ್ ಎಸ್ಟೇಟ್ ಪಾತಾಳಕ್ಕೆ ತಲುಪಿಹೋಗಿದೆ?" ಎಂಬ ಮಾತನ್ನೇ ಪದೇ ಪದೇ ಕೇಳಿಸಿಕೊಳ್ಳುತ್ತಿದ್ದರೆ ಈ ಸುದ್ದಿ ನಿಮಗೆ ಖಂಡಿತಾ ಅಚ್ಚರಿಯನ್ನು ತರುತ್ತದೆ. ಕೋಲ್ಕತ್ತದ ಸ್ಟಾಕ್ ಬ್ರೋಕರ್ ವೊಬ್ಬರು ಜಡ್ಜಸ್ ಕೋರ್ಟ್ ರಸ್ತೆಯಲ್ಲಿ 100 ಕೋಟಿ ರುಪಾಯಿ ಕೊಟ್ಟು, ಬಂಗಲೆಯೊಂದನ್ನು ಖರೀದಿಸಿದ್ದಾರೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
ವರದಿ ಪ್ರಕಾರ, 31 ಸಾವಿರ ಚದರಡಿ ವಿಸ್ತೀರ್ಣದ ಈ ಬಂಗಲೆಯನ್ನು ಪ್ರಕಾಶ್ ಬೇದ್ ಖರೀದಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಅತಿ ದೊಡ್ಡ ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಇದು ಒಂದು. ಈ ಬಂಗಲೆ 3.734 ಚದರ ಯಾರ್ಡ್ ವ್ಯಾಪಿಸಿದ್ದು, ಅವಿಜಿತ್ ಮಜುಂದಾರ್ ಅವರಿಗೆ ಸೇರಿದ ಬಂಗಲೆ ಇದು. ಟಿಐಎಲ್ ಲಿಮಿಟೆಡ್ ನ ಮಾಜಿ ಕಾರ್ಯ ನಿರ್ವಾಹಕ ನಿರ್ದೇಶಕರು ಮಜುಂದಾರ್.

ಈ ಬಂಗಲೆಯಲ್ಲಿ ಐದು ಬೆಡ್ ರೂಮ್ ಗಳಿವೆ. ಮೂರು ಹಂತಗಳಲ್ಲಿ ಇದ್ದು, ಎಲಿವೇಟರ್ ಇದೆ. ಜತೆಗೆ ಮೂರು ಕಾರು ಗ್ಯಾರೇಜ್ ಹಾಗೂ ಹದಿನಾಲ್ಕು ಮಂದಿ ಅತಿಥಿಗಳಿಗೆ ಪಾರ್ಕಿಂಗ್ ಅವಕಾಶ ಮಾಡಿಕೊಡಬಹುದು. ಈ ವ್ಯವಹಾರವನ್ನು ಯಶಸ್ವಿಯಾಗಿ ಮಾಡಿ ಮುಗಿಸಲು ಮಧ್ಯಸ್ಥಿಕೆ ವಹಿಸಿದ್ದವರು ಅಡ್ವಿನ್ ಛದಾ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications