ಚಿನ್ನ,ಬೆಳ್ಳಿ ಇಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.ಹೌದು, ಸತತ ಒಂದು ವಾರದದಿಂದ ಗಗನಕ್ಕೇರಿದ ಚಿನ್ನ ಇಂದು ಇಳಿಕೆ ಕಂಡಿದೆ. ಆಭರಣ ಪ್ರಿಯರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಬಸವ ಜಯಂತಿ ಹಾಗೂ ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಮಾಡುವವರಿಗೆ ಇಂದು ಸಕಾಲವೆಂದೇ ಹೇಳಬಹುದು. ಬಂಗಾರ ಕೊಳ್ಳಲು ಪ್ಲಾನ್ ಮಾಡಕೊಂಡಿದ್ದವರು ಇಂದು ಚಿನ್ನ ಖರೀದಿ ಮಾಡುವುದು ಉತ್ತಮ.ಇನ್ನು ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಇಳಿಕೆಯಾಗಿದೆ. ಇತ್ತ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ನಿರಾಶೆಯಾಗಿದೆ. ಹಾಗಿದ್ರೆ ಏಪ್ರಿಲ್ 25 ರಂದು ಶುಕ್ರವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು, ಬೆಂಗಳೂರಿನಲ್ಲಿ ಚಿನ್ನ,ಬೆಳ್ಳಿ ಬೆಲೆಗಳು ಯಾವುದೇ ಬದಲಾವಣೆಯನ್ನು ಕಂಡಿಲ್ಲ. ಸದ್ಯ ಬೆಂಗಳೂರಿನಲ್ಲಿ10 ಗ್ರಾಂ 22 ಕ್ಯಾರೆಟ್ ಚಿನ್ನ 89,400ರೂ.ಗಳು ಇದೆ.ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 97,530 ರೂ.ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 6800 ರೂ.ಗಳ ಇಳಿಕೆ ಕಂಡಿದೆ.

ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 8,940 ರೂ. ಇದೆ. ಇನ್ನೂ 10 ಗ್ರಾಂ 22 ಕ್ಯಾರೆಟ್ ಚಿನ್ನ89,400 ರೂ.ಗಳು ಇದೆ.100 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 8,94,000 ರೂ ಇದ್ದು 6,200 ರೂ.ಗಳ ಇಳಿಕೆ ಕಂಡಿದೆ.
24 ಕ್ಯಾರೆಟ್ ಗೋಲ್ಡ್ ರೇಟ್
ಅಪರಂಜಿ 24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,753 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 97,530 ರೂ.ಇದೆ. ನಿನ್ನೆ ಬೆಲೆಗೆ ಹೊಲಿಕೆ ಮಾಡಿದ್ರೆ 680ರೂಗಳ ಇಳಿಕೆಯನ್ನು ಕಂಡಿದೆ.ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ9,75,300 ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 6800ರೂ.ಗಳ ಭಾರೀ ಇಳಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನದ ಬೆಲೆ ಸ್ಥಿರವಾಗಿ ಇದೆ. 1ಗ್ರಾಂ 7,315 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ 73,150 ರೂ.ಗಳು ಇದೆ ಹಾಗೂ 100 ಗ್ರಾಂ18 ಕ್ಯಾರೆಟ್ ಚಿನ್ನಕ್ಕೆ7,31,500 ರೂ. ತಲುಪಿದೆ. ಇಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಗಳು ಇಳಿಕೆ ಕಂಡಿದೆ. ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,00,500
ರೂಪಾಯಿಗಳು ವಾಹಿವಾಟುವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ರೆ 1400ರೂ.ಗಳ ಇಳಿಕೆ ಕಂಡಿದೆ. ಒಂದು ಗ್ರಾಂಗೆ ಬೆಳ್ಳಿಗೆ 100.50 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,005 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 10,050 ರೂ.ಗಳು ವ್ಯಾಪಾರವಿದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡಿದೆ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
24 ಕ್ಯಾರಟ್‌ನ ಒಂದು ಗ್ರಾಂ ಚಿನ್ನವು ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಏರಿಕೆ ಕಂಡಿದ್ದು, ಮಾರ್ಚ್ 30 ಮತ್ತು ಏಪ್ರಿಲ್ 2 ರಂದು ಮಾತ್ರ ಯಥಾಸ್ಥಿತಿಯಲ್ಲಿ ಇತ್ತು. ಮೂರು ದಿನಗಳಿಂದ ಚಿನ್ನದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.ನಿನ್ನೆ ಚಿನ್ನದ ಬೆಲೆ ಇಂದು ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡಿದೆ. ಇಂದು ಇಳಿಕೆ ಕಂಡಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 8,940 ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,753 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,315 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,753 ರೂ ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,315 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,753 ರೂ ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,315 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,753 ರೂ ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,315 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,753 ರೂ ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,315 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 8,940 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,753 ರೂ ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ರಾಯಿಟರ್ಸ್‌ನ ಇತ್ತೀಚಿನ ವರದಿಯ ಪ್ರಕಾರ, "0431 GMT ರಂತೆ ಸ್ಪಾಟ್ ಚಿನ್ನವು ಔನ್ಸ್‌ಗೆ 0.8% ಇಳಿಕೆಯಾಗಿ $3,292.43 ಕ್ಕೆ ತಲುಪಿದೆ. ಏಪ್ರಿಲ್ 22 ರಂದು ಬುಲಿಯನ್ ದಾಖಲೆಯ ಗರಿಷ್ಠ $3,500.05 ಅನ್ನು ತಲುಪಿತು.
ಅತಿ ಹೆಚ್ಚು ಚಿನ್ನ ಖರೀದಿ ಮಾಡುವ ದೇಶವೆಂದರೆ ಭಾರತ.ಯಾಕೆಂದರೆ ಭಾರತೀಯ ಮಹಿಳೆಯರಿಗೆ ಚಿನ್ನವೆಂದರೆ ಅಚ್ಚು-ಮಚ್ಚುದಂತಹ ವಸ್ತುವಾಗಿದೆ. ಹಬ್ಬ ಹರಿದಿನ, ಜಾತ್ರೆ, ಮದುವೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಾಗಿ ಬಂಗಾರ ಕೊಂಡುಕೊಳ್ಳುತ್ತಾರೆ. ಅದರಲ್ಲೂ ಮದುವೆ ಸಮಾರಂಭದಲ್ಲಿ ವರದಕ್ಷಣೆ ಕೊಡಲು ಮಧು ಕಡೆಯವರು ಹೆಚ್ಚಿನ ಆಭರಣಗಳನ್ನು ಖರೀದಿಮಾಡುತ್ತಾರೆ. ಇನ್ನೂ ಹಲವಾರು ಮಂದಿ ಚಿನ್ನವನ್ನು ಹೊಡಿಕೆ ಮಾಡುವುದಕ್ಕಾಗಿ ತಗೆದುಕೊಳ್ಳುತ್ತಾರೆ. ಬಂಗಾರ ಶತಮಾನಗಳಿಂದ ಭಾರತದಲ್ಲಿ ಹೆಚ್ಚಿನ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಲೋಹವು ಸಂಪತ್ತು ಮತ್ತು ಸಮೃದ್ಧಿಯನ್ನು ಸಂಕೇತವಾಗಿದೆ. ಸಾಂಪ್ರದಾಯಿಕ ಆಭರಣಗಳು ಮತ್ತು ಧಾರ್ಮಿಕ ಸಮಾರಂಭಗಳಲ್ಲಿ ಚಿನ್ನದ ಬಳಕೆಯಿಂದ ಭಾರತೀಯ ಸಂಸ್ಕೃತಿಯ ಭಾಗವಾಗವೆಂದೇ ಹೇಳಬಹುದು.
ಯಾವುದೇ ಒಳ್ಳೆಯ ಸಂದರ್ಭದಲ್ಲೂ ಸಹ ಜನರು ಚಿಖರೀದಿ ಮಾಡುತ್ತಾರೆ. ಚಿನ್ನ ಮನೆಯಲ್ಲಿ ಇದ್ದರೆ ಕಷ್ಟದ ಸಮಯಕ್ಕೆ ಸಹಾಯವಾಗುತ್ತದೆ ಎಂಬುದು ಅವರ ನಂಬಿಕೆ.
ಚಿನ್ನ ಬೆಲೆ ಇಳಿಕೆಗೆ ಕಾರಣ
ಅಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ,ಡೊನಾಲ್ಡ್ ಟ್ರಂಪ್ ಸುಂಕ ಯುದ್ದ, ಹೂಡಿಕೆದಾರರ ಅಭಿಪ್ರಾಯ, ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ತರಿಗೆ ಹೆಚ್ಚಳ, ಯುದ್ದದ ಪ್ರಭಾವ,ಡಾಲರ್ ಏರಿಕೆ, ಜಾಗತಿಕ ಪರಿಸ್ಥಿತಿಗಳು ಕಾರಣವಾಗಬಹುದು.
ಚಿನ್ನದ ಬೆಲೆ ಇಳಿಕೆಯಾಗಿರುವುದರಿಮದ ಚಿನ್ನ ಕೊಳ್ಳಲು ಸಕಾಲವೆಂದು ಹೇಳಬಹುದು.


Click it and Unblock the Notifications