ಧಗಧಗನೆ ಉರಿದ ಆಯಿಲ್ ಗೋದಾಮು! 30 ಕೋಟಿ ಮೌಲ್ಯದ ವಸ್ತುಗಳು ಭಸ್ಮ.. ಮಾಜಿ ಸಚಿವರ ಅಳಿಯನಿಗೆ ಸೇರಿದ ಗೋಡೌನ್

ಅದು ನಸುಕಿನ ಜಾವ.. ಎಲ್ಲರೂ ನಿದ್ರೆಯಲ್ಲಿದ್ದ ಸಮಯ.. ನೋಡ ನೋಡುತ್ತಲೇ ಹೊತ್ತಿ ಉರಿದ ಆಯಿಲ್ ಗೋದಾಮು! 10 ಕಿಮೀ ದೂರದವರೆಗೂ ಕಾಣಿಸಿದ ಬೆಂಕಿ ಕೆನ್ನಾಲಿಗೆ. ಸುಮಾರು 30 ಕೋಟಿ ಮೌಲ್ಯದ ವಸ್ತುಗಳು ಭಸ್ಮ! ಹೌದು,ಧಗಧಗನೆ ಆಯಿಲ್ ಗೋದಾಮು ಹೊತ್ತಿ ಉರಿದು 30 ಕೋಟಿ ಮೌಲ್ಯದ ವಸ್ತುಗಳು ಭಸ್ಮವಾಗಿ ಇರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿಯಲ್ಲಿ ನಡೆದಿದೆ.

ವಿದ್ಯುತ್ ಸ್ಪರ್ಶದಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗ ಹೊತ್ತಿ ಉರಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲು ಆಗಿದ್ದೇವೆ.ಆಕಾಶದ ಎತ್ತರಕ್ಕೆ ಬೆಂಕಿ ಚಿಮ್ಮುತ್ತಿದೆ.

ಧಗಧಗನೆ ಉರಿದ ಆಯಿಲ್ ಗೋದಾಮು! 30 ಕೋಟಿ ಮೌಲ್ಯದ ವಸ್ತುಗಳು ಭಸ್ಮ

ಈ ಆಯಿಲ್ ಗೋದಾಮಿ ಮಾಜಿ ಸಚಿವ ಕೃಷ್ಣಪ್ಪ ಎಂಬುವರಿಗೆ ಸೇರಿದ ಗೋಡೌನ್ ಆಗಿದೆ. ಸುಮಾರು 33 ಸಾವಿರ ಚದರ ಅಡಿ ವಿಸ್ತೀರ್ಣವುಳ್ಳ ಬೃಹತ್ ಗೋಡೌನ್ ಬೆಂಕಿಗೆ ಆಹುತಿಯಾಗಿದೆ.

ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ಮಾಡಿದ್ದಾರೆ.

ಈ ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ನೆಲಮಂಗಲ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು ಅದರೂ ಸಹ ಬೆಂಕಿಯ ತೀವ್ರತೆ ಮಾತ್ರ ಕಡಿಮೆಯಾಗಿಲ್ಲ.ಸುತ್ತಲೂ ಹೊಗೆ ಆವರಿಸಿಕೊಂಡಿತ್ತು.

ಇದನ್ನು ಪಕ್ಕದ ಜನರು ಗಮನಿಸಿ ತಕ್ಷಣವೇ ಪೊಲೀಸರಿಗೆ ಮತ್ತು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದರು. ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಕೂಡಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಳ್ಳಲಾಗಿದೆ ಎನ್ನಲಾಗಿದೆ. ಆದರೆ ಪ್ರಕರಣದ ನಿಖರ ಮಾಹಿತಿಗಾಗಿ ತನಿಖೆ ಮುಂದುವರೆದಿದೆ.

ಸುಮಾರು 60 ರಿಂದ 70 ಅಗ್ನಿಶಾಮಕ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಬೆಂಕಿಯ ತೀವ್ರತೆಗೆ ಪ್ರತಿರೋಧ ನೀಡಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಯು ಆಯಿಲ್ ಉತ್ಪನ್ನಗಳಿಗೆ ಸಂಬಂಧಪಟ್ಟ ಕಾರಣದಿಂದ, ಅದು ವೇಗವಾಗಿ ಹರಡಿದ್ದು, ನಿಯಂತ್ರಣದಲ್ಲಿ ತರುವಲ್ಲಿ ಸವಾಲಾಗಿ ಪರಿಣಮಿಸಿದೆ.

ಪೊಲೀಸ್ ಪರಿಶೀಲನೆ
ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ ಆಗಿರುವ ಶಂಕೆ ವ್ಯಕ್ತವಾಗಿದೆ. ಇನ್ನಷ್ಟು ನಿಖರ ಮಾಹಿತಿ ಲಭ್ಯವಾಗಲು ತನಿಖೆ ಮುಂದುವರೆದಿದೆ.

ಸ್ಥಳೀಯರ ಪ್ರಕಾರ, ಘಟನೆಯ ವೇಳೆ ಗೋದಾಮಿನಲ್ಲಿ ಯಾರೂ ಇಲ್ಲದ ಕಾರಣ, ಬೆಂಕಿಯು ನಿಯಂತ್ರಣಕ್ಕೆ ಬರುವ ಮುನ್ನವೇ ಇಡೀ ಗೋದಾಮು ಧಗಧಗ ಹೊತ್ತಿ ಉರಿದಿದೆ. ಬೆಂಕಿ ಕಾಣಿಸಿಕೊಂಡ ಕ್ಷಣದಿಂದಲೇ ಅದಾಗಲೇ ಗೊಬ್ಬರ, ತೈಲ ಉತ್ಪನ್ನಗಳ ವಾಸ್ತವ್ಯ ಇರುವುದರಿಂದ ಬೆಂಕಿ ವೇಗವಾಗಿ ವ್ಯಾಪಿಸಿದೆ.

ಅಗ್ನಿಯ ತೀವ್ರತೆ ಎಷ್ಟು ಮಟ್ಟಿಗೆ ಇತ್ತು ಎಂದರೆ, ಬೆಂಕಿಯ ಹೊಗೆ 10 ಕಿ.ಮೀ ದೂರದಿಂದಲೂ ಕಾಣಿಸಿತು. ಹೊಗೆಯಿಂದಾಗಿ ಪಕ್ಕದ ಪ್ರದೇಶದ ನಿವಾಸಿಗಳು ಬೆಚ್ಚಿಬಿದ್ದು, ತಮ್ಮ ಮನೆಗಳಿಂದ ಹೊರಬಂದು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರವಾದ ಸಂದರ್ಭಗಳು ದೃಶ್ಯ ಕೂಡ ಕಂಡಿ ಬಂದಿತ್ತು. ಆಕಾಶವನ್ನೇ ಆವರಿಸಿದ ದಟ್ಟ ಹೊಗೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

ಘಟನೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ನೆಲಮಂಗಲ, ಪೀಣ್ಯ, ಹೆಬ್ಬಾಳ, ರಾಜಾಜಿನಗರ, ಥಣಿಸಂದ್ರ, ಸುಂಕದಕಟ್ಟೆ ಮತ್ತು ಯಶವಂತಪುರ ಅಗ್ನಿಶಾಮಕ ಠಾಣೆಗಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 60-70 ಮಂದಿ ಅಗ್ನಿಶಾಮಕ ದಳದ ಸದಸ್ಯರು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ ಬಳಿಕ, ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿರುವುದು ತಿಳಿದುಬಂದಿದೆ. ಗೋದಾಮು ಶೆಲ್ ಕಂಪನಿಗೆ ಸೇರಿದದ್ದಾಗಿದ್ದು, ಬಹಳ ಮೌಲ್ಯದ ಆಯಿಲ್ ಮತ್ತು ಸಂಬಂಧಿತ ಉತ್ಪನ್ನಗಳು ಇಲ್ಲಿಗೆ ಸಂಗ್ರಹಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+