Today's gold rate:ಚಿನ್ನದಂತಹ ಸುದ್ದಿ..ಭಾರತದಲ್ಲಿ 24K ಗೋಲ್ಡ್‌ನಲ್ಲಿ ₹18,000 ಇಳಿಕೆ! ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟು?

ಮೇ 12, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ವಾತಾವರಣ ಹಲವು ರೀತಿಯ ಬದಲಾವಣೆ ತರುತ್ತಿದೆ. ಈಗಾಗಲೇ ಷೇರು ಮಾರುಕಟ್ಟೆಯಲ್ಲಿ ಕೆಲವು ಸಕಾರಾತ್ಮಕ ಪರಿಣಾಮ ಬೀರಿದರೆ, ಇನ್ನೂ ಕೆಲವು ವಿಚಾರದಲ್ಲಿ ನಕಾರಾತ್ಮಕ ಪರಿಣಾಮ ಬೀರಿದೆ. ಇದರ ನಡುವೆ ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಕಳೆದ ವಾರವಿಡೀ ಹೂಡಿಕೆದಾರರು ಹಾಗೂ ಚಿನ್ನಪ್ರಿಯರಿಗೆ ಸ್ವಲ್ಪ ಕಹಿ ಉಣಿಸಿದ್ದ ಬಂಗಾರ ಇಂದು ಕೊಂಚ ರಿಲ್ಯಾಕ್ಸ್ ನೀಡಿದೆ. ಹೆಚ್ಚಿನ ಬೆಲೆಯಲ್ಲಿ ಇಳಿಕೆಯಾಗಿದ್ದು, ಚಿನ್ನ ಖರೀದಿ ಮಾಡುವ ಜನರಿಗೆ ಇದೇ ಸೂಕ್ತ ಸಮಯ ಎನ್ನಲಾಗುತ್ತಿದೆ.

Gold rate: ಭಾರತದಲ್ಲಿ 24K ಗೋಲ್ಡ್‌ನಲ್ಲಿ ₹18,000 ಇಳಿಕೆ!

ಇನ್ನು ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವೆಂದರೆ ಭಾರತೀಯರಿಗೆ ಅಚ್ಚು ಮೆಚ್ಚು. ಒಂದು ಹಂತದಲ್ಲಿ ದೊಡ್ಡ ಮಟ್ಟದ ಸಂಪತ್ತು ಎಂತಲೂ ಹೇಳಬಹುದು. ದೊಡ್ಡ ಮಟ್ಟದ ಹೂಡಿಕೆ ಸಾಧನವಾಗಿರುವ ಚಿನ್ನ, ಭಾರತದಲ್ಲಿ ಪ್ರತಿಷ್ಠೆಯ ಸಂಕೇತವೂ ಹೌದು. ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ. ಮೊದಲು ಚಿನ್ನದ ಬೆಲೆಯಲ್ಲಿನ ಬದಲಾವಣೆ ಬಗ್ಗೆ ತಿಳಿದು, ನಂತರ ಈ ಏರಿಳಿತಗಳಿಗೆ ಕಾರಣ ಏನೆಂದು ಓದಿರಿ.

ಭಾರತದಲ್ಲಿ ಇಂದಿನ ಚಿನ್ನದ ಬೆಲೆ:

22 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,880 ಆಗಿದೆ. ನಿನ್ನೆ ಇದರ ಬೆಲೆ ₹9,045 ಆಗಿದ್ದು ನಿನ್ನೆಗಿಂತ ಇಂದು, ₹165 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹88,800 ಆಗಿದೆ. ನಿನ್ನೆಯ ಬೆಲೆ ₹90,450 ಆಗಿದ್ದು ನಿನ್ನೆಗಿಂತ ಇಂದಿಗೆ ₹1,650 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹8,88,000 ರೂ. ಆಗಿದೆ. ನಿನ್ನೆಯ ಬೆಲೆ ₹9,04,500 ಆಗಿದ್ದು ನಿನ್ನೆಗಿಂತ ಇಂದು ₹16,500 ಇಳಿಕೆಯಾಗಿದೆ.

24 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,688 ಆಗಿದೆ. ನಿನ್ನೆ ಇದರ ಬೆಲೆ ₹9,868 ಆಗಿದ್ದು ನಿನ್ನೆಗಿಂತ ಇಂದು, ₹180 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹96,880 ಆಗಿದೆ. ನಿನ್ನೆಯ ಬೆಲೆ ₹98,680 ಆಗಿದ್ದು ನಿನ್ನೆಗಿಂತ ಇಂದಿಗೆ ₹1,800 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,68,800 ಆಗಿದೆ. ನಿನ್ನೆಯ ಬೆಲೆ ₹9,86,800 ಆಗಿದ್ದು ನಿನ್ನೆಗಿಂತ ಇಂದು ₹18,000 ಇಳಿಕೆಯಾಗಿದೆ.

18 ಕ್ಯಾರಟ್ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,266 ಆಗಿದೆ. ನಿನ್ನೆ ಇದರ ಬೆಲೆ ₹7,401 ಆಗಿದ್ದು ನಿನ್ನೆಗಿಂತ ಇಂದು, 135 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹72,660 ಆಗಿದೆ. ನಿನ್ನೆಯ ಬೆಲೆ ₹74,010 ಆಗಿದ್ದು ನಿನ್ನೆಗಿಂತ ಇಂದಿಗೆ 1,350 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹7,26,600 ರೂ. ಆಗಿದೆ. ನಿನ್ನೆಯ ಬೆಲೆ ₹7,40,100 ಆಗಿದ್ದು ನಿನ್ನೆಗಿಂತ ಇಂದು 13,500 ರೂ. ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ:

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲೂ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇಂದು , 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,688 ಆಗಿದ್ದು, ₹165 ಕುಸಿತ ಕಂಡಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,688 ಆಗಿದೆ. ನಿನ್ನೆ ಇದರ ಬೆಲೆ ₹9,868 ಆಗಿದ್ದು ನಿನ್ನೆಗಿಂತ ಇಂದು, ₹180 ಕುಸಿತ ಕಂಡಿದೆ. 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,266 ಆಗಿದೆ. ನಿನ್ನೆ ಇದರ ಬೆಲೆ ₹7,401 ಆಗಿದ್ದು ನಿನ್ನೆಗಿಂತ ಇಂದು, 135 ರೂ. ಕುಸಿತ ಕಂಡಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,880 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,688 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,320 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,880 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,688 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,266 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,895 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,703 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,278 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,880 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,688 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,266 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,880 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,688 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,266 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,880 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,688 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,266 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,880 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,688 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,266 ಆಗಿದೆ.

ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,885 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,693 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,270 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,885 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,693 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,270 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹97.90 ಆಗಿದೆ. ನಿನ್ನೆ ಈ ಬೆಲೆ ₹99 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1.10 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹979 ಆಗಿದೆ. ನಿನ್ನೆ ಈ ಬೆಲೆ ₹990 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹11 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹9,790 ಆಗಿದೆ. ನಿನ್ನೆ ಈ ಬೆಲೆ ₹9,900 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹110 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹97,900 ಆಗಿದೆ. ನಿನ್ನೆ ಈ ಬೆಲೆ ₹99,000 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹1,100 ರೂ. ಇಳಿಕೆಯಾಗಿದೆ.

ಸ್ಪಾಟ್ ಗೋಲ್ಡ್ ವಿವರ:

ರಾಯಿಟರ್ಸ್ ನೀಡಿರುವ ವರದಿ ಪ್ರಕಾರ ಮೇ 12ರಂದು, ಶೇ. 1.4 ರಷ್ಟು ಇಳಿಕೆಯಾಗಿದ್ದು, ಇಂದು 0432 GMT ವೇಳೆಗೆ ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ಗೆ $3,277.34 ವಹಿವಾಟು ನಡೆಸಿದೆ. ಹಾಗೆಯೇ , ಅಮೆರಿಕದ ಚಿನ್ನದ ಭವಿಷ್ಯದ ಒಪ್ಪಂದಗಳು ಶೇ. 1.9ರಷ್ಟು ಇಳಿದು $3,281.70ಗೆ ತಲುಪಿವೆ.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+