ಕಳೆದ ವಾರದಲ್ಲಿ ಭಾರಿ ಖುಷಿ ನೀಡಿದ್ದ ಚಿನ್ನದ ಬೆಲೆ ಈ ವಾರದಲ್ಲಿ ಭಾರಿ ಕಹಿ ಉಣಿಸುತ್ತಿದೆ. ಇಂದು ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕೇಳಿದರೆ ಶಾಕ್ ಆಗುತ್ತದೆ. ಭಾರಿ ಏರಿಕೆ ಕಂಡಿರುವ ಹಳದಿ ಲೋಕ ಹೂಡಿಕೆದಾರರನ್ನು ಆತಂಕಕ್ಕೀಡು ಮಾಡಿದೆ. ಚಿನ್ನವನ್ನು ಕೊಳ್ಳುವುದಕ್ಕಿಂತ ಅದರ ಬೆಲೆ ಕೇಳಿದರೇನೆ ಬೆವರಿಳಿಯುವಷ್ಟು ಏರಿಕೆ ಕಂಡಿದೆ. ಚಿನ್ನವು ಒಂದು ಆರ್ಥಿಕ ಸಂಪತ್ತು ಎಂದು ಜನರು ಹೂಡಿಕೆ ಮಾಡುತ್ತಾರೆ. ಆದರೆ ಚಿನ್ನ ಕೊಳ್ಳುವುದಕ್ಕೇ ಆರ್ಥಿಕ ಸಮಸ್ಯೆ ಎದುರಾಗಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಗಮನಿಸಿದರೆ, ಚಿನ್ನವನ್ನು ಕೊಳ್ಳುವುದೇ ಒಂದು ದೊಡ್ಡ ಆರ್ಥಿಕ ಸಮಸ್ಯೆ ಎನ್ನಬಹುದಾಗಿದೆ. ಅತಿ ಚುರುಕಾಗಿ ಏರುತ್ತಿರುವ ಚಿನ್ನದ ಬೆಲೆ, ಕೆಲವೇ ದಿನಗಳಲ್ಲಿ ಪ್ರತಿ ಗ್ರಾಂಗೆ 10 ಸಾವಿರ ತಲುಪುವುದರಲ್ಲಿ ಅನುಮಾನವಿಲ್ಲ. ಈಗಾಗಲೇ ಗಡಿಗೆ ಬಂದು ನಿಂತಿರುವ ಚಿನ್ನ, ಹೂಡಿಕೆದಾರರ ಎದೆ ಮೇಲೆ ತಾಂಡವವಾಡುತ್ತಿದೆ.

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ. ಹಾಗಾದರೆ ಇಂದು ಯಾವ್ಯಾವ ಕ್ಯಾರಟ್ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ತಿಳಿಯುವುದಾದರೆ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,025 ಇದೆ.ಅಂದರೆ ನಿನ್ನೆ ₹8,775 ಆಗಿದ್ದು ಇಂದು ₹250 ಹೆಚ್ಚಳವಾಗಿದೆ. 22 ಕ್ಯಾರಟ್‌ನ ಚಿನ್ನದಬೆಲೆ 10 ಗ್ರಾಂಗೆ 90 ಸಾವಿರದ 250 ರೂ. ಇದೆ. ಅಂದರೆ ನಿನ್ನೆ 87 ಸಾವಿರದ 750 ರೂ. ಆಗಿದ್ದು ಇಂದು ₹2,500 ಹೆಚ್ಚಳವಾಗಿದೆ. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 2 ಸಾವಿರದ 500 ರೂ. ಆಗಿದೆ. ಅಂದರೆ ನಿನ್ನೆ 8 ಲಕ್ಷ 77 ಸಾವಿರದ 500 ರೂ. ಆಗಿದ್ದು ಇಂದು ₹25,000 ಹೆಚ್ಚಳವಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿಇಂದಿನ ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹9,846 ಇದೆ. ಅಂದರೆ ನಿನ್ನೆ ₹9,573 ಆಗಿದ್ದು ಇಂದು ₹273 ಹೆಚ್ಚಳವಾಗಿದೆ. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 98 ಸಾವಿರದ 460 ರೂ. ಇದೆ. ಅಂದರೆ ನಿನ್ನೆ 95 ಸಾವಿರದ 730 ರೂ. ಆಗಿದ್ದು ಇಂದು ₹2,730 ಹೆಚ್ಚಳವಾಗಿದೆ. ಹಾಗೆಯೇ 24 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9 ಲಕ್ಷದ 84 ಸಾವಿರದ 600 ರೂ. ಆಗಿದೆ. ಅಂದರೆ ನಿನ್ನೆ 9 ಲಕ್ಷ 57 ಸಾವಿರದ 300 ರೂ. ಆಗಿದ್ದು ಇಂದು ₹27,300 ಹೆಚ್ಚಳವಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
18 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹7,384 ಇದೆ. ಅಂದರೆ ನಿನ್ನೆಯ ಬೆಲೆ ₹7,180 ಆಗಿದ್ದು ಇಂದು ಪ್ರತಿ ಗ್ರಾಂಗೆ ₹204 ಏರಿಕೆಯಾಗಿದೆ. 18 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 73 ಸಾವಿರದ 840 ರೂ. ಇದೆ. ಅಂದರೆ ನಿನ್ನೆಯ ಬೆಲೆ 71 ಸಾವಿರದ 800 ರೂ. ಆಗಿದ್ದು ಇಂದು ಪ್ರತಿ ಗ್ರಾಂಗೆ ₹2,040 ಏರಿಕೆಯಾಗಿದೆ. ಹಾಗೆಯೇ ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7 ಲಕ್ಷ 38 ಸಾವಿರದ 400 ರೂ. ಆಗಿದೆ. ಅಂದರೆ ನಿನ್ನೆಯ ಬೆಲೆ 7 ಲಕ್ಷದ 18 ಸಾವಿರ ರೂ. ಆಗಿದ್ದು ಇಂದು ₹20,400 ಏರಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,025 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,846 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,460 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,025 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,846 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,384 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,040 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,861 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,397 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,025 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,846 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,384 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,025 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,846 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,384 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,025 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,846 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,384 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,025 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,846 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,384 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,025 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,846 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,384 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,030 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,851 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,389 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,030 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,851 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,389 ಆಗಿದೆ.
ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು ಒಂದು ಗ್ರಾಂ ಬೆಳ್ಳಿಗೆ ಇದ್ದು ₹96.90 ನಿನ್ನೆ ಈ ಬೆಲೆ ₹97 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹0.10ರಷ್ಟು ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿಗೆ ₹969 ಇದ್ದು ನಿನ್ನೆ ಈ ಬೆಲೆ ₹970 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹1 ರಷ್ಟು ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿಗೆ ₹9,690 ಇದ್ದು ನಿನ್ನೆ ಈ ಬೆಲೆ ₹9,700 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹10 ರಷ್ಟು ಇಳಿಕೆಯಾಗಿದೆ. ಒಂದು ಕೆ.ಜಿ ಬೆಳ್ಳಿಗೆ ₹96,900 ಇದ್ದು ನಿನ್ನೆ ಈ ಬೆಲೆ ₹97,000 ಆಗಿತ್ತು. ಅಂದರೆ ನಿನ್ನೆಗಿಂತ ಇಂದಿಗೆ ₹100 ರಷ್ಟು ಇಳಿಕೆಯಾಗಿದೆ.
ಸ್ಪಾಟ್ ಗೋಲ್ಡ್ ವಿವರ:
ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಇಂದು ( ಮೇ 6) ಸ್ಪಾಟ್ ಗೋಲ್ಡ್ ಬೆಲೆಯು 0.7% ಏರಿಕೆ ಕಂಡಿದೆ. ಅಂದರೆ ಇದು ಇಂದು $3,357.63 ಪ್ರತಿ ಔನ್ಸ್‌ಗೆ ವ್ಯವಹಾರ ನಡೆಸಿದೆ. ಅದರಂತೆಯೇ ಯುಎಸ್‌ನ ಫ್ಯೂಚರ್ ಗೋಲ್ಡ್ ಕೂಡ 1.3% ಏರಿಕೆ ಕಂಡಿದ್ದು, ಇದು $3,366.10 ಪ್ರತಿ ಔನ್ಸ್‌ಗೆ ವ್ಯವಹಾರ ನಡೆಸಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.


Click it and Unblock the Notifications