ಭಾರತದ ಷೇರು ಮಾರುಕಟ್ಟೆಯ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಕಳೆದ ವಾರ(ಸೆ. 18ರ ತನಕ) 6 ಕಂಪನಿಗಳ ಮೌಲ್ಯ ಭಾರಿ ಕುಸಿತ ಕಂಡಿದ್ದು, 4 ಕಂಪನಿಗಳು ಮೌಲ್ಯ ಹೆಚ್ಚಿಸಿಕೊಂಡಿವೆ. 6 ಕಂಪನಿಗಳು 2,00,280.75 ಕೋಟಿ ರು ಕಳೆದುಕೊಂಡಿವೆ.
ಕಳೆದ ವಾರ ಎಲ್ಲಾ ಟಾಪ್ 10 ಕಂಪನಿಗಳ ಪೈಕಿ ದೇಶದ ಅತಿದೊಡ್ಡ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್, ಅತಿ ದೊಡ್ಡ ಐಟಿ ಸಂಸ್ಥೆಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್ ಡಿ ಎಫ್ ಸಿ ಬ್ಯಾಂಕ್, ಹಿಂದೂಸ್ತಾನ್ ಯೂನಿಲಿವರ್, ಇನ್ಫೋಸಿಸ್ ಹಾಗೂ ಎಚ್ ಡಿ ಎಫ್ ಸಿ ನಷ್ಟ ಅನುಭವಿಸಿವೆ. ಐಸಿಐಸಿಐ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಅದಾನಿ ಟಾನ್ಸ್ ಮಿಷನ್ ಹಾಗೂ ಬಜಾಜ್ ಫೈನಾನ್ಸ್ ಲಾಭ ಗಳಿಸಿವೆ.
ಕಳೆದ ವಾರ, ಬೆಂಚ್‌ಮಾರ್ಕ್ 30 ಷೇರು ಬಿಎಸ್‌ಇ ಸೆನ್ಸೆಕ್ಸ್ 952.35 ಪಾಯಿಂಟ್‌ಗಳು ಅಥವಾ ಶೇಕಡಾ 1.59 ಏರಿಕೆ ಕಂಡಿದೆ. ಕಳೆದ ವಾರದಲ್ಲಿ ಹೂಡಿಕೆದಾರರು ಸುರಕ್ಷೆಯ ವಿಧಾನ ಅನುಸರಿಸಿ, ಹೆಚ್ಚಿನ ಹೂಡಿಕೆಗೆ ಮುಂದಾದರೂ 6 ಕಂಪನಿಗಳು ನಷ್ಟ ಅನುಭವಿಸಿವೆ. ಯಾವ ಕಂಪನಿ ಮೌಲ್ಯ ಎಷ್ಟಾಗಿದೆ ಎಂಬ ವಿವರ ಮುಂದೆ ಓದಿ..
ಯಾವ ಕಂಪನಿಗಳಿಗೆ ನಷ್ಟ
ರಷ್ಯಾ- ಉಕ್ರೇನ್ ಯುದ್ಧದ ನಡುವೆ ಜಾಗತಿಕ ಮಾರುಕಟ್ಟೆ ಏರಿಳಿತ ಕಾಣುತ್ತಿದ್ದು, ಜಾಗತಿಕವಾಗಿ ಅನೇಕ ದೇಶಗಳಲ್ಲಿನ ಬ್ಯಾಂಕ್ ಬಡ್ಡಿದರ ಏರಿಕೆ, ಆಮದು -ರಫ್ತು ನಿರ್ಬಂಧ ಮುಂತಾದ ವಿದ್ಯಮಾನ ಎಲ್ಲದರ ಪರಿಣಾಮ ಸ್ಥಳೀಯ ಮಾರುಕಟ್ಟೆಯಲ್ಲಿ ಭಾರಿ ವ್ಯತ್ಯಾಸ ಕಂಡಿವೆ. ರಿಲಯನ್ಸ್ ಇಂಡಸ್ಟ್ರೀಸ್, ಅತಿ ದೊಡ್ಡ ಐಟಿ ಸಂಸ್ಥೆಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್ ಡಿ ಎಫ್ ಸಿ ಬ್ಯಾಂಕ್, ಹಿಂದೂಸ್ತಾನ್ ಯೂನಿಲಿವರ್, ಇನ್ಫೋಸಿಸ್ ಹಾಗೂ ಎಚ್ ಡಿ ಎಫ್ ಸಿ ನಷ್ಟ ಅನುಭವಿಸಿವೆ. ಅದಾನಿ ಸಂಸ್ಥೆ ಟಾಪ್ 10ರಲ್ಲಿ ಉಳಿದುಕೊಂಡಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ
ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ಮೌಲ್ಯ 46,852.27 ಕೋಟಿ ರು ಕುಸಿತ ಕಂಡು 16,90,865.41 ಕೋಟಿ ರು ತಲುಪಿದೆ. ಅತಿ ದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ 76,346.11 ಕೋಟಿ ರು ಇಳಿಕೆ ಕಂಡು 11,00,880.49 ಕೋಟಿ ರು ಮೌಲ್ಯಕ್ಕೆ ತಲುಪಿದೆ. ಇನ್ಫೋಸಿಸ್ ಸಂಸ್ಥೆ 55,831.53 ಕೋಟಿ ರು ಇಳಿಕೆ ಕಂಡು 5,80,312.32 ಕೋಟಿ ರು ಮೌಲ್ಯಕ್ಕೇರಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಎಚ್ ಡಿ ಎಫ್ ಸಿ ಬ್ಯಾಂಕ್ 2,614.72 ರು ಇಳಿಕೆ ಕಂಡು 8,31,239.46 ಕೋಟಿ ರು ತಲುಪಿದೆ. ಎಚ್ ಡಿ ಎಫ್ ಸಿ ಮೌಲ್ಯ 4,620.81 ಕೋಟಿ ರು ಕುಗ್ಗಿ 4,36,880.78 ಕೋಟಿ ರು ಆಗಿದೆ. ಇದೇ ವೇಳೆ ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 7,273.55 ಕೋಟಿ ರು ವ್ಯತ್ಯಾಸ ಕಂಡು 5,01,206.19 ಕೋಟಿ ರು ತಲುಪಿದೆ.
ಅದಾನಿ ಕಂಪನಿ
ಕಳೆದ ಮಂಗಳವಾರ ಆಗಸ್ಟ್ 30ರಂದು ಷೇರುಪೇಟೆಗೆ ಎಂಟ್ರಿ ಕೊಟ್ಟ ಅದಾನಿ ಟ್ರಾನ್ಸ್ ಮಿಷನ್ ಟಾಪ್ 10 ಅತಿ ಹೆಚ್ಚು ಮೌಲ್ಯಯುತ ಕಂಪನಿಗಳ ಪಟ್ಟಿಯಲ್ಲಿ ಉಳಿದುಕೊಂಡಿದೆ. ಕಳೆದ ವಾರ ಅದಾನಿ ಕಂಪನಿ 17,719.6 ಕೋಟಿ ರು ಹೆಚ್ಚಳ ಕಂಡು 4,56,292.28 ಕೋಟಿ ರು ತಲುಪಿದೆ.
ಬಜಾಜ್ ಫೈನಾನ್ಸ್ ಸಂಸ್ಥೆ
ಹಿಂದೂಸ್ತಾನ್ ಯೂನಿಲಿವರ್ ಸಂಸ್ಥೆ ಮೌಲ್ಯ 14,015.31 ಕೋಟಿ ರು ಇಳಿಕೆ ಕಂಡು 5,94,058.91 ಕೋಟಿ ರು ತಲುಪಿದೆ. ಬಜಾಜ್ ಫೈನಾನ್ಸ್ ಸಂಸ್ಥೆ 6,435.71 ಕೋಟಿ ರು ಏರಿಕೆ ಕಂಡು 4,41,348.83 ಕೋಟಿ ರು ಮುಟ್ಟಿದೆ. ಐಸಿಐಸಿಐ ಬ್ಯಾಂಕ್ 5,286.92 ಕೋಟಿ ರು ಹೆಚ್ಚಳ ಕಂಡು 6,33,110.48 ಕೋಟಿ ರು ತಲುಪಿದೆ
ಟಾಪ್ 10 ಕಂಪನಿಗಳು
ಟಾಪ್ 10 ಕಂಪನಿಗಳು: ರಿಲಯನ್ಸ್ ಇಂಡಸ್ಟ್ರೀಸ್ ಮತ್ತೊಮ್ಮೆ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್ ಡಿ ಎಫ್ ಸಿ ಬ್ಯಾಂಕ್,ಐಸಿಐಸಿಐ ಬ್ಯಾಂಕ್, ಹಿಂದೂಸ್ತಾನ್ ಯೂನಿಲಿವರ್, ಇನ್ಫೋಸಿಸ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಅದಾನಿ ಟ್ರಾನ್ಸ್ ಮಿಷನ್, ಬಜಾಜ್ ಫೈನಾನ್ಸ್. ಹಾಗೂ ಎಚ್ ಡಿ ಎಫ್ ಸಿ
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications