For Quick Alerts
ALLOW NOTIFICATIONS  
For Daily Alerts

ಕಳೆದ ವಾರದ ಟಾಪ್ 10 ಮೌಲ್ಯ: 9 ಸಂಸ್ಥೆಗೆ ನಷ್ಟ, ಏರ್‌ಟೆಲ್‌ಗೆ ಲಾಭ

|

ಭಾರತದ ಷೇರು ಮಾರುಕಟ್ಟೆಯ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ 9 ಕಂಪನಿಗಳಿಂದ ಒಟ್ಟಾರೆ 2,62,146.32 ಕೋಟಿ ರು ಮೌಲ್ಯ ನಷ್ಟವಾಗಿದೆ. ಕಳೆದ ವಾರದಲ್ಲಿ ಒಟ್ಟಾರೆ 9 ಕಂಪನಿಗಳು ನಷ್ಟ ಅನುಭವಿಸಿದ್ದು, ಭಾರ್ತಿ ಏರ್ ಟೆಲ್ ಮಾತ್ರ ಲಾಭ ಗಳಿಸಿದೆ. ಬಜಾಜ್ ಫೈನಾನ್ಸ್ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಭಾರಿ ನಷ್ಟ ಅನುಭವಿಸಿದೆ.

 

ಬಿಎಸ್ಇಯಲ್ಲಿ 30 ಷೇರುಗಳು ಸೆನ್ಸೆಕ್ಸ್ 2,528.868 ಅಂಕ ಅಥವಾ ಶೇ 4.24 ರಷ್ಟು ಇಳಿಕೆ ಕಂಡಿತ್ತು. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಹೆಚ್ಚು ಕಂಪನಿ ಮೌಲ್ಯ ಕಳೆದುಕೊಂಡಿವೆ. ಟಾಪ್ 10 ರಲ್ಲಿ 9 ಕಂಪನಿಗಳ ಮೌಲ್ಯ ಬದಲಾಗಿದೆ. ಹಬ್ಬದ ರಜೆಗಳಿಗೂ ಮುನ್ನ ಷೇರುಪೇಟೆಯಲ್ಲಿ ಹೆಚ್ಚು ವಹಿವಾಟು ಕಂಡು ಬಂದಿರಲಿಲ್ಲ.

ಕೊರೊನಾವೈರಸ್ ಹೊಸ ರೂಪಾಂತರಿ ಅಲೆಯಿಂದ ಷೇರುಪೇಟೆ ವಹಿವಾಟು ಭಾರಿ ನಷ್ಟ ಅನುಭವಿಸುತ್ತಿದೆ. ಟಾಪ್ ಕಂಪನಿಗಳು ಭಾರಿ ನಷ್ಟ ಅನುಭವಿಸಿವೆ. ಭಾರ್ತಿ ಏರ್ ಟೆಲ್ ಮಾತ್ರ ಟಾಪ್ 10 ಪಟ್ಟಿಯಲ್ಲಿ ಲಾಭ ಗಳಿಸಿದ ಸಾಧನೆ ಮಾಡಿದೆ. ಕಳೆದ ವಾರ ಹೆಚ್ಚಿನ ಲಾಭವನ್ನು ಟಾಪ್ ಕಂಪನಿಗಳು ಕಂಡಿಲ್ಲ. ರಜೆಗಳ ನಡುವೆ ಷೇರುಪೇಟೆಯಲ್ಲಿ ಹೆಚ್ಚು ವಹಿವಾಟು ಹೆಚ್ಚಾಗಿದ್ದರೂ ಟಾಪ್ ಕಂಪನಿಗಳು ಭಾರಿ ನಷ್ಟ ಅನುಭವಿಸಿವೆ. ಯಾವ ಕಂಪನಿ ಮೌಲ್ಯ ಏರಿಕೆಯಾಗಿದೆ ಹಾಗೂ ಯಾವ ಕಂಪನಿ ಮೌಲ್ಯ ಕುಸಿದಿದೆ ಎಂಬ ವಿವರ ಮುಂದೆ ಓದಿ..

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆ ಮೌಲ್ಯ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆ ಮೌಲ್ಯ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆ ಮೌಲ್ಯ 38,440.66 ಕೋಟಿ ರು ಕುಸಿತ ಕಂಡು 15,30,109.51 ರು ಆಗಿದೆ. ಎರಡನೇ ಅತಿ ದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ ಇನ್ಫೋಸಿಸ್ ಕಳೆದ ಒಂದು ವಾರದಲ್ಲಿ 37,950.03 ಕೋಟಿ ರು ಮೌಲ್ಯ ಇಳಿಸಿಕೊಂಡು 7,10,925.34 ಕೋಟಿ ರು ಮೌಲ್ಯ ಹೊಂದಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 29,852.83 ಕೋಟಿ ರು ಇಳಿಸಿಕೊಂಡು 4,19,902.97 ಕೋಟಿ ರು ಮೌಲ್ಯಕ್ಕಿಳಿದಿದೆ. ಐಸಿಐಸಿಸಿ ಬ್ಯಾಂಕ್ ಮೌಲ್ಯ 28,567.03 ಕೋಟಿ ರು ಇಳಿಕೆ ಕಂಡು 5,01,039.91 ಕೋಟಿ ರು ಆಗಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್ 26,873.77 ಕೋಟಿ ರು ಇಳಿಕೆ ಕಂಡು 8,25,658.59 ಕೋಟಿ ರು ತಲುಪಿದೆ. ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ 14,778.93 ಕೋಟಿ ರು ಇಳಿಕೆ ಕಂಡು 5,48,570.82 ಕೋಟಿ ರು ಮೌಲ್ಯ ಉಳಿಸಿಕೊಂಡಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್
 

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(ಟಿಸಿಎಸ್) 11,097.15 ಕೋಟಿ ರು ಕುಸಿತ ಕಂಡು 12,74,563.64 ಕೋಟಿ ರು ಮೌಲ್ಯ ಕಂಡಿದೆ. ಭಾರ್ತಿ ಏರ್ ಟೆಲ್ ಮೌಲ್ಯ 12, 769.55 ಕೋಟಿ ರು ಏರಿಕೆ ಕಂಡು 4,05,009.55 ಕೋಟಿ ರು ಗೇರಿದೆ.

ಎಚ್‌ಡಿಎಫ್‌ಸಿ 33,067.68 ಕೋಟಿ ರು ಮೌಲ್ಯ ಇಳಿಸಿಕೊಂಡು 4,96,168.98 ಕೋಟಿ ರು ತಲುಪಿದೆ. ಬಜಾಜ್ ಫೈನಾನ್ಸ್ 41,518.24 ಕೋಟಿ ರು ಇಳಿಸಿಕೊಂಡು 4,10,670.50 ಕೋಟಿ ರುಗೆ ಕುಸಿತ ಕಂಡಿದೆ.

ಒಟ್ಟಾರೆ, ಟಾಪ್ 10 ಕಂಪನಿಗಳು

ಒಟ್ಟಾರೆ, ಟಾಪ್ 10 ಕಂಪನಿಗಳು

ರಿಲಯನ್ಸ್ ಇಂಡಸ್ಟ್ರೀಸ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್, ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬಜಾಜ್ ಫೈನಾನ್ಸ್ ಹಾಗೂ ಭಾರ್ತಿ ಏರ್ ಟೆಲ್.

English summary

Mcap of nine of top-10 most valued firms erode by over Rs 4.24 lakh crore, Bharti Airtel only gainer

The market valuation of nine of the top-10 most valued companies eroded by Rs 2,62,146.32 crore last week. Bharti Airtel only gainer
Story first published: Sunday, November 28, 2021, 15:02 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X