ಭಾರತದ ಷೇರು ಮಾರುಕಟ್ಟೆಯ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಕಳೆದ ವಾರ(ಜೂನ್ 25ರ ತನಕ) 9 ಕಂಪನಿಗಳ ಮೌಲ್ಯ ಬದಲಾಗಿದ್ದು, ಒಟ್ಟಾರೆ ಮಾರುಕಟ್ಟೆ ಚೇತರಿಕೆ ಕಂಡಿದೆ.
ಕಳೆದ ವಾರ ಎಲ್ಲಾ ಟಾಪ್ 10 ಕಂಪನಿಗಳ 9 ಕಂಪನಿಗಳಿಂದ ಒಟ್ಟಾರೆ 2.51 ಲಕ್ಷ ಕೋಟಿ ಮೌಲ್ಯ ಹೆಚ್ಚಳವಾಗಿದೆ. ದೇಶದ ಅತಿದೊಡ್ಡ ಸಾಫ್ಟ್ ವೇರ್ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(ಟಿಸಿಎಸ್) ಹೆಚ್ಚು ಲಾಭ ಗಳಿಸಿದೆ.
ರಷ್ಯಾ- ಉಕ್ರೇನ್ ಯುದ್ಧದ ನಡುವೆ ಜಾಗತಿಕ ಮಾರುಕಟ್ಟೆ ಏರಿಳಿತ ಕಾಣುತ್ತಿದ್ದು, ಆರ್ ಬಿಐ ರೆಪೋ ದರ ಏರಿಕೆ, ಜಾಗತಿಕವಾಗಿ ಅನೇಕ ದೇಶಗಳಲ್ಲಿನ ಬ್ಯಾಂಕ್ ಬಡ್ಡಿದರ ಏರಿಕೆ, ಆಮದು -ರಫ್ತು ನಿರ್ಬಂಧ, ಜಿ7, ಬ್ರಿಕ್ಸ್, ಜಿ20 ಸಮ್ಮೇಳನ ಮುಂತಾದ ವಿದ್ಯಮಾನ ಎಲ್ಲದರ ಪರಿಣಾಮ ಸ್ಥಳೀಯ ಮಾರುಕಟ್ಟೆಯಲ್ಲಿ ಭಾರಿ ವ್ಯತ್ಯಾಸ ಕಂಡಿವೆ. ಎರಡು ವಾರದಿಂದ ಭಾರಿ ಲಾಭ ಗಳಿಸಿದ್ದ ರಿಲಯನ್ಸ್ ಸಂಸ್ಥೆ ಕಳೆದ ವಾರ ನಷ್ಟ ಅನುಭವಿಸಿದ ಏಕೈಕ ಕಂಪನಿ ಎನಿಸಿಕೊಂಡಿದೆ.
ಕಳೆದ ವಾರ, ಬೆಂಚ್‌ಮಾರ್ಕ್ 30 ಷೇರು ಬಿಎಸ್‌ಇ ಸೆನ್ಸೆಕ್ಸ್1,367 ಪಾಯಿಂಟ್‌ಗಳು ಅಥವಾ ಶೇಕಡಾ 2.66 ಏರಿಕೆ ಕಂಡಿತ್ತು. ಕಳೆದ ವಾರದಲ್ಲಿ ಹೂಡಿಕೆದಾರರು ಸುರಕ್ಷೆಯ ವಿಧಾನ ಅನುಸರಿಸಿ, ಹೆಚ್ಚಿನ ಹೂಡಿಕೆಗೆ ಮುಂದಾದರು. ಯಾವ ಕಂಪನಿ ಮೌಲ್ಯ ಎಷ್ಟಾಗಿದೆ ಎಂಬ ವಿವರ ಮುಂದೆ ಓದಿ..
ಟಾಟಾ ಕನ್ಸಲ್ಟೆನ್ಸಿ ಸರ್ವೀಸ್
ಅತಿ ದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ 74,534.87 ಕೋಟಿ ರು ಏರಿಕೆ ಕಂಡು 12,04,907.32 ಕೋಟಿ ರು ಮೌಲ್ಯಕ್ಕೇರಿದೆ. ಇನ್ಫೋಸಿಸ್ ಸಂಸ್ಥೆ 22,888.49 ಕೋಟಿ ರು ಹೆಚ್ಚಳ ಕಂಡು 6,06,734.50 ಕೋಟಿ ರು ಮೌಲ್ಯಕ್ಕೇರಿದೆ.
ಎಚ್ ಡಿ ಎಫ್ ಸಿ ಬ್ಯಾಂಕ್
ಖಾಸಗಿ ವಲಯದ ಪ್ರಮುಖ ಬ್ಯಾಂಕುಗಳಾದ ಎಚ್ ಡಿ ಎಫ್ ಸಿ, ಎಚ್ ಡಿ ಎಫ್ ಸಿ ಬ್ಯಾಂಕ್ 35,427.18 ಕೋಟಿ ರು ಏರಿಕೆ ಕಂಡು 7,51,800.31 ಕೋಟಿ ರು ತಲುಪಿದೆ. ಎಚ್ ಡಿ ಎಫ್ ಸಿ ಮೌಲ್ಯ 24,747.87 ಕೋಟಿ ರು ತಗ್ಗಿ 3,97,190.50 ಕೋಟಿ ರು ಆಗಿದೆ. ಐಸಿಐಸಿಐ ಬ್ಯಾಂಕು 17,813.78 ಕೋಟಿ ರು ಏರಿಕೆ ಕಂಡು 4,96,354.36 ಕೋಟಿ ರು ಮೌಲ್ಯಕ್ಕೇರಿದೆ.
ಪ್ರಮುಖ ಟೆಲಿಕಾಂ ಸಂಸ್ಥೆ ಭಾರ್ತಿ ಏರ್ ಟೆಲ್
ಪ್ರಮುಖ ಟೆಲಿಕಾಂ ಸಂಸ್ಥೆ ಭಾರ್ತಿ ಏರ್ ಟೆಲ್ 15,185.45 ಕೋಟಿ ರು ಹೆಚ್ಚಳ ಕಂಡು 3,68,789.63 ಕೋಟಿ ರು ಆಗಿದೆ. ಇದೇ ವೇಳೆ ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್ ಬಿಐ 11,914.36 ಕೋಟಿ ರು ವ್ಯತ್ಯಾಸ ಕಂಡು 4,05,489.73 ಕೋಟಿ ರು ತಲುಪಿದೆ.
ಹಿಂದೂಸ್ತಾನ್ ಯೂನಿಲಿವರ್ ಸಂಸ್ಥೆ ಮೌಲ್ಯ
ಹಿಂದೂಸ್ತಾನ್ ಯೂನಿಲಿವರ್ ಸಂಸ್ಥೆ ಮೌಲ್ಯ 44,888.95 ಕೋಟಿ ರು ಹೆಚ್ಚಳ ಕಂಡು 5,41,240.10 ಕೋಟಿ ರು ತಲುಪಿದೆ. ಇದೇ ವೇಳೆ ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ) ದ ಮೌಲ್ಯ 4,427.5ಕೋಟಿ ರು ಏರಿಕೆಯಾಗಿ 4,18,525.10 ಕೋಟಿ ರು ತಲುಪಿದೆ. ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ಮೌಲ್ಯ 59,901.07 ಕೋಟಿ ರು ಕುಸಿತ ಕಂಡು 16,91,785.45 ಕೋಟಿ ರು ತಲುಪಿದೆ.
ಟಾಪ್ 10 ಕಂಪನಿಗಳು
ಟಾಪ್ 10 ಕಂಪನಿಗಳು: ರಿಲಯನ್ಸ್ ಇಂಡಸ್ಟ್ರೀಸ್ ಮತ್ತೊಮ್ಮೆ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್ ಡಿ ಎಫ್ ಸಿ ಬ್ಯಾಂಕ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್, ಐಸಿಐಸಿಐ ಬ್ಯಾಂಕ್, ಎಲ್ ಐ ಸಿ, ಎಸ್ ಬಿಐ, ಎಚ್ ಡಿ ಎಫ್ ಸಿ ಹಾಗೂ ಭಾರ್ತಿ ಏರ್ ಟೆಲ್.
More From GoodReturns

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

8th Pay Commission: 8ನೇ ವೇತನ ಆಯೋಗದಿಂದ ಮಹತ್ವದ ಅಪ್ಡೇಟ್; ಪ್ರಶ್ನಾವಳಿ ಸಲ್ಲಿಸಲು ಮಾ.31ರ ವರೆಗೂ ಅವಕಾಶ

Flipkart CFO: ಐಪಿಒಗೆ ಮುನ್ನ ಫ್ಲಿಪ್ಕಾರ್ಟ್ನಲ್ಲಿ ದೊಡ್ಡ ಬದಲಾವಣೆ: CFO ಸ್ಥಾನ ತ್ಯಜಿಸಿದ ವೆಂಕಟರಾಮನ್



Click it and Unblock the Notifications