ಮುಂಬೈ, ಆಗಸ್ಟ್ 28: ಭಾರತದ ಷೇರು ಮಾರುಕಟ್ಟೆಯ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಕಳೆದ ವಾರ (ಆಗಸ್ಟ್ 28ರ ತನಕ) 7 ಕಂಪನಿಗಳ ಮೌಲ್ಯ ಭಾರಿ ಕುಸಿತ ಕಂಡಿದ್ದು, ಒಟ್ಟಾರೆ 1,54,477.38 ಕೋಟಿ ರು ಇಳಿಕೆ ಕಂಡಿದೆ.
ಕಳೆದ ವಾರ ಎಲ್ಲಾ ಟಾಪ್ 10 ಕಂಪನಿಗಳ ಪೈಕಿ ಅತಿ ದೊಡ್ಡ ಐಟಿ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಹಾಗೂ ಎರಡನೇ ಅತಿ ದೊಡ್ಡ ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ಅತಿ ಹೆಚ್ಚು ನಷ್ಟ ಅನುಭವಿಸಿವೆ. ರಿಲಯನ್ಸ್ ಹಾಗೂ ಐಸಿಐಸಿಐ ಹೆಚ್ಚು ಲಾಭ ಗಳಿಸಿವೆ.
ಜಾಗತಿಕವಾಗಿ ಅನೇಕ ದೇಶಗಳಲ್ಲಿನ ಆರ್ಥಿಕ ಪರಿಸ್ಥಿತಿ, ಆಮದು -ರಫ್ತು ನಿರ್ಬಂಧ, ಜಿಎಸ್ಟಿ ಸಭೆ, ಸಮ್ಮೇಳನ ನಂತರ ಮುಂತಾದ ವಿದ್ಯಮಾನ ಎಲ್ಲದರ ಪರಿಣಾಮ ಸ್ಥಳೀಯ ಮಾರುಕಟ್ಟೆಯಲ್ಲಿ ಭಾರಿ ವ್ಯತ್ಯಾಸವಾಗಿದೆ.
ರಜೆದಿನಗಳಿಂದ ತುಂಬಿದ್ದ ಕಳೆದ ವಾರದಲ್ಲಿ 30 ಷೇರುಗಳ ಬಾಂಬೆ ಮಾರುಕಟ್ಟೆ ಎಕ್ಸ್‌ಚೇಂಜ್‌ನಲ್ಲಿ ಸೆನ್ಸೆಕ್ಸ್ 812.28ಅಂಕ ಅಥವಾ ಶೇಕಡ 1.36 ರಷ್ಟು ಇಳಿಕೆಯನ್ನು ಕಂಡಿದೆ. ಯಾವ ಕಂಪನಿ ಮೌಲ್ಯ ಎಷ್ಟಾಗಿದೆ ಎಂಬ ವಿವರ ಮುಂದೆ ಓದಿ..
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್
ದೇಶದ ಅತಿ ದೊಡ್ಡ ಐಟಿ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಮಾರುಕಟ್ಟೆ ಮೌಲ್ಯವು ರೂಪಾಯಿ 59,862.08 ಕೋಟಿರು ಇಳಿಕೆ ಕಂಡು 11,78,818.29 ಕೋಟಿ ರು ತಲುಪಿದೆ. ಎರಡನೇ ಅತಿದೊಡ್ದ ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ಕಂಪನಿಯ ಮಾರುಕಟ್ಟೆ ಮೌಲ್ಯ31,789.31ಕೋಟಿ ರು ಇಳಿಕೆ ಕಂಡು 6,40,351.57ಕೋಟಿ ರುಗೇರಿದೆ.
ಅತಿ ಹೆಚ್ಚು ಮೌಲ್ಯಯುತ ಕಂಪನಿ
ಅತಿ ಹೆಚ್ಚು ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆ 3,500.56 ಕೋಟಿ ರು ಏರಿಕೆ ಕಂಡು 17,71,645.33 ಕೋಟಿ ರುಗೆ ಇಳಿಕೆಯಾಗಿದೆ. ಭಾರತದ ಅತೀ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಾರುಕಟ್ಟೆ ಮೌಲ್ಯವು 3,034.37 ಕೋಟಿ ರು ಏರಿಕೆಯಾಗಿ 4,67,471.16 ಕೋಟಿ ರೂಪಾಯಿನಂತೆ ಇದೆ.
ಬಜಾಜ್ ಫೈನಾನ್ಸ್ ಮಾರುಕಟ್ಟೆ ಮೌಲ್ಯ
ಬಜಾಜ್ ಫೈನಾನ್ಸ್ ಮಾರುಕಟ್ಟೆ ಮೌಲ್ಯವು ರೂಪಾಯಿ 14,430.4 ಕೋಟಿ ರೂಪಾಯಿ ಇಳಿಕೆ ಕಂಡು 4,27,605.59 ಕೋಟಿ ರು ತಲುಪಿದೆ. ಇನ್ನು ಹಿಂದೂಸ್ತಾನ್ ಯೂನಿಲಿವರ್ ಮಾರುಕಟ್ಟೆ ಮೌಲ್ಯವು 14,814.18 ಕೋಟಿ ರೂಪಾಯಿ ಇಳಿಕೆಯಾಗಿ 6,04,079.91 ಕೋಟಿ ರು ಗೆ ತಲುಪಿದೆ.
ಎಚ್‌ಡಿಎಫ್‌ಸಿ ಬ್ಯಾಂಕ್
ಎಚ್‌ಡಿಎಫ್‌ಸಿ ಬ್ಯಾಂಕ್‌ನ ಈ ಹಿಂದಿನ ಮಾರುಕಟ್ಟೆ ಮೌಲ್ಯದಲ್ಲಿ 16,090.67ಕೋಟಿ ರೂಪಾಯಿ ಕಳೆದುಕೊಂಡು 8,13,952.05 ಕೋಟಿ ರೂಪಾಯಿ ತಲುಪಿದೆ. ಎಚ್‌ಡಿಎಫ್‌ಸಿ ಮಾರುಕಟ್ಟೆ ಮೌಲ್ಯ 13,031.62 ಕೋಟಿ ರೂಪಾಯಿ ಇಳಿಕೆಯಾಗಿ 4,34,644.36 ಕೋಟಿ ರು ಗೆ ತಲುಪಿದೆ. ಐಸಿಐಸಿಐ ಬ್ಯಾಂಕ್ ಸಂಸ್ಥೆ ಮೌಲ್ಯ 523.02 ಕೋಟಿ ರು ಏರಿಕೆ ಕಂಡು 6,06,330.11ಕೋಟಿ ರು ಆಗಿದೆ.
ಅತೀ ದೊಡ್ಡ ಜೀವ ವಿಮಾ ಸಂಸ್ಥೆ
ಈ ನಡುವೆ ಸತತವಾಗಿ ಕುಸಿತ ಕಾಣುತ್ತಿದ್ದ ಭಾರತದ ಅತೀ ದೊಡ್ಡ ಜೀವ ವಿಮಾ ಸಂಸ್ಥೆ, ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮಾರುಕಟ್ಟೆ ಮೌಲ್ಯವು ಏರಿಕೆಯಾಗಿತ್ತು. ಆದರೆ, ಕಳೆದ ವಾರ ಮತ್ತೆ ಕುಸಿತ ಕಂಡು ಎಲ್‌ಐಸಿ ಮಾರುಕಟ್ಟೆ ಮೌಲ್ಯವು ಸುಮಾರು 4,459.12 ಕೋಟಿ ರು ಏರಿಕೆಯಾಗಿ 4,29,309.22 ಕೋಟಿ ರೂಪಾಯಿಗೆ ತಲುಪಿದೆ.
ಟಾಪ್ 10 ಕಂಪನಿಗಳು
ಟಾಪ್ 10 ಕಂಪನಿಗಳು: ರಿಲಯನ್ಸ್ ಇಂಡಸ್ಟ್ರೀಸ್ ಮತ್ತೊಮ್ಮೆ ಅತಿ ಹೆಚ್ಚು ಮಾರುಕಟ್ಟೆ ಮೌಲ್ಯ ಹೊಂದಿರುವ ಸಂಸ್ಥೆ ಎನಿಸಿಕೊಂಡಿದೆ. ಅದರ ಬಳಿಕ ಟಿಸಿಎಸ್, ಎಚ್‌ಡಿಎಫ್‌ಸಿ ಬ್ಯಾಂಕ್, ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್, ಹಿಂದೂಸ್ತಾನ್ ಯೂನಿಲಿವರ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ,ಎಲ್‌ಐಸಿ ಹಾಗೂ ಬಜಾಜ್ ಫೈನಾನ್ಸ್ ಟಾಪ್ 10 ಕಂಪನಿಗಳು ಆಗಿದೆ


Click it and Unblock the Notifications