ಬೆಂಗಳೂರು, ಸೆಪ್ಟೆಂಬರ್ 22: ಬೆಂಗಳೂರು ಹೆಚ್ಚಾಗಿ ತಂತ್ರಜ್ಞಾನದ ದೃಷ್ಟಿಯಿಂದ ಒಂದಲ್ಲಾ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತದೆ. ಕಳೆದ ಕೆಲ ವರ್ಷಗಳಿಂದ ಭಾರತದ ಡಿಜಿಟಲ್ ಪಾವತಿಯೂ ಕ್ರಾಂತಿಯಾಗಿ ಬದಲಾಗಿದೆ. ಅದರಲ್ಲೂ ಬೆಂಗಳೂರು ಒಂದು ಹೆಜ್ಜೆ ಮುಂದೆ ಇದೆ. ಇಲ್ಲಿನ ಕಾರ್ಪೋರೇಟ್ ಸಂಸ್ಕೃತಿ, ಐಟಿ ಉದ್ಯಮ, ಟ್ರಾಫಿಕ್, ಗಗನಕ್ಕೇರುತ್ತಿರುವ ಬಾಡಿಗೆಗಳು ಮತ್ತು ನಾವೀನ್ಯತೆ ಮತ್ತು ಸೃಜನಶೀಲತೆಗಳ ಬಗ್ಗೆ ಸಾಮಾಜಿಕ ತಾಲತಾಣದಲ್ಲಿ ಸದ್ದು ಮಾಡುತ್ತಿರುತ್ತದೆ. ಇಲ್ಲಿ ಲಕ್ಷ ಲಕ್ಷ ಪಡೆಯುವ ಐಟಿ ಉದ್ಯೋಗಿಗಳು ಮಾತ್ರವೇ ಅಲ್ಲ, ಆಟೋ ಓಡಿಸುವ ಚಾಲಕರು ಕೂಡ ಸ್ಮಾರ್ಟ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಐಟಿ ಕೆಲಸಗಾರರಿಂದ ಹಿಡಿದು ಸಾಮಾನ್ಯ ಜನರವರೆಗೆ ಉನ್ನತ ಮಟ್ಟದ ಡಿಜಿಟಲ್ ಸಾಕ್ಷರತೆಗಾಗಿ ಹೆಸರುವಾಸಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ, ಆಗ್ಗಾಗೆ ಜನ ತಮ್ಮ 'ಪೀಕ್ ಬೆಂಗಳೂರು' ಕ್ಷಣಗಳ ಬಗ್ಗೆ ಪೋಸ್ಟ್ ಮಾಡುತ್ತಾರೆ, ನಗರ ಮತ್ತು ಸುತ್ತಮುತ್ತಲಿನ ತಂತ್ರಜ್ಞಾನ-ಬುದ್ಧಿವಂತ ವ್ಯಕ್ತಿಗಳನ್ನು ಭೇಟಿ ಮಾಡುತ್ತಾರೆ. ಇಂತಹದ್ದೇ ಒಂದು ಘಟನೆ ನಡೆದಿದ್ದು ಇದನ್ನು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಹಂಚಿಕೊಂಡಿದ್ದು, ಇದು ಈಗ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರವು ಆಟೋ ಚಾಲಕರೊಬ್ಬರು ಸ್ಮಾರ್ಟ್ ವಾಚ್ ನಲ್ಲಿ ಕ್ಯೂ ಆರ್ ಕೋಡ್ ಮೂಲಕ ಹಣ ಸ್ವೀಕರಿಸುತ್ತಿರುವುದಾಗಿದೆ.

ಸ್ಮಾರ್ಟ್ ವಾಚ್ ನಲ್ಲಿ UPI ಕ್ಯೂಆರ್ ಕೋಡ್
ಬೆಂಗಳೂರಿನ ಆಟೋ ಚಾಲಕರಿಗೂ ಡಿಜಿಟಲ್ ಇಂಡಿಯಾ ಮ್ಯಾಜಿಕ್ ಮಾಡಿದೆ. ಹೈಟೆಕ್ ತಂತ್ರಜ್ಞಾನ ಬಳಸಿಕೊಂಡಿದ್ದು, ಯುಪಿಐ ಪಾವತಿಗೆ ಸಾಮಾನ್ಯವಾಗಿ ಆಟೋ ಚಾಲಕರು ತಮ್ಮ ಆಟೋದಲ್ಲಿ ಕ್ಯೂಆರ್ ಕೋಡ್ ಇರುವ ಕಾಗದವನ್ನು ಅಂಟಿಸಿರುತ್ತಾರೆ. ಇನ್ನು ಕೆಲವರು ಕ್ಯೂಆರ್ ಕೋಡ್ ಪ್ರತಿಯನ್ನು ಲ್ಯಾಮಿನೇಷನ್ ಮಾಡಿಸಿಕೊಂಡು ಇರಿಸಿಕೊಂಡಿರುತ್ತಾರೆ. ಆದರೆ ಈ ಆಟೋ ಚಾಲಕ ಮಾತ್ರ ತಂತ್ರಜ್ಞಾನವನ್ನು ಸಮರ್ಥವಾಗಿ ಸದುಪಯೋಗ ಪಡಿಸಿಕೊಂಡಿದ್ದು, ಬಾಡಿಗೆ ಪಾವತಿಯನ್ನು ಮಾಡುವ ತನ್ನ ಗ್ರಾಹಕರಿಕೆ ಸ್ಮಾರ್ಟ್ ವಾಚ್ ನಲ್ಲಿರುವ ಕ್ಯೂ ಆರ್ ತೋರಿಸಿ ಪೇಮೆಂಟ್ ತೆಗೆದುಕೊಳ್ಳುತ್ತಾರೆ. ಈ ಫೋಟೋ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ.
"Auto anna pulled out the #peakBengaluru move" ಎಂಬ ಶೀರ್ಷಿಕೆಯ ನೆಟ್ಟಿಗರೊಬ್ಬರು ನೀಡಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ಇದು ಕೆಲವೇ ಗಂಟೆಗಳಲ್ಲಿ 5.95 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ.
ಅನೇಕರು ಆಟೋ ಚಾಲಕನ ಬುದ್ಧಿವಂತಿಕೆಗೆ ಬೆರಗಾಗಿದ್ದಾರೆ.ಬಿಜೆಪಿ ದೇಶವನ್ನು ನೇರವಾಗಿ 2060ಕ್ಕೆ ಕೊಂಡೊಯ್ದಿದೆ ಎಂದು ಹಲವರು ಕಮೆಂಟ್ ಮಾಡಿದ್ದರೆ, ಮತ್ತೆ ಕೆಲ ಕಾಂಗ್ರೆಸ್ ಬೆಂಬಲಿಗರು ಇಂದಿರಾ ಗಾಂಧಿ, ರಾಜೀವ್ ಗಾಂಧಿಯ ತಂತ್ರಜ್ಞಾನ ಕೊಡುಗೆಯಿಂದ ಇದು ಸಾಧ್ಯವಾಗಿದೆ ಎಂದಿದ್ದಾರೆ. ಮತ್ತೋರ್ವ "ಇದರೊಂದಿಗೆ, ಬೆಂಗಳೂರು ಯಾಕೆ ಭಾರತದ ಟೆಕ್ ಸಿಟಿಯಾಗಿದೆ ಎಂಬುದನ್ನು ನೀವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು" ಎಂದು ಹೈಲೈಟ್ ಮಾಡಿದ್ದಾರೆ.
"ಈ ಆಟೋ ಡ್ರೈವರ್ ತುಂಬಾ ಸ್ಮಾರ್ಟ್ ಆಗಿ ಕಾಣುತ್ತಾನೆ, ಇದು ಡಿಜಿಟಲ್ ಇಂಡಿಯಾದ ಮ್ಯಾಜಿಕ್." ಎಂದು ಓರ್ವ ಕಮೆಂಟ್ ಮಾಡಿದ್ರೆ, ಮತ್ತೋರ್ವ "ಆಟೋ ಅಣ್ಣಾ ನಂಬರ್ ವನ್. ನಾವೆಲ್ಲರೂ:ಝೀರೋ." ಎಂದು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬ ಬಳಕೆದಾರರು "ಆಟೋ ಅಣ್ಣಾ ಹೆಚ್ಚು ಡಿಜಿಟಲ್ ಆಗುತ್ತಿದ್ದಾರೆ!" ಎಂದಿದ್ರೆ "ಆಧುನಿಕ-ದಿನದ ಸಂದಿಗ್ಧತೆಗಳಿಗೆ ಅತ್ಯಾಧುನಿಕ ವಿಧಾನಗಳ ಅಗತ್ಯವಿದೆ ಎಂದು ಕಮೆಂಟ್ ಮಾಡಿದ್ದಾರೆ.
ಕಾಂಗ್ರೆಸ್ ಟೀಕಿಸಿದ ಬಿಜೆಪಿ
ಈ ಘಟನೆ ವೈರಲ್ ಆಗುತ್ತಿದ್ದಂತೆಯೇ ಬೆಂಗಳೂರಿನ ಆಟೋ ಚಾಲಕನ ಫೋಟೋವನ್ನು ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ ಈ ಸುದ್ದಿಯನ್ನು ಒಮ್ಮೆ ನೋಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಸೂಚಿಸಿದೆ. ಆಟೋ ಚಾಲಕ ಬಾಡಿಗೆ ಪಾವತಿಗೆ ಯುಪಿಐ ಕ್ಯೂಆರ್ ಕೋಡ್ ಆಟೋದಲ್ಲಿ ಅಂಟಿಸಿಲ್ಲ, ಬದಲಾಗಿ ತನ್ನ ಸ್ಮಾರ್ಟ್‌ವಾಚ್‌ನಲ್ಲಿ ಯುಪಿಐ ಕ್ಯೂಆರ್ ಕೋಡ್ ತೋರಿಸಿ ಪಾವತಿ ಪಡೆದುಕೊಳ್ಳುತ್ತಾನೆ. ಇದು ಭಾರತದಲ್ಲಾಗಿರುವ ಡಿಜಿಟಲ್ ಕ್ರಾಂತಿಗೆ ಸಾಕ್ಷಿ ಎನ್ನುವ ಮೂಲಕ ಕಾಂಗ್ರೆಸ್ ಗೆ ಬಿಜೆಪಿ ಪಕ್ಷವು ಕಾಳೆಲೆದಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಸಾವರಿನ್ ಗೋಲ್ಡ್ ಬಾಂಡ್ ಹೂಡಿಕೆದಾರರೇ, ಇಂದೇ ನಗದೀಕರಿಸಿಕೊಳ್ಳಿ ನಿಮ್ಮ ಲಾಭ!



Click it and Unblock the Notifications