ಬೆಂಗಳೂರು ಮೆಟ್ರೋ ವಿಸ್ತರಣೆ: ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಸಿಗಲಿದೆಯೇ ಬೂಸ್ಟ್.!?

ಏಷ್ಯಾದಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಬೆಂಗಳೂರು ಅಗ್ರ ಸ್ಥಾನದಲ್ಲಿದೆ. ಇದರೊಂದಿಗೆ ಜನದಟ್ಟಣೆ , ಸಂಚಾರದಟ್ಟಣೆಯು ಬೆಳೆಯುತ್ತಿದೆ. ಹೀಗಾಗಿ ರಾಜ್ಯ ರಾಜಧಾನಿಯನ್ನು ಆಮೂಲಾಗ್ರವಾಗಿ ಅಭಿವೃದ್ದಿಡಿಸಿ ಜಗತ್ತಿನ ಅತ್ಯುತ್ತಮ ನಗರಗಳಲ್ಲಿ ಒಂದಾಗಿ ರೂಪಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ.

ಬೆಂಗಳೂರಿನಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಸಮಸ್ಯೆ ಅಂದ್ರೆ ಟ್ರಾಫಿಕ್.. ಈಗಾಗಲೇ ಬೆಂಗಳೂರು ನಗರದಲ್ಲಿ ಮೆಟ್ರೋ ಓಡಾಡುತ್ತಿದ್ದರೂ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ದೊರಕಿಲ್ಲ. ಮತ್ತೊಂದೆಡೆ ಬೆಂಗಳೂರು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇದೆ. ಹೊರವಲಯವಾಗಿರುವ ಬಿಡದಿ, ನೆಲಮಂಗಲ, ಹೊಸಕೋಟೆ ಬೆಂಗಳೂರಿನಲ್ಲಿ ಲೀನವಾಗುತ್ತ ಬೆಳೆಯುತ್ತಿದೆ. ಇದೇ ಕಾರಣದಿಂದ ಬೆಂಗಳೂರು ಹೊರವಲಯಕ್ಕೂ ʻನಮ್ಮ ಮೆಟ್ರೋʼ ವಿಸ್ತರಿಸುವ ಬಗ್ಗೆ ಯೋಚನೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.

 ಹೊಸಕೋಟೆ, ಬಿಡದಿ, ನೆಲಮಂಗಲಕ್ಕೂ ಮೆಟ್ರೋ.!?

ಬೆಳಗಾವಿಯಲ್ಲಿ ಗುರುವಾರ ನಡೆದ ಅಧಿವೇಶನದಲ್ಲಿ ಕೃಷ್ಣರಾಜಪುರ ಹಾಗೂ ಹಳೇ ಮದ್ರಾಸ್‌ ರಸ್ತೆಯಲ್ಲಿ ಆಗುತ್ತಿರುವ ವಿಪರೀತ ಟ್ರಾಫಿಕ್‌ ಜಾಮ್‌ನ ಬಗ್ಗೆ ಶಾಸಕ ಶರತ್ ಬಚ್ಚೇಗೌಡ ಅವರು ವಿಷಯ ಪ್ರಸ್ತಾಪಿಸಿದ್ದು, ಇದಕ್ಕೆ ಡಿಸಿಎಮ್ ಡಿ.ಕೆ ಶಿವಕುಮಾರ್ ಅವರು ಉತ್ತರಿಸಿ ಬೆಂಗಳೂರಿನ ವಿವಿಧ ಭಾಗಕ್ಕೆ ಮೆಟ್ರೋ ವಿಸ್ತರಣೆ ಮಾಡುವ ಬಗ್ಗೆ ಅವರು ಸೂಚ್ಯ ಮಾಹಿತಿಯನ್ನು ನೀಡಿದ್ದಾರೆ. "ಬೆಂಗಳೂರು ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ" ಎಂದು ಡಿಕೆಶಿ ಹೇಳಿದ್ದಾರೆ.

ಟ್ರಾಫಿಕ್ ವಿಚಾರವಾಗಿ ಮಾತನಾಡಿದ ಶರತ್ ಅವರು, ಜನಸಾಮಾನ್ಯರು ಬಹಳ ಹೋರಾಟ ಮಾಡುತ್ತಿದ್ದಾರೆ. ಬೆಂಗಳೂರು ಕೂಡ ವಿಪರೀತವಾಗಿ ಬೆಳೆಯುತ್ತಿದೆ. ಸಾಮಾನ್ಯ ರೈಲಿನಲ್ಲಿ ಕೋಲಾರದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ದಿನ ನಿತ್ಯ ಸಂಚರಿಸುತ್ತಾರೆ. ಐಟಿ ಕಾರಿಡಾರ್ ಬಹುತೇಕ ಹೊಸಕೋಟೆ ಮುಟ್ಟಿದೆ. ಹೀಗಾಗಿ ಹೊರವಲಯಕ್ಕೂ ಮೆಟ್ರೋ ಅತ್ಯವಶ್ಯಕತೆ ಇದೆ" ಎಂದು ತಿಳಿಸಿದ್ರು.

ಇದಕ್ಕೆ ಪ್ರತಿಕ್ರಿಯಿಸಿ"ಮೆಟ್ರೋ ಮಾರ್ಗ ವಿಸ್ತರಣೆ ವಿಷಯವನ್ನು ನಾನು ಈಗಾಗಲೇ ಯೋಜನೆಯಲ್ಲಿ ಸೇರಿಸಿ ವಿಸ್ತೃತ ಸಮೀಕ್ಷೆ ಮಾಡಿಸುತ್ತಿದ್ದೇನೆ. ನಮ್ಮ ಸರ್ಕಾರ ಹಾಗೂ ಮೆಟ್ರೋ ಸಂಸ್ಥೆ ಅವರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿದೆ. ಹೊಸಕೋಟೆ ಜತೆಗೆ ಬಿಡದಿ, ನೆಲಮಂಗಲದವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಯೋಜನೆ ಸಿದ್ಧಡಿಸಲು ವರದಿ ರೂಪಿಸಲಾಗುತ್ತಿದೆ. ನಾವು ನಿಮ್ಮ ಮನವಿಯನ್ನು ಪರಿಗಣಿಸಿದ್ದೇವೆ" ಎಂದು ತಿಳಿಸಿದ್ದಾರೆ.

ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆಯಾದ್ರೆ ಮೊತ್ತ ಮೊದಲನೆಯದಾಗಿ ವೈಯಕ್ತಿಕ ವಾಹನಗಳ ಬಳಕೆ ಕಡಿಮೆಯಾಗುವುದರಿಂದ, ರಸ್ತೆಗಳಲ್ಲಿನ ಟ್ರಾಫಿಕ್ ಜಾಮ್ ಗಮನಾರ್ಹವಾಗಿ ಕಡಿಮೆಯಾಗುತ್ತದೆ. ಜೊತೆಗೆ ಈ ಭಾಗದ ಜನರಿಗೆ ಬಹಳ ಅನುಕೂಲವಾಗಲಿದ್ದು, ಪ್ರಮುಖವಾಗಿ ಇಲ್ಲಿನ ಆರ್ಥಿಕ ಬೆಳವಣಿಗೆಯ ಭೂಮಿಯ ಮೌಲ್ಯ ಹೆಚ್ಚಳವಾಗಲಿದೆ. ಎಲ್ಲೆಲ್ಲಿ ಮೆಟ್ರೋ ನಿಲ್ದಾಣಗಳು ಬರಲಿದೆಯೋ ಅಲ್ಲಿನ ಸುತ್ತಲಿನ ಭೂಮಿಯ ಮೌಲ್ಯ ಗಣನೀಯವಾಗಿ ಹೆಚ್ಚಾಗುವುದು.ಜೊತೆಗೆ ಮೆಟ್ರೋ ನಿರ್ಮಾಣ ಮತ್ತು ನಿರ್ವಹಣೆಯಿಂದ ಹಲವಾರು ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ. ಮೆಟ್ರೋ ಸಂಪರ್ಕದಿಂದಾಗಿ ಹೆಚ್ಚಿನ ಸಂಖ್ಯೆಯ ಜನರು ಈ ಪ್ರದೇಶಗಳಿಗೆ ಬರುವ ಸಾಧ್ಯತೆ ಇದೆ. ಇದು ವ್ಯಾಪಾರಸ್ಥರಿಗೆ ಹೆಚ್ಚಿನ ಗ್ರಾಹಕರನ್ನು ತಂದುಕೊಡುತ್ತದೆ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+