ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ.ಹಲವು ದಿನಗಳಿಂದ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇತ್ತು.ಇದಕೆಲ್ಲಾ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು,ಬೆಂಗಳೂರು ಮಂದಿಗೆ ನಿರಾಳವಾಗಿದೆ.ಹೌದು, ಸದ್ಯಕ್ಕೆ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಮಾಡಲ್ಲ ಎಂದು ಮೂಲಗಳು ಮಾಹಿತಿಯನ್ನು ತಿಳಿಸಿವೆ.
ಈಗಲೇ ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿದ್ದ ಬಿಎಂಆರ್ಸಿಎಲ್ ಇದೀಗ ಆ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಟಿಕೆಟ್ ದರ ಟೆನ್ಷನ್ ದರ ಕಡಿಮೆ ಮಾಡಿದೆ. ಮೆಟ್ರೋ ಟಿಕೆಟ್ ದರ ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರ ವರದಿ ಕೇಳಲಾಗಿತು.ಅಂದ್ರೆ ಅದಕ್ಕೆ ಅನುಮತಿ ಕೊಟ್ಟಿಲ್ಲ ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಈ ವರ್ಷ ಏರಿಕೆಯಾಗುವ ಅನುಮಾನವಿದೆ ಎಂದು ಮೂಲಗಳು ಮಾಹಿತಿಯನ್ನು ತಿಳಿಸಿವೆ.

ಟಿಕೆಟ್ ದರ ಏರಿಕೆ ಸಂಬಂಧ ಬಿಎಂಆರ್ಸಿಎಲ್ ಸಭೆ
ಟಿಕೆಟ್ ದರ ಏರಿಕೆ ಸಂಬಂಧಿಸಿದಂತೆ ಬಿಎಂಆರ್ಸಿಎಲ್ ಕಳೆದ ವಾರದಲ್ಲಿ ಸಭೆಯನ್ನು ನಡೆಸಲಾಗಿತು. ಸಮಿತಿ ನೀಡಿದ ಶಿಫಾರಸ್ಸು ಆಧಾರದ ಮೇಲೆ ಮೆಟ್ರೋ ಟಿಕೆಟ್ ದರ ಶೇ.45ರಷ್ಟು ದರ ಹೆಚ್ಚಳ ಮಾಡಲು ನಿರ್ಧರವನ್ನು ಮಾಡಿತು. ಆದರೆ ಇದಕ್ಕೆಲ್ಲಾ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿಲ್ಲ.
ಟಿಕೆಟ್ ದರದ ಬಗ್ಗೆ ಕೇಂದ್ರ ಸರ್ಕಾರ ಹೇಳಿದ್ದೇನು?
ಈಗಾಗಲೇ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳವಾಗಿದೆ. ಈ ಸಂದರ್ಭದಲ್ಲಿ ಮತ್ತೆ ಮೆಟ್ರೋ ಟಿಕೆಟ್ ದರ ಕೂಡ ಹೆಚ್ಚಳವಾದರೆ ಜನರಿಗೆ ಹೆಚ್ಚಿನ ಹೊರೆ ಆಗಲಿದೆ ಎಂದು ಹೇಳಿದೆ. ಅಲ್ಲದೆ, ಪ್ರಯಾಣ ದರ ಏರಿಕೆ ನಿರ್ಧಾರ ಅಂತಿಮಗೊಳಿಸುವುದಕ್ಕೂ ಮುನ್ನ ವರದಿ ಸಲ್ಲಿಸುವಂತೆ ಕೇಂದ್ರ ತಂಡ ಸೂಚನೆ ನೀಡಿದೆ. ಹೀಗಾಗಿ ವರದಿ ಸಲ್ಲಿಕೆಗೆ ಬಿಎಂಆರ್ಸಿಎಲ್ ಸಮಯ ಕೇಳಿದೆ.
ಕೇಂದ್ರದಿಂದ ತಾತ್ಕಾಲಿಕ ತಡೆ
ಬಿಎಂಆರ್ಸಿಎಲ್ ಫೆಬ್ರವರಿ1 ರಿಂದ ಮೆಟ್ರೋ ಪ್ರಯಾಣ ದರ ಏರಿಕೆಗೆ ಮುಂದಾಗಿತ್ತು. ಅದಕ್ಕಾಗಿ ಪ್ರಯಾಣಿಕರಿಂದ ಅಭಿಪ್ರಾಯಗಳು, ಸಲಹೆಗಳನ್ನೂ ಸ್ವೀಕರ ಮಾಡಲಾಗಿದೆ. ಪ್ರಯಾಣಿಕರಿಂದ ದರ ಏರಿಕೆಗೆ ವಿರೋಧ ವ್ಯಕ್ತವಾಗಿದ್ದರೂ ನಿರ್ವಹಣೆ ನೆಪವೊಡ್ಡಿ ದರ ಏರಿಕೆ ಬಿಎಂಆರ್ಸಿಎಲ್ ಮುಂದಾಗಿತ್ತು. ಇದೀಗ ಬಿಎಂಆರ್ಸಿಎಲ್ ನಿರ್ಧಾರಕ್ಕೆ ಕೇಂದ್ರದಿಂದ ತಾತ್ಕಾಲಿಕ ತಡೆಯೊಡ್ಡಲಾಗಿದೆ.
ನಮ್ಮ ಮೆಟ್ರೋ ಈ ಹಿಂದೆ 2017 ರಲ್ಲಿ ಪ್ರಯಾಣ ದರ ಹೆಚ್ಚಳ ಮಾಡಿತ್ತು. ಬಳಿಕ ಪ್ರಯಾಣ ದರ ಪರಿಷ್ಕರಣೆ ಮಾಡುವ ಪ್ರಯತ್ನ ಮಾಡಿರಲಿಲ್ಲ. ಆದರೆ, ಇದೀಗ ಪ್ರಯಾಣ ದರ ಏರಿಕೆಗೆ ಮುಂದಾಗಿದ್ದ ಬಿಎಂಆರ್ಸಿಎಲ್ಗೆ ಶಾಕ್ ಆಗಿದೆ.
ಈಗೆಷ್ಟಿದೆ ಮೆಟ್ರೋ ಟಿಕೆಟ್ ದರ?
ಸದ್ಯ ಬೆಂಗಳೂರು ಮೆಟ್ರೋದಲ್ಲಿ ಟಿಕೆಟ್ಗೆ ಕನಿಷ್ಠ ದರ 10 ರೂ. ಹಾಗೂ ಗರಿಷ್ಠ ದರ 60 ರೂ. ಇದೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಕಾರಣದಿಂದ ಪ್ರಯಾಣ ದರ ಏರಿಕೆಗೆ ನಿಗಮ ಮುಂದಾಗಿತ್ತು.
ಮೆಟ್ರೋ ಸ್ಟೇಷನ್ಗಳ ಪಾರ್ಕಿಂಗ್ ಪ್ರದೇಶಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿರುವ ಬಗ್ಗೆ ಈಗಲೇ ಆರೋಪಗಳು ಕೇಳಿ ಬರುತ್ತೇವೆ. ಬೆಂಗಳೂರಿನ 66 ಮೆಟ್ರೋ ನಿಲ್ದಾಣಗಳ ಪೈಕಿ 33 ನಿಲ್ದಾಣಗಳಲ್ಲಿಪಾರ್ಕಿಂಗ್ ವ್ಯವಸ್ಥೆ ಇದೆ. ಒಟ್ಟಾರೆಯಾಗಿ ಸುಮಾರು 11000 ದ್ವಿಚಕ್ರವಾಹನ ಮತ್ತು 1500ಕ್ಕೂ ಹೆಚ್ಚು ಕಾರುಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಬಿಎಂಆರ್ಸಿಎಲ್ ಒದಗಿಸುತ್ತಿದೆ ಎಂದು ಮಾಹಿತಿಯನ್ನು ತಿಳಿಸಿವೆ.
ಇವರೇ ಶುಲ್ಕ ನಿಗದಿ ಸಮಿತಿಯಲ್ಲಿದ್ದವರು!
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) - ಆರ್ ಥರಾಣಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸತೀಂದರ್ ಪಾಲ್ ಸಿಂಗ್ ಕರ್ನಾಟಕದ ನಿವೃತ್ತ IAS ಅಧಿಕಾರಿ ಇವಿ ರಮಣ ರೆಡ್ಡಿ ಮೆಟ್ರೋ ಬೆಲೆ ಏರಿಕೆಯ ಕುರಿತು ಸಮಿತಿಯು ಅಕ್ಟೋಬರ್ 2, 28, 2024 ರ ನಡುವೆ ಸಾರ್ವಜನಿಕ ಪ್ರತಿಕ್ರಿಯೆಯನ್ನು ಸಂಗ್ರಹ ಮಾಡಿತು. ಡಿಸೆಂಬರ್ 16 ರಂದು ಸಾರ್ವಜನಿಕ ಪ್ರತಿಕ್ರಿಯೆಗಳ ಕೋರಿಕೆಯೂ ಮುಕ್ತಾಯವಾಗಿತು.
ನಮ್ಮ ಮೆಟ್ರೋ ಸಮಿತಿಯ ಬೆಲೆ ಏರಿಕೆಯ ತನ್ನ ಅಂತಿಮ ವರದಿಯನ್ನು ಕಳೆದ ವಾರ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮಂಡಳಿಗೆ ಸಲ್ಲಿಕೆ ಮಾಡಿತು. ವಿಶ್ಲೇಷಣೆಯ ಆಧಾರದ ಮೇಲೆ ಸಮಿತಿಯು ನಮ್ಮ ಮೆಟ್ರೋ ಪ್ರಯಾಣದ ಬೆಲೆಯನ್ನು ಶೇ.40 ರಿಂದ 45 ರಷ್ಟು ಏರಿಕೆಗೆ ಶಿಫಾರಸು ಮಾಡಿದೆ.


Click it and Unblock the Notifications