ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸುದ್ದಿ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆಯೇ ತುಮಕೂರಿನಲ್ಲಿ ಹೊಸ ಏರ್ಪೋರ್ಟ್ ನಿರ್ಮಿಸಬೇಕೆಂಬ ಕೂಗು ಕೇಳಿಬರುತ್ತಿದೆ. ರಾಜ್ಯ ಸರ್ಕಾರವೂ ಸಹ ಅಳೆದು ತೂಗಿ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ಮಾಡಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ತುಮಕೂರು ಅಥವಾ ನೆಲಮಂಗಲ ಬಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ
ಹೌದು, ತುಮಕೂರು ಅಥವಾ ನೆಲಮಂಗಲ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಪಟ್ಟು ಹಿಡಿದಿದ್ದಾರೆ.

ಕೊರಟಗೆರೆ ತಾಲೂಕು ಕೋಳಾಲದ 7 ಗ್ರಾಪಂ ಮತ್ತು ಕಸಬಾ ಹೋಬಳಿಯ 6 ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರು ಅಥವಾ ನೆಲಮಂಗಲ ಸಮೀಪ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು ನಾನು ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಜೊತೆ ನಾನು ಈಗಾಗಲೇ ಚರ್ಚಿ ಮಾಡಿದ್ದೇನೆ. ವಿಮಾನ ನಿಲ್ದಾಣವನ್ನು ಬೇರೆ ಕಡೆ ನಿರ್ಮಾಣ ಮಾಡೋಕೆ ಪ್ರಯತ್ನ ಮಾಡಿದ್ದರೆ ನಮಗೇ ಎಚ್‌ಎಎಲ್ ನಿಲ್ದಾಣವೇ ಸಾಕು ಅಂತ ಹೇಳುತ್ತೀವೆ ಎಂದು ಹೇಳಿಕೆ ನೀಡಿದ್ದಾರೆ.
ಕೇಂದ್ರ ಹಣಕಾಸು ಸಚಿವಾಲಯ ರಾಜ್ಯ ಸರಕಾರಕ್ಕೆ 6,310 ಕೋಟಿ ಹಣ ಬಿಡುಗಡೆ ಮಾಡಿದೆ. ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ನರೇಂದ್ರ ಮೋದಿ ಸರಕಾರ ಗ್ರೀನ್ ಸಿಗ್ನಲ್ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ 4 ದಿಕ್ಕಿನಲ್ಲೂ ಅಂತಾರಾಷ್ಟ್ರೀಯ ಮಟ್ಟದ ಹೆದ್ದಾರಿಗಳಿವೆ. 40 ಸಾವಿರ ಎಕರೆ ಪ್ರದೇಶದಲ್ಲಿ ಇಂಡಸ್ಟ್ರಿಯಲ್ ಪ್ರದೇಶ ಇದೆ. ತುಮಕೂರು ನಗರ ರಾಜಧಾನಿಗೆ ಹತ್ತಿರವಾಗಿ ಬೆಳೆಯುತ್ತಿದೆ ಎಂದು ಹೇಳಿದ್ದಾರೆ.
2,400 ಕೋಟಿ ವೆಚ್ಚದ ಕಾಮಗಾರಿ ಆರಂಭ
ನರೇಂದ್ರ ಮೋದಿ ರಾಜ್ಯದ ರೈಲ್ವೆ ಯೋಜನೆಗೆ 5,300ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. 2,400 ಕೋಟಿ ವೆಚ್ಚದ ನೆಲಮಂಗಲ ತುಮಕೂರಿನ 45 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಫೆಬ್ರವರಿಯಿಂದ ಪ್ರಾರಂಭ ಆಗುತ್ತದೆ.ಶಿರಾ, ಮಧುಗಿರಿ, ಕೊರಟಗೆರೆ, ಪಾವಗಡ ಕ್ಷೇತ್ರಕ್ಕೆ ರಾಷ್ಟ್ರೀಯ ಹೆದ್ದಾರಿ ವಿಸ್ತಾರ ಆಗಲಿದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಪ್ರತಿ ಗ್ರಾಮಕ್ಕೆ 2 ಶುದ್ದ ಕುಡಿಯುವ ನೀರಿನ ಘಟಕ
ಕೇಂದ್ರದಿಂದ ನಾನು ಪ್ರತಿ ಗ್ರಾಮಕ್ಕೆ 2 ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ಥಾಪನೆ ಮಾಡುತ್ತೇವೆ. ಕೊಳವೆಬಾವಿಯ ನೀರಿನ ಗುಣಮಟ್ಟದ ಬಗ್ಗೆ ಪರಿಶೀಲನೆ ನಡಿಸಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.ತುಮಕೂರು ಜಿಲ್ಲೆಯ ಕೊಳವೆಬಾವಿಗಳ ಫ್ಲೋರೈಡ್ ನೀರಿನ ಬಗ್ಗೆ 15 ದಿನಗಳ ಒಳಗೆ ನನಗೇ ಮಾಹಿತಿ ನೀಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಭಿವೃದ್ಧಿಯ ವಿಚಾರದಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡೋದಿಲ್ಲ
ಭದ್ರಾ ಮೇಲ್ದಂಡೆ ಯೋಜನೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಭದ್ರಾ ಯೋಜನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅನುಮತಿಯನ್ನು ನೀಡಿದ್ದೀರಾ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಯ ವಿಚಾರದಲ್ಲಿ ಯಾವ ರಾಜ್ಯಕ್ಕೂ ತಾರತಮ್ಯ ಮಾಡೋದಿಲ್ಲ. ಕೇಂದ್ರ ಮತ್ತು ರಾಜ್ಯ ಎನ್ನದೇ ರಾಜಕೀಯ ಬದಿಗಿಟ್ಟು ಡಿ.ಕೆ ಶಿವಕುಮಾರ್ ಅವರು ನೀರಾವರಿ ಯೋಜನೆಯ ಕಾಮಗಾರಿ ರೂಪುರೇಷೆ ಬಗ್ಗೆ ಗಮನ ಹರಿಸಲಿ ಹೇಳಿ ಎಂದು ಟಾಂಗ್ ಕೊಟ್ಟಿದ್ದಾರೆ.
ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಗ್ರಾಮಾಂತರ ಶಾಸಕ ಸುರೇಶಗೌಡ, ಮಾಜಿ ಶಾಸಕ ಪಿ.ಆರ್.ಸುಧಾಕರ ಲಾಲ್, ಉಪಸ್ಥಿತರಿದ್ದರು.


Click it and Unblock the Notifications