For Quick Alerts
ALLOW NOTIFICATIONS  
For Daily Alerts

20 ಲಕ್ಷ ಕೋಟಿ ರುಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಿಸಿದ ಮೋದಿ

|

ದೇಶವನ್ನುದ್ದೇಶಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಲಾಕ್‌ಡೌನ್ ಹಾನಿಯಿಂದ ಆರ್ಥಿಕತೆಯನ್ನು ಮೇಲೆತ್ತಲು 20 ಲಕ್ಷ ಕೋಟಿ ರುಗಳ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ರೈತ, ಶ್ರಮಿಕ ವರ್ಗ, ಸಣ್ಣ ಉದ್ದಿಮೆದಾರರು, ಕಾರ್ಮಿಕ ಹಾಗೂ ಮಧ್ಯಮ ವರ್ಗಕ್ಕಾಗಿ ಈ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.

ಕೊರೋನಾ ತಡೆಗೆ ದೇಶಾದ್ಯಂತ 3.O ಲಾಕ್ ಡೌನ್ ಚಾಲ್ತಿಯಲ್ಲಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು ಆತ್ಮ ನಿರ್ಭರ ಭಾರತ ಅಭಿಯಾನವನ್ನು ಘೋಷಣೆ ಮಾಡಿದ್ದಾರೆ.

20 ಲಕ್ಷ ಕೋಟಿ ರುಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಿಸಿದ ಮೋದಿ

ಭಾರತ ಆತ್ಮ ನಿರ್ಭರ ದೇಶ ಆಗಬೇಕು. ಸ್ವಾವಲಂಬಿ ಭಾರತ ಎಂಬುದನ್ನು ನಾವು ತೋರಿಸಬೇಕು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಮಧ್ಯಮ ವರ್ಗಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ನ್ನು ಘೋಷಿಸಿದ್ದಾರೆ.

ಆತ್ಮ ನಿರ್ಭರ ಭಾರತ ನಮ್ಮೆಲ್ಲರ ಧ್ಯೇಯವಾಗಲಿ, ಭಾರತ ಸ್ವಾವಲಂಬಿ ಎಂಬುದನ್ನು ತೋರಿಸಬೇಕಿದೆ ಎಂದು ಹೇಳಿರುವ ಪ್ರಧಾನಿ ಮೋದಿ ಕೋವಿಡ್ ಸಂಕಟ ಶುರುವಾದ ಸಂದರ್ಭದಲ್ಲಿ ಭಾರತದಲ್ಲಿ ಪಿಪಿಇ ಕಿಟ್ ತಯಾರಾಗುತ್ತಿರಲಿಲ್ಲ, ಎನ್ 95 ಮಾಸ್ಕ್ ಗಳು ಕೆಲವು ಸಂಖ್ಯೆಯಲ್ಲಿ ಮಾತ್ರವೇ ಉತ್ಪಾದನೆಯಾಗುತ್ತಿತ್ತು. ಈಗ ಭಾರತದಲ್ಲಿ ದಿನಂಪ್ರತಿ 2 ಲಕ್ಷ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ತಯಾರಿಸುತ್ತಿದೆ. ವಿಶ್ವವೇ ಒಂದು ಕುಟುಂಬ ಎಂಬುದು ನಮ್ಮ ಸಂಸ್ಕೃತಿಯಾಗಿದ್ದು ,ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಇದು ಸಾಬೀತುಗೊಂಡಿದೆ. ಎಂದು ಮೋದಿ ಹೇಳಿದ್ದಾರೆ.

ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್ ದೇಶದ ಜಿಡಿಪಿಯ 10 ಪರ್ಸೆಂಟ್‌ರಷ್ಟು ಇರಲಿದೆ.

English summary

Modi Announces Economic Relief Package Worth 20 Lakh Crore

Modi Announces Economic Relief Package Worth 20 Lakh Crore
Story first published: Tuesday, May 12, 2020, 21:03 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X