ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ನಾಳೆ (ನ.28) ರಂದು ಉಡುಪಿಗೆ ಬರಲಿದ್ದಾರೆ. ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ (Udupi) ಜನರು ದೇಶದ ಪ್ರಧಾನಿ ಮೋದಿಯನ್ನು ನೋಡಿ ಕಣ್ತುಂಬಿಕೊಳ್ಳಲು ಕಾತುರದಿಂದ ಕಾದು ಕುಳಿತಿದ್ದಾರೆ. ಈಗಾಗಲೇ ಮೋದಿ ಆಗಮನಕ್ಕಾಗಿ ಕೃಷ್ಣ ನಗರಿಯಲ್ಲಿ ಖಾಕಿ ಸಜ್ಜಾಗಿದೆ. ಪ್ರಧಾನಿ ಸ್ವಾಗತಕ್ಕೆ ಇಡೀ ಜಿಲ್ಲೆಯೇ ಕೇಸರಿಮಯವಾಗಿದೆ. ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಿಂ ಕಲ್ಸಂಕದವರೆಗೂ ಪ್ರಧಾನಿ ಮೋದಿಯವರ ರೋಡ್ ಶೋ ನಡೆಯಲಿದ್ದು, ಅದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆ ಕೂಡಾ ಆಗಿದೆ.

ಪ್ರಧಾನಿ ಮೋದಿಯವರು ನಾಳೆ (ನ.28) ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಶಾಲಾ-ಕಾಲೇಜುಗಳಿಗೆ ರಜೆ (School Holiday), ಅಂಗಡಿ ತೆರೆಯುವುದು, ಡ್ರೋಣ್ ಹಾರಾಟ ನಿಷೇಧ ಹೀಗೆ ಹತ್ತು ಹಲವು ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಡ್ರೋಣ್ ಬಳಕೆ ನಿಷೇಧ:
ಪ್ರಧಾನಿ ಮೋದಿಯವರು ಉಡುಪಿ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ. ಎಲ್ಲಿಯೂ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಲು ಖಾಕಿ ಪಡೆ ಕೂಡಾ ಸರ್ಪಗಾವಲು ಹಾಕಿದೆ. ಇನ್ನು ಕಾರ್ಯಕ್ರಮ ನಡೆಯುವ ದಿನ, ಸುತ್ತಮುತ್ತ ಎಲ್ಲಿಯೂ ಲೈಸೆನ್ಸ್ ಇಲ್ಲದೇ ಡ್ರೋಣ್ ಹಾರಿಸುವಂತಿಲ್ಲ ಎಂದು ಜಿಲ್ಲಾಡಳಿತ ಖಡಕ್ ಸೂಚನೆ ಹೊರಡಿಸಿದೆ.
ರಸ್ತೆ ಕಾಮಗಾರಿ ಸ್ಥಗಿತ:
ಡ್ರೋಣ್ ಮಾತ್ರವಲ್ಲ ನವೆಂಬರ್ 28 ರಂದು ಉಡುಪಿ ನಗರದಲ್ಲಿ ಯಾವುದೇ ರಸ್ತೆ ಕಾಮಗಾರಿಯಾಗಲೀ, ಗುಂಡಿ ತೋಡುವುದಾಗಲಿ ಕಾಮಗಾರಿಗಳನ್ನು ಕೈಗೊಳ್ಳುವಂತಿಲ್ಲ ಎಂದು ಜಿಲ್ಲಾಡಳಿತ ಸೂಚನೆ ಹೊರಡಿಸಿದೆ.
ಶಾಲಾ-ಕಾಲೇಜುಗಳಿಗೆ ರಜೆ:
ಇನ್ನು ಮಕ್ಕಳ ಭದ್ರತಾ ದೃಷ್ಟಿಯಿಂದಲೂ, ಸುಗಮ ಸಂಚಾರಕ್ಕಾಗಿ ನವೆಂಬರ್ 28 ರಂದು ಒಂದು ದಿನ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆ ಸಂಚಾರ ದಟ್ಟಣೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಮಕ್ಕಳಿಗೆ ಸಮಸ್ಯೆಯಾಗಬಾರದೆಂಬ ದೃಷ್ಟಿಯಿಂದ ಉಡುಪಿ ನಗರ, ಮಲ್ಪೆ ಮತ್ತು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಕೇಸರಿಮಯವಾದ ಉಡುಪಿ!
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನೆಲೆ ಕೃಷ್ಣಾ ನಗರಿ ಉಡುಪಿ ಸಂಪೂರ್ಣ ಕೇಸರಿಮಯವಾಗಿಬಿಟ್ಟಿದೆ. ಎಲ್ಲಿ ನೋಡಿದರು ಕೇಸರಿ ಬಾವುಟಗಳು, ಬಂಟಿಂಗ್ಸ್‌ಗಳೇ ಕಾಣಿಸುತ್ತಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಸಹ ಅಳವಡಿಸಲಾಗಿದೆ.
ಒಂದು ಲಕ್ಷ ಮಂದಿಯಿಂದ ಗೀತಾ ಪಠಣ!
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಾಳೆ ಐತಿಹಾಸಿಕ ಲಕ್ಷ ಕಂಠ ಗೀತಾ ಪರಾಯಣ ನಡೆಯಲಿದೆ. ಈ ಗೀತಾ ಪಾರಾಯಣದಲ್ಲಿ ಒಂದು ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣಕ್ಕಾಗಿ ಸಿದ್ಧತೆಗಳು ಈಗಾಗಲೇ ನಡೆದಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಸಹ ಭಾಗವಹಿಸಿ, ನಂತರ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಆಯೋಜಕರ ಪ್ರಕಾರ, ಗೀತಾ ಪಠಣವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:30 ಗಂಟೆವರೆಗೆ ನಡೆಯಲಿದೆ ಎಂದು ಹೇಳಲಾಗಿದೆ, ಈ ಗೀತಾ ಪಠಣದಲ್ಲಿ 1 ಲಕ್ಷ ಭಕ್ತರು ಸೇರುವ ನಿರೀಕ್ಷೆಯಿದೆ.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಫೊರೆಕ್ಸ್ ಮಿತಿ: ಇಂದಿನ ಮಾರುಕಟ್ಟೆ ಕುಸಿತಕ್ಕೆ ಕಾರಣವೇ?

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?



Click it and Unblock the Notifications