ಮುಬದಾಲದಿಂದ ರಿಲಯನ್ಸ್ ರೀಟೇಲ್ ನಲ್ಲಿ 6,247.5 ಕೋಟಿ ರು. ಹೂಡಿಕೆ

ಅಬುಧಾಬಿ ಮೂಲದ ಸವರನ್ ಹೂಡಿಕೆದಾರ ಮುಬದಾಲ ಇನ್ವೆಸ್ಟ್ ಕಂಪೆನಿಯಿಂದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ (RRVL)ನಲ್ಲಿ 6,247.5 ಕೋಟಿ ರುಪಾಯಿ (AED 3.1 ಬಿಲಿಯನ್) ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಘೋಷಣೆ ಮಾಡಿವೆ.

ಈ ಹೊಸ ಹೂಡಿಕೆಯು ರಿಲಯನ್ಸ್ ರೀಟೇಲ್ ಪ್ರೀ ಮನಿ ಈಕ್ವಿಟಿ ಮೌಲ್ಯವನ್ನು 4.285 ಲಕ್ಷ ಕೋಟಿ ರುಪಾಯಿ ಮಾಡಿದೆ. ಇಷ್ಟು ಮೊತ್ತಕ್ಕೆ ಫುಲ್ಲಿ ಡೈಲ್ಯೂಟೆಡ್ ಆಧಾರದಲ್ಲಿ ರಿಲಯನ್ಸ್ ರೀಟೇಲ್ ವೆಂಚರ್ಸ್ ನ 1.40% ಈಕ್ವಿಟಿ ಪಾಲು ಖರೀದಿ ಮಾಡಿದಂತಾಗುತ್ತದೆ.

ಈ ವರ್ಷದ ಆರಂಭದಲ್ಲಿ ಮುಬದಾಲದಿಂದ ಜಿಯೋ ಪ್ಲಾಟ್ ಫಾರ್ಮ್ಸ್ ನಲ್ಲಿ 1.2 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆಯ ಘೋಷಣೆ ಮಾಡಲಾಗಿತ್ತು. ಜಿಯೋ ಪ್ಲಾಟ್ ಫಾರ್ಮ್ಸ್ ನಂತರ ರಿಲಯನ್ಸ್ ಇಂಡಸ್ಟ್ರೀಸ್ ನ ಮತ್ತೊಂದು ಅಂಗಸಂಸ್ಥೆಯಾದ ರಿಲಯನ್ಸ್ ರೀಟೇಲ್ ವೆಂಚರ್ಸ್ ನಲ್ಲಿ ಮುಬದಾಲ ಮಾಡುತ್ತಿರುವ ಅತಿ ಮುಖ್ಯವಾದ ಹೂಡಿಕೆ ಇದು.

ಮುಬದಾಲದಿಂದ ರಿಲಯನ್ಸ್ ರೀಟೇಲ್ ನಲ್ಲಿ 6,247.5 ಕೋಟಿ ರು. ಹೂಡಿಕೆ

ರಿಲಯನ್ಸ್ ರೀಟೇಲ್ ಲಿಮಿಟೆಡ್ ಭಾರತದ ಅತಿ ದೊಡ್ಡ ಹಾಗೂ ವೇಗವಾಗಿ ಬೆಳೆಯುತ್ತಿರುವ ಮತ್ತು ಲಾಭದಾಯಕವಾದ ಉದ್ಯಮ. ದೇಶದಾದ್ಯಂತ 12 ಸಾವಿರ ಮಳಿಗೆಗಳನ್ನು ಹೊಂದಿದೆ. ಭಾರತದ ರೈತರು, ಎಂಎಸ್ ಎಂಇ ವಲಯ ಬಲಪಡಿಸುವ ಮೂಲಕ ಲಕ್ಷಾಂತರ ಗ್ರಾಹಕರಿಗೆ ಸೇವೆ ಸಲ್ಲಿಸುವ ಉದ್ದೇಶ RRVLಗೆ ಇದೆ.

ನಿಯಂತ್ರಕರು ಮತ್ತು ಇತರ ಅನುಮತಿಗಳ ಆಧಾರದ ಮೇಲೆ ಈ ವ್ಯವಹಾರವು ಅಂತಿಮವಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+