ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (MIAL) ಹಗರಣಕ್ಕೆ ಸಂಬಂಧಿಸಿದಂತೆ ಜಿವಿಕೆ ಗ್ರೂಪ್ ಕಂಪೆನಿ ಅಧ್ಯಕ್ಷರಾದ ವೆಂಕಟ ಕೃಷ್ಣ ರೆಡ್ಡಿ ಗುಣಪತಿ ಮತ್ತು ಅವರ ಮಗ ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಜಿ.ವಿ.ಸಂಜಯ್ ರೆಡ್ಡಿ ಅವರ ಮೇಲೆ ಮಂಗಳವಾರ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸಿದೆ.
ಇತ್ತೀಚೆಗೆ ಸಿಬಿಐ ಕೂಡ ಜಿವಿಕೆ ಗ್ರುಪ್ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದೆ. ಈಗ ಆರ್ಥಿಕ ಅಪರಾಧದ ಆರೋಪದ ಮೇಲೆ ಇಡಿ ಪ್ರಕರಣ ದಾಖಲಿಸಿಕೊಂಡು ಜಿವಿಕೆ ಗ್ರುಪ್ ಬೆನ್ನು ಬಿದ್ದಿದೆ. ಜಿವಿಕೆ ಸಮೂಹದ ಪ್ರವರ್ತಕರು ತಮ್ಮ ಕಂಪನಿಗಳಿಗೆ ಹಣಕಾಸು ಒದಗಿಸಲು MIAL ನ ಮೀಸಲು ಹಣ 705 ಕೋಟಿ ರುಪಾಯಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ.
ಮುಂಬೈ ವಿಮಾನ ನಿಲ್ದಾಣದ ನವೀಕರಣ ಮತ್ತು ನಿರ್ವಹಣೆಗಾಗಿ MIAL ಜಿವಿಕೆ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ ಜೊತೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (ಎಎಐ) ಜಂಟಿ ಸಹಭಾಗಿತ್ವ ರೂಪಿಸಿತ್ತು. ಏಪ್ರಿಲ್ 4, 2006 ರಂದು MIAL ಜೊತೆ ಮುಂಬೈ ವಿಮಾನ ನಿಲ್ದಾಣದ ಆಧುನೀಕರಣ, ನಿರ್ವಹಣೆ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಜೊತೆ ಒಪ್ಪಂದ ಮಾಡಿಕೊಂಡಿತ್ತು.
MIAL ನಲ್ಲಿ ಜಿವಿಕೆ ಸಮೂಹದ ಪ್ರವರ್ತಕರು ಎಎಐನ ಅಧಿಕಾರಿಗಳೊಂದಿಗೆ ವಿವಿಧ ಮಾರ್ಗಗಳನ್ನು ಬಳಸಿಕೊಂಡು ಹಣವನ್ನು ವಂಚಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. 395 ಕೋಟಿ ರುಪಾಯಿ ನಷ್ಟಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.
Notifications
Settings
Clear Notifications
No New Notifications
Notifications
Use the toggle to switch on notifications
Block for 8 hours
Block for 12 hours
Block for 24 hours
Don't block
To start receiving timely alerts, as shown below click on the Green “lock” icon next to the address bar
Click it and Unblock the Notifications
Close X
Close X
To Start receiving timely alerts please follow the below steps:
Click on the Menu icon of the browser, it opens up a list of options.
Click on the “Options ”, it opens up the settings page,
Here click on the “Privacy & Security” options listed on the left hand side of the page.
Scroll down the page to the “Permission” section .
Here click on the “Settings” tab of the Notification option.
A pop up will open with all listed sites, select the option “ALLOW“, for the respective site under the status head to allow the notification.
Once the changes is done, click on the “Save Changes” option to save the changes.