ಹೊಸ ವರ್ಷವನ್ನು ದೇಶದ್ಯಾಂತ ಸಂಭ್ರಮ, ಸಡಗರದಿಂದ ಸ್ವಾಗತ ಮಾಡಿಕೊಳ್ಳಲಾಗಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಬಲು ಜೋರಾಗಿತ್ತು. ನಗರದ ಪ್ರಮುಖ ರಸ್ತೆಗಳು ಜನದಟ್ಟಣೆ ತುಂಬಿ ತುಲುಕುತ್ತಿದ್ದವು. ಹೊಸ ವರ್ಷದ ಹಿನ್ನಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಡಿಸೆಂಬರ್ 31 ರ ಮಧ್ಯರಾತ್ರಿಯಿಂದ 2.15 ರವರೆಗೆ ಮೆಟ್ರೋ (Namma metro) ಸೇವೆ ಅವಧಿ ವಿಸ್ತರಣೆ ಮಾಡಿತ್ತು. ಇದರ ಪರಿಣಾಮ ನಿನ್ನೆ ಒಂದೇ ದಿನ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಹರಿದು ಬಂದಿದೆ.
ಹೌದು,ನಿನ್ನೆ ಹೊಸ ವರ್ಷದ ಹಿನ್ನಲೆಯಲ್ಲಿ ಹೆಚ್ಚು ಜನರು ಸೇರುವ ನಗರಗಳಾದ ಎಂಜಿ ರೋಡ್,ಚರ್ಚ್ ಸ್ಟ್ರೀಟ್ ಸೇರಿದಂತೆ ನಗರದ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆಯಿಂದ ನಮ್ಮ ಮೆಟ್ರೋ ರೈಲು ಸೇವೆಯನ್ನು ತಡರಾತ್ರಿ ಎರಡು ಗಂಟೆವರೆಗೂ ವಿಸ್ತರಿಸಲಾಗಿತ್ತು. ನಮ್ಮ ಮೆಟ್ರೋ ಬೆಳಗ್ಗೆ 5ರಿಂದ ಮಧ್ಯರಾತ್ರಿ 2.45ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಿವೆ.

1 ದಿನದಲ್ಲಿ 2 ಕೋಟಿ 7 ಲಕ್ಷದ 52 ಸಾವಿರ ಆದಾಯ
ನಿನ್ನೆ ಒಂದೇ ದಿನ ಗುಲಾಬಿ ಬಣ್ಣದ ಮಾರ್ಗದಲ್ಲಿ ಒಟ್ಟು 4,00,583 ರೂ ಹಸಿರು ಮಾರ್ಗದಲ್ಲಿ 2,90,530,ಗುಲಾಬಿ ಬಣ್ಣದ ಮಾರ್ಗ ಹಾಗೂ ಹಸಿರು ಮಾರ್ಗದಿಂದ ಒಟ್ಟು 8,59,467, ಪೇಪರ್ ಟಿಕೆಟ್ ಮೂಲಕ ಮೆಟ್ರೋಟದಲ್ಲಿ 5,423 ಮತ್ತು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ 1,62,931 ಜನರು ಪ್ರಯಾಣವನ್ನು ಮಾಡಿದ್ದಾರೆ. ಹೀಗಾಗಿ ನಮ್ಮ ಮೆಟ್ರೋಗೆ 2 ಕೋಟಿ 7 ಲಕ್ಷದ 52 ಸಾವಿರ ರೂ. ಆದಾಯ ಬಂದಿದೆ.
ಬಿಎಂಆರ್‌ಸಿಎಲ್ 2025ರ ಹೊಸ ವರ್ಷದ ಮುನ್ನಾದಿನದಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಣೆ ಮಾಡಿತ್ತು. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ 2 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2.40 ಗಂಟೆಗೆ ಹೊರಡುತ್ತದೆ ಎಂದು ಮಾಹಿತಿ ತಿಳಿಸಿತ್ತು.
ಎಂ.ಜಿ ರಸ್ತೆಯಲ್ಲಿ ಜನಸಂದಣಿ ಹಿನ್ನೆಲೆ ಡಿಸೆಂಬರ್ 31, 2024 ರಂದು ರಾತ್ರಿ 11 ಗಂಟೆಯಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗಿತ್ತು. ಪ್ರಯಾಣಿಕರ ಬಳಕೆಗಾಗಿ ಹತ್ತಿರದ ನಿಲ್ದಾಣಗಳಾದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ರೈಲುಗಳು ಸ್ಟಾಪ್ ಮಾಡಲಾಗಿತ್ತು
ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಂದ ಯಾವುದೇ ನಿಲ್ದಾಣಕ್ಕೆ ರಾತ್ರಿ 11 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು 50 ರೂಪಾಯಿಯ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಅನ್ನು ನೀಡಲಾಗಿತ್ತು. ಈ ಕಾಗದದ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 31ನೇ ಡಿಸೆಂಬರ್ 2024ರ ಬೆಳಗ್ಗೆ 8 ರಿಂದ ಮುಂಗಡವಾಗಿ ಖರೀದಿಸಬಹುದಾಗಿತ್ತು. ಸಾಮಾನ್ಯ QR ಕೋಡ್ ಟಿಕೆಟ್ಗಳು ಮತ್ತು ಕಾರ್ಡ್‌ಗಳು ಈ ನಿಲ್ದಾಣಗಳಿಂದ ಪ್ರಯಾಣಿಸಲು ಸಹ ಆದ್ಯತೆ ನೀಡಲಾಗಿತು.
10 ನಿಮಿಷಕ್ಕೊಂದು ರೈಲು
ಡಿಸೆಂಬರ್ 31ರ ರಾತ್ರಿ 11ರಿಂದ 10 ನಿಮಿಷಕ್ಕೊಂದು ರೈಲು ಸೇವೆ ಇರಲಿದ್ದು, ಜನವರಿ 1ರಂದು ಮುಂಜಾನೆ 2 ಗಂಟೆಗೆ ಎಲ್ಲ ಮೆಟ್ರೋ ಟರ್ಮಿನಲ್ನಿಂದ ಕೊನೆ ರೈಲು ಹೊರಟಿದೆ. ಆದ್ರೆ, ಮೆಜೆಸ್ಟಿಕ್ನಿಂದ ಮುಂಜಾನೆ 2.40ಕ್ಕೆ ಕೊನೆ ರೈಲು ಸಂಚರವನ್ನು ಮಾಡಿದೆ.


Click it and Unblock the Notifications