ಹೆಬ್ಬಾಳದಿಂದ ಸರ್ಜಾಪುರದವರೆಗೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ 3-ಎ ಹಂತದ ಯೋಜನೆಗೆ ನಗರಾಭಿವೃದ್ಧಿ ಇಲಾಖೆ (ಯುಡಿಡಿ) ಅನುಮೋದನೆ ಕೊಟ್ಟಿದೆ. ಯುಡಿಡಿ ಅನುಮೋದನೆ ಬಳಿಕ ಹಣಕಾಸು ಇಲಾಖೆ ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲಿದೆ.
ಡೆಕ್ಕನ್ ಹೆರಾಲ್ಡ್ ವರದಿ ಮಾಡಿರುವ ಪ್ರಕಾರ, ಯೋಜನೆಗೆ ಆರಂಭಿಕ ಹಂತದ ಮುನ್ನಡೆ ಸಿಕ್ಕಿದ್ದು, ಯುಡಿಡಿ ಅನುಮೋದನೆ ಬಳಿಕ ಯೋಜನೆಯಿಂದ ರಾಜ್ಯ ಬಜೆಟ್ ಮೇಲೆ ಆರ್ಥಿಕ ಪರಿಣಾಮದ ಬಗ್ಗೆ ಹಣಕಾಸು ಇಲಾಖೆ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲಿದೆ. ಸುರಂಗ ಮಾರ್ಗದಲ್ಲಿ ಮೆಟ್ರೋ ನಿರ್ಮಾಣವನ್ನು ಪ್ರಸ್ತಾಪಿಸಲಾಗಿದ್ದು, ಯುಡಿಡಿ ಬಿಬಿಎಂಪಿಯೊಂದಿಗೆ ಸಮಾಲೋಚನೆ ನಡೆಸಿದೆ ಎಂದು ವರದಿಯಾಗಿದೆ.

ಹೆಬ್ಬಾಳ-ಸರ್ಜಾಪುರದ ನಡುವೆ 37 ಕಿಲೋ ಮೀಟರ್ ಮಾರ್ಗದಲ್ಲಿ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಯೋಜನೆ ಸಜ್ಜಾಗಿದ್ದು, ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. 3-ಎ ಯೋಜನೆಯಿಂದ ಬೆಂಗಳೂರಿನ ಟೆಕ್ ಹಬ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಸುಲಭವಾಗಲಿದೆ. ಯುಡಿಡಿ ಅನುಮೋದನೆ ಸಿಕ್ಕಿದ್ದು, ಕ್ಯಾಬಿನೆಟ್‌ನಲ್ಲಿ ಅನುಮೋದನೆ ಸಿಕ್ಕ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗುತ್ತದೆ.
37 ಕಿಲೋ ಮೀಟರ್, 28 ನಿಲ್ದಾಣಗಳು
ಹೆಬ್ಬಾಳದಿಂದ ಸರ್ಜಾಪುರದ ನಡುವೆ ಒಟ್ಟು 37 ಕಿಲೋ ಮೀಟರ್ ಮಾರ್ಗದಲ್ಲಿ ಒಟ್ಟು 28 ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತದೆ. 28 ನಿಲ್ದಾಣಗಳಲ್ಲಿ 11 ಮೆಟ್ರೊ ನಿಲ್ದಾಣಗಳನ್ನು ಸುರಂಗ ಮಾರ್ಗದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಟ್ರಾಫಿಕ್ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲಿವೇಟೆಡ್ ಡಬಲ್ ಡೆಕ್ಕರ್ ರಸ್ತೆ ನಿರ್ಮಾಣಕ್ಕೆ ಕೂಡ ಯೋಜನೆ ರೂಪಿಸಲಾಗಿದೆ.
ಇಬ್ಬಲೂರು, ಕೋರಮಂಗಲ, ಶಾಂತಿನಗರ, ಟೌನ್ ಹಾಲ್, ಮೇಖ್ರಿ ಸರ್ಕಲ್, ಸರ್ಜಾಪುರದಂತಹ ಪ್ರಮುಖ ಪ್ರದೇಶಗಳನ್ನು ಈ ಮೆಟ್ರೋ ಮಾರ್ಗವು ಸಂಪರ್ಕಿಸಲಿದೆ. ಮೆಟ್ರೋ ಮಾರ್ಗದ ಕಾಮಗಾರಿಗೆ ಕೇಂದ್ರ ಸರ್ಕಾರ ಹಣಕಾಸಿನ ನೆರವು ಕೊಡಲಿದ್ದು, ಎಲಿವೇಟೆಡ್ ರಸ್ತೆ ನಿರ್ಮಾಣದ ವೆಚ್ಚವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವೇ ಭರಿಸಬೇಕಾಗುತ್ತದೆ.
ನಾಗಸಂದ್ರ-ಮಾದಾವರ ಮೆಟ್ರೋ ಸಂಚಾರ ಶೀಘ್ರ
ವಿಸ್ತೃತ ಹಸಿರು ಮಾರ್ಗದ ನಾಗಸಂದ್ರ-ಮಾದಾವರ ನಡುವೆ ಮೆಟ್ರೋ ಸಂಚಾರ ಶೀಘ್ರದಲ್ಲೇ ಆರಂಭವಾಗಲಿದೆ. ಅಕ್ಟೋಬರ್ ಅಂತ್ಯದ ವೇಳೆಗೆ ವಾಣಿಜ್ಯ ಕಾರ್ಯಾಚರಣೆ ಆರಂಭಿಸುವ ಸಾಧ್ಯತೆ ಇದೆ. ಬಿಎಂಆರ್‌ಸಿಎಲ್ ರಾಜ್ಯ ಸರ್ಕಾರಕ್ಕೆ ಉದ್ಘಾಟನಾ ದಿನಾಂಕ ನಿಗದಿ ಮಾಡುವಂತೆ ಪತ್ರ ಬರೆದಿದ್ದು, ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಬೇಕಿದೆ.
ಈಗಾಗಲೇ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ತಪಾಸಣೆ ನಡೆಸಿದ್ದು, ರೈಲು ಸಂಚಾರ ಆರಂಭಿಸಲು ಅನುಮತಿ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದ ಬಳಿಕ 3.7 ಕಿ.ಮೀ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಲಿದೆ.
ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಶನ್ ಲಿಮಿಟೆಡ್‌ನ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದು, ಸರ್ಕಾರದ ನಿಗದಿ ಮಾಡಿದ ದಿನ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. 3.7 ಕಿಮೀ ಮಾರ್ಗದಲ್ಲಿ ಮಂಜುನಾಥ ನಗರ, ಚಿಕ್ಕ ಬಿದರಕಲ್ಲು (ಜಿಂದಾಲ್ ನಗರ) ಮತ್ತು ಮಾದಾವರ ನಿಲ್ದಾಣಗಳನ್ನು ನಿರ್ಮಿಸಲಾಗಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications