ನಮ್ಮ ಮೆಟ್ರೋ ಪ್ರಯಾಣದರ ಏರಿಕೆಗೆ(Bengaluru Metro fare hike) ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ದರ ಏರಿಕೆ ಬೆನ್ನಲ್ಲೇ ಮೆಟ್ರೋ (Metro) ಪ್ರಯಾಣಿಕರ ಸಂಖ್ಯೆಯಲ್ಲಿ ಸಹ ಇಳಿಕೆಯಾಗಿತ್ತು.ಇದರ ಮಧ್ಯೆ ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಮಹತ್ವ ಸುದ್ದಿಗೋಷ್ಠಿ ನೆಡೆಸಿ ಮೆಟ್ರೋ ಪ್ರಯಾಣ ದರ ಏರಿಕೆಯ ಕುರಿತು ಸ್ವಷ್ಟ ಮಾಹಿತಿಯನ್ನು ತಿಳಿಸಿದ್ದಾರೆ.
ಹೌದು, ಮೆಟ್ರೋ ಪರಿಷ್ಕೃತ ದರ (ಫೆ.09) ಜಾರಿಯಾಗಿನಿಂದಲೇ ಹಲವಾರು ಚರ್ಚೆಗಳು ನಡೆಯುತ್ತಲೇ ಇದ್ದವು ಇದಕ್ಕೆಲ್ಲಾ ಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಫುಲ್ ಸ್ಟಾಪ್ ಇಟ್ಟಿದ್ದಾರೆ. ನಮ್ಮ ಮೆಟ್ರೋ ದರ ಪರಿಷ್ಕರಣೆ ಇಲ್ಲ ಸ್ಟೇಜ್ ಬೈ ಸ್ಟೇಜ್ ರೇಟ್ ಮರ್ಜ್ ಮಾಡಲಾಗುತ್ತದೆ ಎಂದು ಎಂದು ಸ್ವಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮೆಟ್ರೋ ಪ್ರಯಾಣ ದರ ಪರಿಷ್ಕರಿಸುವಂತೆ ಬಿಎಂಆರ್ಸಿಎಲ್ ಗೆ ಸೂಚನೆ ನೀಡಿದ್ದರು. ಇದರ ಹಿನ್ನಲೇಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಎಂಆರ್ ಸಿಎಲ್ ಎಂಡಿ ಮಹೇಶ್ವರ್ ರಾವ್ ಅವರು, ದುಪ್ಪಟ್ಟು ದರ ಏರಿಕೆಯಾಗಿರುವ ನಿಲ್ದಾಣಗಳಲ್ಲಿನ ದರವನ್ನು ಪರಿಷ್ಕರಿಸಲಾಗುವುದು. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ಸಮಧಾನ ದೊರೆಯಲಿದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಸ್ಟೇಜ್ ಬೈ ಸ್ಟೇಜ್ ರೇಟ್ ಮರ್ಜ್ ಏನಿದು?
ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90 ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ದರ ಇಳಿಕೆ ಮಾಡಲಾಗುವುದು. ಶೇ 60 ದರ ಹೆಚ್ಚಳವಾಗಿರುವಲ್ಲಿ ಸ್ಲ್ಯಾಬ್ ಮರ್ಜ್ ಮಾಡುತ್ತೇವೆ. ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ತರಲಾಗುತ್ತದೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ.
ಕಳೆದ 3 ದಿನಗಳಿಂದ ಬೋರ್ಡ್ ಜೊತೆ ಸಭೆ
ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಒಂದು ವಿಧಾನ ಇದೆ. ಅದರಂತೆಯೇ ದರ ನಿಗದಿ ಸಮಿತಿ ಅಧ್ಯಯನ ನಡೆಸಿ ಮಾಡಿದ ಶಿಫಾರಸಿನ ಮೇರೆಗೆ ದರ ಹೆಚ್ಚಳ ಮಾಡಲಾಗಿದೆ. ಕಳೆದ 3 ದಿನಗಳಿಂದ ಬೋರ್ಡ್ ಜೊತೆ ಸಭೆ ನಡೆಸಿದ್ದೇವೆ.ಸಿಎಂ ಹಾಗೂ ಡಿಸಿಎಂ ಸೂಚನೆ ಮೇರೆಗೆ ಸಭೆ ಮಾಡಿದ್ದೇವೆ.ಎಲ್ಲಿ ಅನಿವಾರ್ಯವೋ ಅಲ್ಲಿ ದರ ಇಳಿಕೆ ಮಾಡಬೇಕಾಗುತ್ತದೆ.ಯಾವ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ದುಪ್ಪಟ್ಟು ದರ ಏರಿಕೆಯಾಗಿದೆಯೋ ಅಲ್ಲಿ ಕಡಿಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ಅವರು ಮಾಹಿತಿಯನ್ನು ತಿಳಿಸಿದ್ದಾರೆ.
ಸಾಕಷ್ಟು ಬಂಡವಾಳ ಹೂಡಿಕೆ
ನಮ್ಮ ಮೆಟ್ರೋಗೆ ಸಾಕಷ್ಟು ಬಂಡವಾಳ ಹೂಡಿಕೆ ಮಾಡಲಾಗಿದೆ. ಮೂಲಸೌಕರ್ಯಕ್ಕೂ ಹೆಚ್ಚಿನ ಹಣ ಬೇಕಿದೆ. ಮೆಟ್ರೋ ಸಿಬ್ಬಂದಿ ವೇತನ, ಇತ್ಯಾದಿ ವಿಚಾರಗಳನ್ನೂ ದರ ಏರಿಕೆ ವೇಳೆ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಅವರು ಮಾಹಿತಿಯನ್ನು ತಿಳಿಸಿದ್ದಾರೆ.
ಪ್ರಯಾಣಿಕರ ಸಂಖ್ಯೆ ಕುಸಿತ ನಮ್ಮ ಮೆಟ್ರೋದಲ್ಲಿ ದರ ಹೆಚ್ಚಳದ ಪರಿಷ್ಕೃತ ದರವನ್ನು ನೋಡಿದ ಜನರು, ಮೆಟ್ರೋಗಿಂತ ಬಿಎಂಟಿಸಿ ಬಸ್, ಖಾಸಗಿ ವಾಹನಗಳೇ ಉತ್ತಮ ಎಂದು ಹೇಳುತ್ತಿದ್ದಾರೆ.ಮೆಟ್ರೋದಲ್ಲಿ ಖಾಲಿ ಖಾಲಿ ಸೀಟುಗಳು ಇದೇ ಮೊದಲ ಭಾರೀ ಕಂಡು ಬರುತ್ತಿದೆ. ಮೆಟ್ರೋದಲ್ಲಿ ಪ್ರಯಾಣ ಮಾಡಲು ಜನರು ಹಿಂದೆ ಮುಂದೆ ನೋಡುತ್ತಿದ್ದಾರೆ. ಮೆಟ್ರೋ ದರ ಏರಿಕೆ ಬಳಿಕ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿದೆ.
ಫೆಬ್ರವರಿ 3ರಂದು ದರ ಏರಿಕೆಗೂ ಮೊದಲು ಮೆಟ್ರೋ ಪ್ರಯಾಣಿಕರ ಸಂಖ್ಯೆ 8.7 ಲಕ್ಷವಾಗಿತ್ತು. ಆದರೆ ಫೆಬ್ರವರಿ 10ರಂದು ದರ ಏರಿಕೆ ಬಳಿಕ ಇದು 8.2 ಲಕ್ಷಕ್ಕೆ ಇಳಿಕೆಯಾಗಿದೆ. ಮಾಹಿತಿಗಳ ಪ್ರಕಾರ ಶೇ 4ರಷ್ಟು ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ಪರಿಷ್ಕೃತ ದರ ಪಟ್ಟಿ ಫೆಬ್ರುವರಿ 9ರಿಂದ ಜಾರಿಗೆ ಬಂದಿದೆ. ನಂತರದ ಸತತ ಎರಡು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಕುಸಿದಿದೆ. ಫೆಬ್ರುವರಿ 10ರಂದು (ಸೋಮವಾರ) 8,28,149 ಜನರು ಹಾಗೂ ಫೆಬ್ರುವರಿ 11ರಂದು (ಮಂಗಳವಾರ) 7,78,774 ಮಂದಿ ಮೆಟ್ರೊ ಪ್ರಯಾಣ ಮಾಡಿದ್ದಾರೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications