ಸಂಕ್ರಾಂತಿ ಹಬ್ಬದ ನಂತರ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಕರ್ನಾಟಕ ಹಾಲು ಒಕ್ಕೂಟ (KMF) ನಿರ್ಧರಿಸಿದೆ. ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿರುವ ಕೆಎಂಎಫ್‌ನ ಅಧ್ಯಕ್ಷ, ಮಾಜಿ ಶಾಸಕ ಭೀಮಾನಾಯಕ್, ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಬಂದಿದೆ ಎಂದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರೈತರ ಬೇಡಿಕೆಗಳನ್ನು ಕುರಿತು ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ ಹಾಗಾಗಿ, ಸಂಕ್ರಾಂತಿ ಹಬ್ಬದ ಬಳಿಕ ಈ ಸಂಬಂಧ ಸಭೆ ನಡೆಸಿ ದರ ಏರಿಕೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಸಂಕ್ರಾಂತಿ ನಂತರ ನಂದಿನಿ ಹಾಲಿನ ದರ ಲೀಟರ್‌ಗೆ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ.

2 ರೂ.ಇಳಿಕೆ, 50 ಎಂ.ಎಲ್ ಹೆಚ್ಚುವರಿ ಹಾಲು ಕಡಿತ:
ಜೂನ್‌ನಿಂದ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ 50 ಎಂ.ಎಲ್ ಹೆಚ್ಚುವರಿ ಹಾಲನ್ನು ಕಡಿತಗೊಳಿಸಿ, ಅದರ ದರವನ್ನೂ 2 ರೂ.ನಷ್ಟು ಇಳಿಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ಹಾಲು ಸಂಗ್ರಹಣೆ ಪ್ರಮಾಣವು ನಿರೀಕ್ಷೆಗೂ ಮೀರಿ ಹೆಚ್ಚಾಗಿದ್ದರಿಂದ ಪ್ಯಾಕೆಟ್‌ನಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಿಸಲಾಗಿತ್ತು ಮತ್ತು ದರವನ್ನು 2 ರೂ. ಏರಿಕೆ ಮಾಡಲಾಗಿತ್ತು. ಈಗ ಹಾಲಿನ ಜತೆ ದರ ಹೆಚ್ಚಳವನ್ನೂ ಹಿಂಪಡೆಯಲಾಗುತ್ತಿದೆ, ಎಂದು ಭೀಮಾ ನಾಯ್ಕ್ ತಿಳಿಸಿದ್ದಾರೆ.
ದರ ಏರಿಕೆಗೆ ಸ್ಪಷ್ಟನೆ ನೀಡಿದ್ದ ಭೀಮಾ ನಾಯ್ಕ್
ಈ ಹಿಂದೆ 'ದಕ್ಷಿಣ ಭಾರತದ ಇತರೆ ರಾಜ್ಯಗಳು ಮತ್ತು ಅಮುಲ್ ಹಾಲಿಗೆ ಹೋಲಿಸಿದರೆ ಕರ್ನಾಟಕದ ನಂದಿನಿ ಹಾಲಿನದರ ಕಡಿಮೆಯೇ ಇದೆ. ದರ ಏರಿಕೆ ಮಾಡಿದ ನಂತರವೂ ನಮ್ಮ ರಾಜ್ಯದ ಹಾಲಿನ ಬೆಲೆಯು ಲೀಟರ್ ಗೆ ಇತರೆ ರಾಜ್ಯಗಳಿಗಿಂತ 14 ರೂ. ಕಡಿಮೆ ಇದೆ. ಗುಣಮಟ್ಟದ ಹಾಲನ್ನೂ ಕರ್ನಾಟಕ ಹಾಲು ಮಹಾಮಂಡಳ ನೀಡುತ್ತಿದೆ ಎಂದು ಆರು ತಿಂಗಳ ದರ ಏರಿಕೆ ಮಾಡಿದಾಗ ಭೀಮಾನಾಯ್ಕ ಹೇಳಿದ್ದರು.
ನಂದಿನಿ ಉತ್ಪನ್ನಗಳನ್ನು ಜೈಪುರದಲ್ಲಿ ಮಾರಾಟ
ಕೆಎಂಎಫ್ ನಂದಿನಿ ಉತ್ಪನ್ನಗಳನ್ನು ಜೈಪುರದಲ್ಲಿ ಮಾರಾಟ ಮಾಡಲು ಯೋಜಿಸಿದೆ ಎಂದು ನಾಯಕ್ ಹೇಳಿದರು. "ಶಿವಮೊಗ್ಗ ಒಕ್ಕೂಟವು ಇಂದೋರ್ ಮತ್ತು ಭೋಪಾಲ್‌ಗೆ ವಿಸ್ತರಿಸುತ್ತಿದೆ.
ಆರು ತಿಂಗಳ ಹಿಂದಷ್ಟೇ ಹಾಲಿನ ಬೆಲೆ ಏರಿಕೆ
ಆರು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ ನಂದಿನಿ ಹಾಲಿನ ಪ್ರಮಾಣ ಮತ್ತು ದರ ಏರಿಕೆಯಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಗೆ ಕೆಎಂಎಫ್ ಮುಂದಾಗಿದೆ.
ಡಿಸೆಂಬರ್ 25 ರಂದು ಬಿಡುಗಡೆ ಮಾಡಲಾದ ಹಾಲೊಡಕು ಪ್ರೋಟೀನ್ ಮಿಶ್ರಿತ ಇಡ್ಲಿ / ದೋಸೆ ಹಿಟ್ಟು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಬೆಂಗಳೂರಿನ ಎಲ್ಲಾ ನಂದಿನಿ ಪಾರ್ಲ‌್ರಗಳಲ್ಲಿ ಲಭ್ಯವಿರುತ್ತದೆ ಎಂದು ನಾಯಕ್ ಹೇಳಿದರು.
ಕೆಎಂಎಫ್‌ನ ಬಜೆಟ್‌ಗೆ ಆರ್‌ಸಿಬಿಯವರು ಒಪ್ಪಿಕೊಂಡರೆ ಮುಂದಿನ ಐಪಿಎಲ್‌ನಲ್ಲಿ ಪ್ರಾಯೋಜಕತ್ವ ಮಾಡಲಾಗುವುದು. ಈ ಸಂಬಂಧ ಆರ್‌ಸಿಬಿ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಲಾಗುವುದು ಎಂದರು.
ದೆಹಲಿಯಲ್ಲಿ ನಂದಿನಿ ಡೈರಿ ಉತ್ಪನ್ನಗಳ ಕಳಪೆ ಮಾರಾಟ
ದೆಹಲಿಯಲ್ಲಿ ನಂದಿನಿ ಡೈರಿ ಉತ್ಪನ್ನಗಳ ಕಳಪೆ ಮಾರಾಟದ ಬಗ್ಗೆ ಮಾತನಾಡಿದ ಕಾಂಗ್ರೆಸ್ ಶಾಸಕರು, "ಕೆಲವು ಸ್ಪರ್ಧಿಗಳು ನಮಗೆ ತೊಂದರೆ ನೀಡುತ್ತಿದ್ದಾರೆ, ಆದರೆ ನಾನು ಹೆಸರುಗಳನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ನಾವು ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಬಯಸುತ್ತೇವೆ. ಪ್ರಸ್ತುತ, ನಾವು ದೆಹಲಿಯಲ್ಲಿ ಪ್ರತಿದಿನ 15,000 ಲೀಟರ್ ಹಾಲನ್ನು ಮಾರಾಟ ಮಾಡುತ್ತೇವೆ ಮತ್ತು ಮುಂದಿನ ಆರು ತಿಂಗಳಲ್ಲಿ 1 ಲಕ್ಷದಿಂದ 2 ಲಕ್ಷ ಲೀಟರ್‌ಗಳ ನಡುವೆ ತಲುಪುವ ಗುರಿಯನ್ನು ಹೊಂದಿದ್ದೇವೆ. 4 ಲಕ್ಷದಿಂದ 5 ಲಕ್ಷ ಲೀಟರ್‌ಗಳ ದೀರ್ಘಾವಧಿಯ ಗುರಿಯೊಂದಿಗೆ ದೆಹಲಿಯಲ್ಲಿ ಕೆಎಂಎಫ್ ಮಾರಾಟವನ್ನು ಮುಂದುವರಿಸಲಿದೆ ಎಂದು ಅವರು ಭರವಸೆ ನೀಡಿದರು.
More From GoodReturns

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Price Hike: ಬೆಂಗಳೂರು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗ್ಯಾಸ್ ಬೆನ್ನಲ್ಲೇ ಏರಿಕೆಯಾಗುತ್ತಾ ಹೋಟೆಲ್ ಫುಡ್ ದರ



Click it and Unblock the Notifications