ನೇಪಾಳದ ಏಕೈಕ ಶತಕೋಟ್ಯಧಿಪತಿ ಹಾಗೂ ನೇಪಾಳಿ ಕಾಂಗ್ರೆಸ್ ನಿಂದ ಆಯ್ಕೆಯಾದ ಕೆಳಮನೆಯ ಸದಸ್ಯ ಬಿನೋದ್ ಚೌಧರಿ ಅವರಿಗೆ ಶುಕ್ರವಾರ ಕೊರೊನಾ ಪಾಸಿಟಿವ್ ದೃಢವಾಗಿದೆ. ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟ್ಟರ್ ಮೂಲಕ ತಮಗೆ ಕೊರೊನಾ ಪಾಸಿಟಿವ್ ಎಂಬುದನ್ನು ಉದ್ಯಮಿ ಚೌಧರಿ ಖಾತ್ರಿ ಪಡಿಸಿದು, ಈಚೆಗೆ ಅವರ ಸಂಪರ್ಕಕ್ಕೆ ಬಂದಿದ್ದವರು ಮುಂಜಾಗ್ರತೆ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ತಮಗೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ ಎಂದು ತಿಳಿಸಿರುವ ಅವರು, ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ ಇರುವುದಾಗಿ ತಿಳಿಸಿದ್ದಾರೆ. ಫೋರ್ಬ್ಸ್ ನಿಯತಕಾಲಿಕೆ ಪ್ರಕಟಿಸಿದ ವಿಶ್ವದ ಶತಕೋಟ್ಯಧಿಪತಿಗಳ ಪಟ್ಟಿಯಲ್ಲಿ ಬಿನೋದ್ ಚೌಧರಿ 1513ನೇ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ ಮೌಲ್ಯ 140 ಕೋಟಿ ಅಮೆರಿಕನ್ ಡಾಲರ್ ಇದೆ. ಭಾರತದ ರುಪಾಯಿ ಲೆಕ್ಕದಲ್ಲಿ 10 ಸಾವಿರ ಕೋಟಿಯನ್ನು ದಾಟುತ್ತದೆ.

ಸಿಜಿ ಕಾರ್ಪೊರೇಷನ್ ಗ್ಲೋಬಲ್ ಚೌಧರಿ ಅವರ ಒಡೆತನದಲ್ಲಿದೆ. ನೇಪಾಳದ ನೆಬಿಲ್ ಬ್ಯಾಂಕ್ ಹಾಗೂ ಸಿಜಿ ಫುಡ್ಸ್ ನಲ್ಲೂ ಷೇರನ್ನು ಹೊಂದಿದ್ದಾರೆ. ನೇಪಾಳದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಈ ತನಕ ನೇಪಾಳದಲ್ಲಿ 36,456 ಸೋಂಕಿತ ಪ್ರಕರಣಗಳು ಕಂಡುಬಂದಿದ್ದರೆ, 20,242 ಮಂದಿ ಚೇತರಿಸಿಕೊಂಡಿದ್ದಾರೆ. 195 ಮಂದಿ ಸಾವನ್ನಪ್ಪಿದ್ದಾರೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications