ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣದ ಬಳಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುತ್ತಿದೆ. ಈ ಅವರ ಕಂಚಿನ ಪ್ರತಿಮೆಗೆ ಅಂದಾಜು 1.11 ಕೋಟಿ ರೂಪಾಯಿ ಆಗುತ್ತದೆ. ಕಾಂಕ್ರೀಟ್ ಪ್ರತಿಮೆಗೆ ಬದಲಾಗಿ ಹೊಸ ಪ್ರತಿಮೆ ನಿರ್ಮಾಣವಾಗಲಿದೆ.
ಸುಭಾಷ್ ನಗರ ಜಂಕ್ಷನ್ ಅಥವಾ ರಾಜೀವ್ ಗಾಂಧಿ ಚೌಕ ಎಂದು ಕರೆಯಲಾಗುವ, ಈ ಜಂಕ್ಷನ್ ಭಾಗಶಃ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಅಡಿಯಲ್ಲಿ ಬರುತ್ತದೆ.

15ನೇ ಹಣಕಾಸು ಆಯೋಗದ ಕಾರ್ಯಕ್ರಮದಡಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಕೈಗೆತ್ತಿಕೊಂಡ 25 ಜಂಕ್ಷನ್‌ಗಳಲ್ಲಿ ಸುಭಾಷ್ ನಗರವೂ ಒಂದಾಗಿದೆ. ಏಳು ಮೀಟರ್ ಪ್ರತಿಮೆಯ ವೆಚ್ಚವನ್ನು ಬಿಬಿಎಂಪಿ ತನ್ನ ಸ್ವಂತ ಹಣವನ್ನು ಬಳಸಿ ಭರಿಸಲಿದೆ.
ಈ ಹಿಂದೆ ಜಂಕ್ಷನ್‌ನಲ್ಲಿ ಸ್ಥಾಪಿಸಲಾಗಿದ್ದ ಕಾಂಕ್ರೀಟ್ ಪ್ರತಿಮೆಯನ್ನು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ನಾವು ಈಗ ಕಂಚಿನ ಪ್ರತಿಮೆಯನ್ನು ಸ್ಥಾಪಿಸುತ್ತಿದ್ದೇವೆ," ಎಂದು ಅಧಿಕಾರಿಯೊಬ್ಬರು ಹೇಳಿದರು.
ಈ ಕೆಲಸವನ್ನು ಪಾಲಿಕೆಯ ಟ್ರಾಫಿಕ್ ಇಂಜಿನಿಯರಿಂಗ್ ಸೆಲ್‌ಗೆ ವಹಿಸಲಾಗಿದೆ. ಸಿಂಗಲ್ ಬಿಡ್ಡರ್ ಆಗಿದ್ದ ಕಲ್ಯಾಣ್ ಇನ್‌ಫ್ರಾ ಪ್ರಾಜೆಕ್ಟ್ಸ್‌ಗೆ ನೀಡಲಾಗಿದೆ. ಆದರೂ 2023 ರ ಮಧ್ಯದಲ್ಲಿ ಬಿಬಿಎಂಪಿ ಟೆಂಡರ್‌ಗಳನ್ನು ಕರೆದಿದ್ದು ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಟ್ವೀಟ್‌ನಲ್ಲಿ ಈ ಕ್ರಮವನ್ನು ಟೀಕಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ. ಆದರೆ ನಮ್ಮ ನೆಲ ಮತ್ತು ಸಂಸ್ಕೃತಿಯನ್ನು ಅವಮಾನಿಸಿದರೂ ಅವರ ರಾಜಕೀಯ ಯಜಮಾನರನ್ನು ಮೆಚ್ಚಿಸಲು ಎಲ್ಲಾ ಹಣ ಲಭ್ಯವಿದೆ ಎಂದು ಹೇಳಿದ್ದಾರೆ.


Click it and Unblock the Notifications