ಹೊಸ ವರ್ಷ ಬಂತೆಂದರೆ ಸಾಕು ಎಲ್ಲರೂ ಪ್ರವಾಸಕ್ಕೆಂದು ಹೋಗುತ್ತಾರೆ. ಅದರಲ್ಲೂ ಬೆಂಗಳೂರಿನ ಸಮೀಪವಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಹೊಸ ವರ್ಷದಂದು ಪ್ರವಾಸಿಗರ ದಂಡೇ ಹರಿದುಬರುತ್ತದೆ. ಆದರೆ ಇದೀಗ ಬೆಂಗಳೂರು ಜಿಲ್ಲಾಡಳಿತವು ಈ ಬಾರಿ ಹೊಸ ವರ್ಷಕ್ಕೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಾಗಾದರೆ ಎಷ್ಟು ದಿನ ಹಾಗೂ ಕಾರಣ ಎನ್ನುವ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ...
ಹೌದು, ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು,ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ಬೆಂಗಳೂರು ಜಿಲ್ಲಾಡಳಿತವು ನಂದಿಗಿರಿಧಾಮ ಎಂದೂ ಕರೆಯಲ್ಪಡುವ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಬೆಟ್ಟಕ್ಕೆ ಪ್ರವೇಶವನ್ನು ನಿರ್ಬಂಧಿಸಿದೆ.

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 7 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ವರ್ಷ, ಹೊಸ ವರ್ಷದ ಮುನ್ನಾದಿನದಂದು ನಂದಿ ಬೆಟ್ಟಗಳಲ್ಲಿ ಪಾನಮತ್ತ ಚಾಲನೆ, ರಸ್ತೆ ಅಪಘಾತಗಳು ಮತ್ತು ಪರಿಸರ ಮಾಲಿನ್ಯದಂತಹ ಸಮಸ್ಯೆಗಳನ್ನು ತಡೆಗಟ್ಟಲು ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಅಹಿತಕರ ಘಟನೆಗಳು ನಡೆಯದಂತೆ ನಂದಿ ಬೆಟ್ಟದ ಸುತ್ತಮುತ್ತ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ನಂದಿ ಗಿರಿಧಾಮದಲ್ಲಿ ನ್ಯೂಇಯರ್ ಸೆಲೆಬ್ರೇಷನ್‌ಗೆ ನಿರ್ಬಂಧ ಹೇರಲಾಗಿದೆ. ನಂದಿ ಬೆಟ್ಟದ ಸುತ್ತ 150ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಹೇಳಿದ್ದಾರೆ.
ನಂದಿ ಬೆಟ್ಟದ ಹೊರತಾಗಿ ಜಿಲ್ಲೆಯಾದ್ಯಂತ ಹೊಟೇಲ್, ರೆಸಾರ್ಟ್, ಹೋಂ ಸ್ಟೇಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ. ಜನಸಂದಣಿಯನ್ನು ತಪ್ಪಿಸುವುದು, ಶಬ್ದ ಮಾಲಿನ್ಯವನ್ನು ನಿರ್ವಹಿಸುವುದು ಮತ್ತು ಹಬ್ಬದ ಸಮಯದಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಕಾಅಡುವ ಉದ್ದೇಶದಿಂದ ಕ್ರಮ ಕೈಗೊಂಡಿದ್ದಾರೆ.
ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಬೆಂಗಳೂರಿನಾದ್ಯಂತ ಸಮಗ್ರ ಸುರಕ್ಷತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಭರವಸೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಆಯುಕ್ತರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಹು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಒತ್ತಿ ಹೇಳಿದರು.
ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ, ಅಬಕಾರಿ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಬೆಸ್ಕಾಂ, ಬಿಎಂಆರ್‌ಸಿಎಲ್ ಮತ್ತು ಇತರ ಏಜೆನ್ಸಿಗಳ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ಈಗಲೇ ನಡೆಸಿ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನ ಪ್ರಮುಖ ಆಚರಣೆ ಕೇಂದ್ರಗಳಲ್ಲಿ ಪೊಲೀಸ್ ಬಂದೋ ಬಸ್ತು ಮಾಡಲಾಗಿದೆ. ಅವುಗಳೆಂದರೆ,
• ಎಂಜಿ ರಸ್ತೆ
• ಬ್ರಿಗೇಡ್ ರಸ್ತೆ
• ರೆಸಿಡೆನ್ಸಿ ರಸ್ತೆ
• ಸೇಂಟ್ ಮಾರ್ಕ್ಸ್ ರಸ್ತೆ
• ಕಬ್ಬನ್ ಪಾರ್ಕ್
• ಟ್ರಿನಿಟಿ ಸರ್ಕಲ್
• ಕೋರಮಂಗಲ
• ಇಂದಿರಾನಗರ 100 ಅಡಿ ರಸ್ತೆ
• ಫೀನಿಕ್ಸ್ ಮಾಲ್
ಹೆಚ್ಚುವರಿಯಾಗಿ, ಸ್ಟಾರ್ ಹೋಟೆಲ್‌ಗಳು, ಪಬ್‌ಗಳು ಮತ್ತು ಕ್ಲಬ್‌ಗಳ ಸುತ್ತಲೂ ಬಿಗಿ ಭದ್ರತೆಯನ್ನು ಜಾರಿಗೊಳಿಸಲಾಗುವುದು, ಅಲ್ಲಿ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದೆ. ನಾಗರಿಕರು ಜವಾಬ್ದಾರಿಯುತವಾಗಿ ಆಚರಿಸಬೇಕು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ವರದಿ ಮಾಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications