2024 ಮುಗಿದು 2025ಕ್ಕೆ ಕಾಲಿಡಲು ಕೇವಲ ಎರಡೇ ದಿನ ಮಾತ್ರ ಬಾಕಿಯಿದೆ. ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ ಬಲು ಜೋರು..! ಬಹುತೇಕರು ಪಾರ್ಟಿ ಮಾಡಲು ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರ ಸೇರಿದಂತೆ ಅನೇಕ ಕಡೆಗಳಲ್ಲಿ ಬಂದು ಸೇರುತ್ತಾರೆ. ಈ ಸಂದರ್ಭದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ಪ್ರದೇಶಗಳಲ್ಲಿ ಜನ ದಟ್ಟಣೆ ತಪ್ಪಿಸಲು ಖಾಕಿ ಪಡೆ ಸಜ್ಜಾಗಿದೆ.
ಹೌದು, ಹೊಸ ವರ್ಷದ ಹಿಂದಿನ ದಿನ(ಡಿ.31) ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ, ಚರ್ಚ್ ಸ್ಟ್ರೀಟ್ ಮತ್ತು ಇಂದಿರಾನಗರದಂತಹ ನಗರದಲ್ಲಿ ಹೊಸ ವರ್ಷದ ರಾತ್ರಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗದಂತೆ ಬೆಂಗಳೂರು ಪೊಲೀಸರು ಹೆಚ್ಚಿನ ಬಿಗಿ ಬಂದೋಬಸ್ತ್ ಮಾಡಲಿದ್ದಾರೆ. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಎಂಜಿ ರಸ್ತೆಯ ಒಂದು ಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1 ರ ಬೆಳಗಿನ ಜಾವ 2 ರವರೆಗೆ ಕೆಳಗಿನ ರಸ್ತೆಗಳಲ್ಲಿ ಸಂಚಾರ ಬಂದ್
*ಎಂ.ಜಿ.ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಮೇಯೊ ಹಾಲ್ ಬಳಿ ರೆಸಿಡೆನ್ಸಿ ರಸ್ತೆ ಜಂಕ್ಷನ್ ವರೆಗೆ.
*ಬ್ರಿಗೇಡ್ ರಸ್ತೆ, ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಒಪೇರಾ ಜಂಕ್ಷನ್‌ವರೆಗೆ.
*ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ.
*MG ರಸ್ತೆ ಜಂಕ್ಷನ್‌ನಿಂದ ಹಳೆಯ ಮದ್ರಾಸ್ ಬ್ಯಾಂಕ್ ರಸ್ತೆ (SBI) ವೃತ್ತದವರೆಗೆ ಮ್ಯೂಸಿಯಂ ರಸ್ತೆ.
*ಮ್ಯೂಸಿಯಂ ರಸ್ತೆ ಜಂಕ್ಷನ್‌ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್‌ವರೆಗೆ ರೆಸ್ಟ್ ಹೌಸ್ ರಸ್ತೆ.
*ರೆಸಿಡೆನ್ಸಿ ಕ್ರಾಸ್ ರಸ್ತೆಯಿಂದ ರೆಸಿಡೆನ್ಸಿ ರಸ್ತೆ ಜಂಕ್ಷನ್. (ಶಂಕರ್ ನಾಗ್ ಥಿಯೇಟರ್)
ಕೆಳಗಿನ ಪ್ರದೇಶಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ನಿರ್ಬಂಧ
*ಎಂಜಿ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ.
*ಬ್ರಿಗೇಡ್ ರಸ್ತೆ, ಆರ್ಟ್ಸ್ & ಕ್ರಾಫ್ಟ್ಸ್ ಜಂಕ್ಷನ್‌ನಿಂದ ಒಪೇರಾ ಜಂಕ್ಷನ್‌ವರೆಗೆ.
*ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಸೇಂಟ್ ಮಾರ್ಕ್ಸ್ ರಸ್ತೆ ಜಂಕ್ಷನ್‌ವರೆಗೆ.
*ರೆಸ್ಟ್ ಹೌಸ್ ರಸ್ತೆ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ.
*ಮ್ಯೂಸಿಯಂ ರಸ್ತೆ, MG ರಸ್ತೆ ಜಂಕ್ಷನ್‌ನಿಂದ ಹಳೆಯ ಮದ್ರಾಸ್ ಬ್ಯಾಂಕ್ ರಸ್ತೆ (SBI) ವೃತ್ತದವರೆಗೆ.
*ಜನರು ತಮ್ಮ ವಾಹನಗಳನ್ನು ಶಿವಾಜಿನಗರ ಬಿಎಂಟಿಸಿ ಶಾಪಿಂಗ್ ಕಾಂಪ್ಲೆಕ್ಸ್ 1 ನೇ ಮಹಡಿ, ಯುಬಿ ಸಿಟಿ, ಗರುಡಾ ಮಾಲ್ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ನಿಲುಗಡೆ ಮಾಡಬಹುದು.
ಕೋರಮಂಗಲ
ನ್ಯಾಷನಲ್ ಗೇಮ್ಸ್ ವಿಲೇಜ್‌ನಿಂದ ಯುಕೋ ಬ್ಯಾಂಕ್ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕೋರಮಂಗಲ ವೈ.ಡಿ ಮಠ ರಸ್ತೆಯಲ್ಲಿ ಸುಖಸಾಗರ ಜಂಕ್ಷನ್‌ನಿಂದ ಮೈಕ್ರೋಲ್ಯಾಂಡ್ ಜಂಕ್ಷನ್‌ವರೆಗೆ, ಜೆ.ಎನ್.ಸಿ ರಸ್ತೆ, 4ನೇ ಬಿ ಕ್ರಾಸ್ ರಸ್ತೆ, ಟಾನಿಕ್ ಹಿಂಭಾಗದ ರಸ್ತೆ, 17ನೇ ಹೆಜ್ ಮುಖ್ಯ ರಸ್ತೆಗಳಲ್ಲಿ ನಿರ್ಬಂಧ ಇರಲಿದೆ.
ಕೆಳಗಿನ ಪ್ರದೇಶಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
80 ಅಡಿ ರಸ್ತೆಯಲ್ಲಿ ಯುಕೋ ಬ್ಯಾಂಕ್ ಜಂಕ್ಷನ್‌ನಿಂದ NGV ಬ್ಯಾಕ್ ಗೇಟ್ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
*ಯುಕೋ ಬ್ಯಾಂಕ್ ಜಂಕ್ಷನ್
*ಸುಖಸಾಗರ್ ಜಂಕ್ಷನ್
*ಚೌಡೇಶ್ವರಿ ದೇವಸ್ಥಾನದ ಜಂಕ್ಷನ್
ಪಾರ್ಕಿಂಗ್ ಸ್ಥಳಗಳು
ಸೋಮೇಶ್ವರ ದೇವಸ್ಥಾನ ರಸ್ತೆ (ಸ್ಮಶಾನ ಕ್ರಾಸ್‌ನಿಂದ ಮೈಕ್ರೋಲ್ಯಾಂಡ್ ಜಂಕ್ಷನ್‌ವರೆಗೆ) ಬದಲಾಗಿ. ಪ್ರಯಾಣಿಕರು ತಮ್ಮ ವಾಹನಗಳನ್ನು 60 ಅಡಿ ಮಾದರಿ ರಸ್ತೆಯ ಎಡಭಾಗದಲ್ಲಿ (ಮುನಿರೆಡ್ಡಿ ಕಲ್ಯಾಣ ಮಂಟಪದಿಂದ ಕೆನರಾ ಬ್ಯಾಂಕ್ ಜಂಕ್ಷನ್‌ವರೆಗೆ), ಮುನಿರೆಡ್ಡಿ ಕಲ್ಯಾಣ ಮಂಟಪದ ಎದುರು ಬಿಬಿಎಂಪಿ ಮೈದಾನ ಮತ್ತು ಬೆಥನಿ ಶಾಲೆಯ ಪಕ್ಕದಲ್ಲಿರುವ ಬಿಬಿಎಂಪಿ ಮೈದಾನದಲ್ಲಿ ನಿಲ್ಲಿಸಬಹುದು.
ಇಂದಿರಾನಗರ
*ಇಂದಿರಾನಗರ 100 ಅಡಿ ರಸ್ತೆ ಹಳೆ ಮದ್ರಾಸ್ ರಸ್ತೆ ಜಂಕ್ಷನ್‌ನಿಂದ ದೊಮ್ಮಲೂರು ಫ್ಲೈ ಓವರ್ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ನಿರ್ಬಂಧ ಮಾಡಲಾಗಿದೆ.
*ಇಂದಿರಾನಗರ 12ನೇ ಮುಖ್ಯರಸ್ತೆ 80 ಅಡಿ ರಸ್ತೆಯಿಂದ ಇಂದಿರಾನಗರ ಡಬಲ್ ರೋಡ್ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?

ಆರ್ಬಿಐ ರೆಪೋ ದರ: ನಿಮ್ಮ ಇಎಂಐ ಹೊರೆ ಹೆಚ್ಚಾಗುತ್ತಾ?



Click it and Unblock the Notifications