ವಿಜಯ್ ಮಲ್ಯ ಬಳಿಕ ರಾಷ್ಟ್ರದ 2ನೇ ದೇಶಭ್ರಷ್ಟ ಆರ್ಥಿಕ ಅಪರಾಧಿಯಾಗಿ ಗುರುತಿಸಿಕೊಂಡಿರುವ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವ ಕಾಲ ಸಮೀಪಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಸುಮಾರು 14 ಸಾವಿರ ಕೋಟಿ ಮೋಸ ಮಾಡಿರುವ ನೀರವ್ ಮೋದಿಯನ್ನು ಭಾರತಕ್ಕೆ ಗಡಿಪಾರು ಮಾಡಲು ಬ್ರಿಟನ್ ಗೃಹ ಸಚಿವಾಲಯ ಒಪ್ಪಿಗೆ ನೀಡಿದೆ.
ಭಾರತದಲ್ಲಿ ಪಿಎನ್‌ಬಿ ಬ್ಯಾಂಕ್‌ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಇಂಗ್ಲೆಂಡ್‌ನಲ್ಲಿ ತಲೆಮರೆಸಿಕೊಂಡಿದ್ದ ನೀರವ್ ಮೋದಿ ಗಡಿಪಾರು ಆದೇಶಕ್ಕೆ ಬ್ರಿಟನ್ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಅವರು ಸಹಿ ಹಾಕಿದ್ದಾರೆ. ಈ ಕುರಿತು ಸಿಬಿಐ ಅಧಿಕಾರಿಗಳ ಮಾಹಿತಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ನೀರವ್ ಮೋದಿ ವಿರುದ್ಧ ಹಣ ವರ್ಗಾವಣೆ ಪ್ರಕರಣವನ್ನು ಮಾಡಲಾಗಿದೆ ಎಂದು ವೆಸ್ಟ್‌ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರು ಒಪ್ಪಿಕೊಂಡಿದ್ದರು. ಕಳೆದ ವರ್ಷ ಫೆಬ್ರವರಿ 25 ರಂದು ಗಡಿಪಾರಿಗೆ ಆದೇಶ ನೀಡಿದ್ದರು.
ಈ ಹಿಂದೆ ನೀರವ್ ಮೋದಿ ಹಸ್ತಾಂತರಕ್ಕೆ ಸಮ್ಮತಿ ಸೂಚಿಸಿದ್ದ ಲಂಡನ್ನಿನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯವು ಪ್ರಕರಣವನ್ನು ಗೃಹ ಕಾರ್ಯದರ್ಶಿಗೆ ವರ್ಗಾಯಿಸಿತ್ತು.
ಇಷ್ಟೆಲ್ಲಾ ಆದರೂ 50 ವರ್ಷದ ನೀರವ್ ಮೋದಿಗೆ ಇನ್ನೂ ಆಯ್ಕೆಗಳು ಮುಗಿದಿಲ್ಲ ಎಂಬುದು ಗಮನಾರ್ಹ. ಈ ಆದೇಶ ಹೊರಬಿದ್ದ 28 ದಿನಗಳ ಒಳಗೆ ಇದನ್ನು ಬ್ರಿಟನ್ ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಆಯ್ಕೆ ಅವರಿಗೆ ಇದೆ. ಈ ಪ್ರಕ್ರಿಯೆಗೆ ತಿಂಗಳು ಅಥವಾ ವರ್ಷಗಳೇ ತುಂಬಬಹುದು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications