ಲಾಕ್‌ಡೌನ್ ವಿಸ್ತರಣೆ ಹಿನ್ನೆಲೆ, ಪ್ರಧಾನಿಯನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್

ದೇಶದಲ್ಲಿ ಲಾಕ್‌ಡೌನ್ ವಿಸ್ತರಣೆಯ ಬಳಿಕ ಇಂದು ಮೊದಲ ಬಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಹೇರಲಾಗಿರುವ ಎರಡನೇ ಹಂತದ ಲಾಕ್‌ಡೌನ್‌ ಕುರಿತು ಹಾಗೂ ದೇಶದ ಆರ್ಥಿಕ ವ್ಯವಸ್ಥೆ ಮೇಲೆ ಬೀರಬಹುದಾದ ದುಷ್ಪರಿಣಾಮಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ.

ಪ್ರಧಾನಿಯನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್

ದೇಶದಲ್ಲಿ ಲಾಕ್‌ಡೌನ್ ಆದ ಮೇಲೆ ಇದೇ ಮೊದಲ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಲಾಕ್‌ಡೌನ್ ಮತ್ತಷ್ಟು ವಿಸ್ತರಣೆಯಾಗಿರುವುದರಿಂದ ಅದರಿಂದ ದೇಶದ ಆರ್ಥಿಕ ಸ್ಥಿತಿ ಮೇಲೆ ಬೀರಬಹುದಾದ ಪರಿಣಾಮಗಳನ್ನು ಎದುರಿಸಲು ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನಿ ಮೋದಿ ಅವರಿಂದ ಸಲಹೆ ಪಡೆದಿದ್ದಾರೆ.

ಪ್ರಧಾನಿ ಮೋದಿಯೇ ತಿಳಿಸಿರುವಂತೆ ಏಪ್ರಿಲ್ 20ರ ಬಳಿಕ ಪರಿಸ್ಥಿತಿ ಆಧರಿಸಿ ಸ್ವಲ್ಪ ಮಟ್ಟಿಗೆ ರಿಲೀಫ್ ನೀಡಲು ಯೋಜನೆ ನಡೆಸಲಾಗಿದ್ದುಮ ಕೆಲವು ಕೈಗಾರಿಕೆಗಳಿಗೆ ಅನುಮತಿ ನೀಡಲಾಗಿದೆ. ನಂತರದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಹಂತ ಹಂತವಾಗಿ ವಿಸ್ತರಿಸುವ ಕುರಿತು ಪ್ರಧಾನಿ ಸಲಹೆ ನೀಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ಆರ್ಥಿಕ ಸ್ಥಿತಿ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ನಡೆದ ಚರ್ಚೆ ಫಲಪ್ರದವಾಗಿದೆ ಎಂದು ಸ್ಪಷ್ಡಪಡಿಸಿದರು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+