"ಪೆಟ್ರೋಲ್ ಹಾಗೂ ಡೀಸೆಲ್ ನ ಮೂಲ ಬೆಲೆಯಲ್ಲಿ ಬದಲಾವಣೆ ಮಾಡಿಲ್ಲ"

ಪೆಟ್ರೋಲ್ ಹಾಗೂ ಡೀಸೆಲ್ ನ ಮೂಲ ಬೆಲೆಯಲ್ಲಿ ತೈಲ ಮಾರ್ಕೆಟಿಂಗ್ ಕಂಪೆನಿಗಳು ಯಾವ ಬದಲಾವಣೆಯನ್ನೂ ಮಾಡಿಲ್ಲ ಎಂದು ತಿಳಿಸಲಾಗಿದೆ. "ಕೊರೊನಾದಿಂದ ಉದ್ಭವಿಸಿರುವ ಬಿಕ್ಕಟ್ಟನ್ನು ಗಮನದಲ್ಲಿ ಇಟ್ಟುಕೊಂಡು ಏಪ್ರಿಲ್ 1, 2020ರಿಂದ ಪೆಟ್ರೋಲ್- ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಾಗೊಂದು ವೇಳೆ ಇಲ್ಲದಿದ್ದರೂ ಅದೇ ಬೆಲೆಯನ್ನು ಕಾಯ್ದುಕೊಳ್ಳುತ್ತಿದ್ದೆವು" ಎಂದು ಐಒಸಿ ವಕ್ತಾರ ತಿಳಿಸಿದ್ದಾರೆ.

ಈ ಪ್ರಕಟಣೆಯಲ್ಲಿ ಮತ್ತು ಒಂದು ಅಂಶ ತಿಳಿಸಲಾಗಿದೆ. ಈಗಾಗಲೇ ದೇಶದ ಜನರಿಗೆ ನೀಡಿದ ಮಾತಿನಂತೆ, ಇಂಡಿಯನ್ ಆಯಿಲ್, ಬಿಪಿಸಿಎಲ್, ಎಚ್ ಪಿಸಿಎಲ್ ನಿಂದ BS 6 ಎಂಜಿನ್ ಗೆ ಸೂಕ್ತವಾದ ಪೆಟ್ರೋಲ್- ಡೀಸೆಲ್ ಗೆ ಏಪ್ರಿಲ್ 1,2020ರಿಂದಲೇ ಬದಲಾವಣೆ ಮಾಡಿಕೊಳ್ಳಲಾಗಿದೆ. ಕೊರೊನಾ ಹಬ್ಬಿರುವಂಥ ಸವಾಲಿನ ಸಂದರ್ಭದಲ್ಲೂ ನಾವು ಇದನ್ನು ಮಾಡಿದ್ದೇವೆ ಎಂದು ತಿಳಿಸಲಾಗಿದೆ.

ಆದರೆ, ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಲ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್- ಡೀಸೆಲ್ ನ ಚಿಲ್ಲರೆ ಮಾರಾಟ ದರದಲ್ಲಿ ಏರಿಕೆ ಮಾಡಲಾಗಿದೆ. ಅದಕ್ಕೆ ಆಯಾ ರಾಜ್ಯ ಸರ್ಕಾರಗಳು ಬದಲಾವಣೆ ಮಾಡಿರುವ VAT ಕಾರಣ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+