ರಾಜ್ಯ ಸರ್ಕಾರಿ ನೌಕರರಿಗೆ ಶಾಕ್, 2021 ಜೂನ್‌ವರೆಗೆ ತುಟ್ಟಿಭತ್ಯೆ ಹೆಚ್ಚಳವಿಲ್ಲ

ಕೊರೊನಾವೈರಸ್ ಸೋಂಕಿನಿಂದಾಗಿ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರ ನಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜೂನ್ 2021 ವರೆಗೆ ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡದಿರಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ಹಣಕಾಸು ಇಲಾಖೆಯು ಅಧಿಕೃತ ಆದೇಶವನ್ನು ಹೊರಡಿಸಿದೆ.

ಪ್ರತಿ 6 ತಿಂಗಳಿಗೊಮ್ಮೆ ಡಿಎ ಪರಿಷ್ಕರಣೆ ಆಗಲಿದೆ. ಆದರೆ, ಜೂನ್‌ 2021 ವರೆಗೆ ಡಿಎ ಪರಿಷ್ಕರಣೆ ಮಾಡದಿರಲು ನಿರ್ಧರಿಸಲಾಗಿದೆ. ಜುಲೈ 2021ಕ್ಕೆ ಡಿಎ ಪರಿಷ್ಕರಣೆ ಆದರೂ ಹಿಂಬಾಕಿ ನೀಡುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಕೇಂದ್ರ ಸರ್ಕಾರದ ತೀರ್ಮಾನದ ಹಾದಿಯನ್ನೇ ರಾಜ್ಯ ಸರ್ಕಾರವು ಮುನ್ನೆಡೆದಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಶಾಕ್, 2021 ಜೂನ್‌ವರೆಗೆ DA ಹೆಚ್ಚಳವಿಲ್ಲ

ಸರ್ಕಾರದ ಈ ನಿರ್ಧಾರದಿಂದಾಗಿ ಒಂದೂವರೆ ವರ್ಷಗಳ ಕಾಲ ಸರಕಾರಿ ನೌಕರರಿಗೆ ಜುಲೈ 2019 ರಲ್ಲಿ ಪರಿಷ್ಕರಣೆ ಆಗಿದ್ದಂತೆ ಡಿಎ ಪಾವತಿ ಆಗಲಿದೆ. ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರು, ನ್ಯಾಯಾಂಗ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ಯುಜಿಸಿ, ಐಸಿಎಆರ್‌ ಮತ್ತು ಎಐಸಿಟಿಇ ವೇತನ ಶ್ರೇಣಿಗೆ ಈ ಆದೇಶ ಅನ್ವಯ ಆಗಲಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರು ಡಿಎ ಹೆಚ್ಚಳ ಒಂದೂವರೆ ವರ್ಷ ಕಾಯಬೇಕಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+