ಕರ್ನಾಟಕದ ಯಾವುದೇ ಭಾಗದಲ್ಲೂ ಬುಧವಾರದಿಂದ ಆಚೆಗೆ ಲಾಕ್ ಡೌನ್ ಇರುವುದಿಲ್ಲ ಎಂದು ಮಂಗಳವಾರ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮೀಣ ಜಿಲ್ಲೆಗಳಲ್ಲಿ ಇದ್ದ ಲಾಕ್ ಡೌನ್ ತೆರವಾಗಲಿದೆ. ಆ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಬಹುದು ಎಂಬ ನಿರೀಕ್ಷೆ ಇತ್ತು.
ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಪರಿಹಾರವಲ್ಲ ಎಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದರು. ಆ ಮೂಲಕ ಕೆಲವು ಜಿಲ್ಲೆಗಳು ಲಾಕ್ ಡೌನ್ ವಿಸ್ತರಣೆಗೆ ಇಟ್ಟಿದ್ದ ಪ್ರಸ್ತಾವಕ್ಕೆ ಕೊನೆ ಹಾಡಿದರು. "ನಾನು ಜಿಲ್ಲಾಧಿಕಾರಿಗಳ ಜತೆಗೆ ಸಂಪರ್ಕದಲ್ಲಿದ್ದೇನೆ. ಇನ್ನು ಲಾಕ್ ಡೌನ್ ಸಾಧ್ಯವಿಲ್ಲ ಎಂದು ತಿಳಿಸಿದ್ದೇನೆ. ಲಾಕ್ ಡೌನ್ ಹೊರತುಪಡಿಸಿ, ಉಳಿದ ಮಾರ್ಗಗಳ ಮೂಲಕ ನಿಯಂತ್ರಣಕ್ಕೆ ತರಬೇಕು" ಎಂದಿದ್ದಾರೆ.

ಬುಧವಾರದಿಂದ ಮತ್ತೆ ಚಟುವಟಿಕೆಗಳನ್ನು ಆರಂಭಿಸುವಂತೆ, ಆ ವೇಳೆ ಮಾಸ್ಕ್ ಸೇರಿದಂತೆ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದರು. ಯಾರು ಮಾಸ್ಕ್ ಧರಿಸುವುದಿಲ್ಲವೋ ಅಂಥವರಿಗೆ ದಂಡ ವಿಧಿಸಲಾಗುವುದು ಎಂದು ಯಡಿಯೂರಪ್ಪ ಎಚ್ಚರಿಸಿದ್ದು, ಒಂದು ವೇಳೆ ಕೊರೊನಾ ಲಾಕ್ ಡೌನ್ ಮುಂದುವರಿಸಿದರೆ ಆರ್ಥಿಕ ಸ್ಥಿರತೆ ಕಠಿಣ ಎಂದು ಕೂಡ ಹೇಳಿದರು.
ಕೊರೊನಾ ವಿರುದ್ಧ ಹೋರಾಟದಲ್ಲಿ ಸರ್ಕಾರದ ಜತೆಗೆ ಕೈ ಜೋಡಿಸುವಂತೆ ವಿರೋಧ ಪಕ್ಷಗಳ ನಾಯಕರಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.
More From GoodReturns

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?

ಆರ್ಬಿಐ ನಿರ್ಧಾರದ ನಂತರ ನಿಮ್ಮ ಹಣಕ್ಕೆ ಯಾವುದು ಬೆಸ್ಟ್?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ



Click it and Unblock the Notifications