ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿರುವ ಪೆಟ್ರೋಲ್, ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ತರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಹಾಗೂ ವಿಮಾನ ಇಂಧನ ಮತ್ತು ನೈಸರ್ಗಿಕ ಅನಿಲವನ್ನು ಜಿಎಸ್ಟಿವ ವ್ಯಾಪ್ತಿಗೆ ಪ್ರಸ್ತಾಪವಿಲ್ಲ ಎಂದು ಲೋಕಸಭೆಗೆ ಲಿಖಿತ ಉತ್ತರದಲ್ಲಿ ವಿವರಿಸಿದ್ದಾರೆ.

ಈ ಮೇಲ್ಕಂಡ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವುದು ಯಾವಾಗ ಎಂಬ ಬಗ್ಗೆ ಜಿಎಸ್ಟಿ ಮಂಡಳಿ ಶಿಫಾರಸ್ಸು ಮಾಡಬೇಕು ಎಂದು ಕಾನೂನು ಹೇಳುತ್ತದೆ. ಆದರೆ ರಾಜ್ಯಗಳಿಗೂ ಪ್ರಾತಿನಿಧ್ಯ ಇರುವ ಜಿಎಸ್ಟಿ ಮಂಡಳಿಯು ಇದುವರೆಗೆ ಈ ಉತ್ಪನ್ನಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎಂದು ಶಿಫಾರಸ್ಸು ಮಾಡಿಲ್ಲ ಎಂದು ನಿರ್ಮಲಾ ಸೀತಾರಾಮನ್ ಲೋಕಸಭೆಗೆ ತಿಳಿಸಿದ್ದಾರೆ.
ಆದಾಯ ಸಂಗ್ರಹದ ಮೇಲೆ ಆಗುವ ಪರಿಣಾಮ ಸೇರಿದಂತೆ ಎಲ್ಲಾ ಬಗೆಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಜಿಎಸ್ಟಿ ಮಂಡಳಿ ಪರಿಶೀಲಿಸಬಹುದು ಎನ್ನಲಾಗಿದೆ.
ಇನ್ನು ಪ್ರತ್ಯೇಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಕಳೆದ ವರ್ಷ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 19.98 ರೂಪಾಯಿಗಳಷ್ಟು ಇತ್ತು. ಈ ವರ್ಷ ಅದು 32.9 ರೂಪಾಯಿಗಳಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಅದೇ ರೀತಿ ಕಳೆದ ವರ್ಷ 15.83 ರಷ್ಟಿದ್ದ ಡೀಸೆಲ್ ಮೇಲಿನ ಅಬಕಾರಿ ಸುಂಕ ಈ ವರ್ಷ 31.8 ರಷ್ಟಾಗಿದೆ ಎಂದು ತಿಳಿಸಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications