ರಾಷ್ಟ್ರವ್ಯಾಪಿ ಲಾಕ್‌ಡೌನ್‌ದಿಂದಾಗಿ ಕೇಂದ್ರ ಸೇರಿದಂತೆ ರಾಜ್ಯ ಸರಕಾರಗಳು ಆರ್ಥಿಕ ಬಿಕ್ಕಟನ್ನು ಎದುರಿಸುತ್ತಿದೆ. ಹಣಕಾಸು ಸವಾಲನ್ನು ನಿಭಾಯಿಸುವ ನಿಟ್ಟಿನಲ್ಲಿ ಹಲವಾರು ರಾಜ್ಯಗಳು ಈಗಾಗಲೇ ಸರ್ಕಾರಿ ನೌಕರರ ವೇತನಕ್ಕೆ ಕತ್ತರಿ ಪ್ರಯೋಗ ಮಾಡಿದೆ. ಆದರೆ ಕೇಂದ್ರ ಸರಕಾರದ ಮುಂದೆ ವೇತನ ಕಡಿತಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯವು ಸ್ಪಷ್ಟನೆ ನೀಡಿದೆ.
'ಕೇಂದ್ರ ಸರ್ಕಾರಿ ನೌಕರರ ಅಸ್ತಿತ್ವದಲ್ಲಿರುವ ಯಾವುದೇ ವಿಭಾಗದ ವೇತನದಲ್ಲಿ ಯಾವುದೇ ಕಡಿತಕ್ಕೆ ಸರಕಾರ ಮುಂದೆ ಪ್ರಸ್ತಾಪಗಳಿಲ್ಲ. ಈ ಬಗ್ಗೆ ಕೆಲವು ವಿಭಾಗದ ಮಾಧ್ಯಮಗಳಲ್ಲಿನ ವರದಿಗಳು ಸುಳ್ಳಾಗಿದ್ದು, ಯಾವುದೇ ಸತ್ಯಾಂಶವಿಲ್ಲ' ಎಂದು ಕೇಂದ್ರ ಹಣಕಾಸು ಸಚಿವಾಲಯವು ಟ್ವೀಟ್ ಮಾಡಿದೆ.

ಇದಕ್ಕೂ ಮೊದಲು ಕೇಂದ್ರ ನೌಕರರ ವೇತನ ಕಡಿತ ಸಂಬಂಧಿಸಿದಂತೆ ಪ್ರಮುಖ ಮಾಧ್ಯಮಗಳು ವರದಿ ಮಾಡಿದ್ದವು. ಈ ನಿಟ್ಟಿನಲ್ಲಿ ಹಣಕಾಸು ಸಚಿವಾಲಯವು ಸ್ಪಷ್ಟನೆಯೊಂದಿಗೆ ಗೊಂದಲ ಪರಿಹರಿಸಿದೆ. ಕೇಂದ್ರ ಸರ್ಕಾರಿ ನೌಕರರ ಪಿಂಚಣಿಯಲ್ಲಿ 20 ಪರ್ಸೆಂಟ್‌ರಷ್ಟು ಕಡಿತವಾಗಲಿದೆ ಎಂಬ ಬಗ್ಗೆಯೂ ಮಾಧ್ಯಮಗಳಲ್ಲಿ ವರದಿಗಳು ಬಂದಿದ್ದವು. ಆಗಲೂ ಹಣಕಾಸು ಸಚಿವಾಲಯವು ಸ್ಪಷ್ಟೀಕರಣ ನೀಡಿತ್ತು.
ದೇಶದಲ್ಲಿ ಮಾರ್ಚ್ 25ರಂದು ಮೊದಲ ಬಾರಿಗೆ ಲಾಕ್‌ಡೌನ್ ಜಾರಿಗೆ ಬಂದಿತ್ತು. ಮೂರನೇ ಬಾರಿಗೆ ಮೇ 17ರ ವರೆಗೆ ವಿಸ್ತರಿಸಲಾಗಿದೆ. ಇದರಿಂದಾಗಿ ದೇಶದ ಬಹುತೇಕ ಎಲ್ಲಾ ವಲಯಗಳು ಭಾರೀ ಆಘಾತ ಅನುಭವಿಸಿದ್ದು, ಲಕ್ಷಾಂತರ ಕೋಟಿ ನಷ್ಟ ಅನುಭವಿಸಿವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications