For Quick Alerts
ALLOW NOTIFICATIONS  
For Daily Alerts

ಎನ್ಎಸ್ಇ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಬಂಧಿಸಿದ ಸಿಬಿಐ

|

ಮುಂಬೈ, ಜೂನ್ 22: ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌(ಎನ್‌ಎಸ್‌ಇ)ಯ ಗೌಪ್ಯ ಮಾಹಿತಿ ಹಂಚಿಕೆ, ಷೇರು ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ(ಜೂನ್ 22)ದಂದು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಸಿಬಿಐ ಬಂಧಿಸಿದೆ.

ಮಾಜಿ ಮುಖ್ಯಸ್ಥರಾದ ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ಈ ಹಿಂದೆ ವರದಿ ಆಗಿತ್ತು. ಈ ಯೋಗಿಯೇ ಆನಂದ್ ಸುಬ್ರಮಣಿಯನ್ ಎಂದು ಹೇಳಲಾಗಿದೆ.

ಭಾರತದ ಅತಿದೊಡ್ಡ ಸ್ಟಾಕ್ ಎಕ್ಸ್‌ಚೇಂಜ್‌ ಎನ್‌ಎಸ್‌ಇಯ ಮಾಜಿ ಮುಖ್ಯಸ್ಥರು ಚಿತ್ರಾ ರಾಮಕೃಷ್ಣ ಹಿಮಾಲಯದ ಓರ್ವ ಯೋಗಿಯೊಂದಿಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆ ಯೋಗಿಯ ಸಲಹೆಯನ್ನು ಪಡೆದು ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಮಾರುಕಟ್ಟೆ ನಿಯಂತ್ರಕ ಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ತಿಳಿಸಿದೆ ಎಂದು reuters ವರದಿ ಮಾಡಿದೆ.

ಎನ್ಎಸ್ಇ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಬಂಧಿಸಿದ ಸಿಬಿಐ

4 ಲಕ್ಷ ಕೋಟಿ ಅಮೆರಿಕನ್ ಡಾಲರ್ ಮಾರುಕಟ್ಟೆ ಮೌಲ್ಯದ ಭಾರತದ ಅತಿ ದೊಡ್ಡ ಷೇರು ವಿನಿಮಯ ಕೇಂದ್ರ ಎನ್​ಎಸ್​ಇ (NSE)ಗೆ ಮಾಜಿ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಚಿತ್ರಾ ರಾಮಕೃಷ್ಣ ತಾನು ನೋಡದ, ತನಗೆ ಪರಿಚಯವೇ ಇಲ್ಲದ ಹಿಮಾಲಯದ ಯೋಗಿಯೋರ್ವರ ಸಲಹೆಯನ್ನು ಪಡೆದುಕೊಂಡೇ ನಿರ್ಧಾರವನ್ನು ಕೈಗೊಳ್ಳುತ್ತಿದ್ದರು. NSEಯ ಪ್ರಮುಖ ವ್ಯವಹಾರ ಯೋಜನೆಗಳು ಮತ್ತು ಅಜೆಂಡಾ ಸೇರಿದಂತೆ ಹಲವಾರು ವಿಚಾರಗಳನ್ನು ಆ ಅಪರಿಚಿತ ಯೋಗಿಯೊಂದಿಗೆ ಹಂಚಿಕೊಂಡಿದ್ದಾರೆ ಎಂಬ ವಿಚಾರವನ್ನು ಸೆಬಿ ಬಹಿರಂಗಪಡಿಸಿದೆ.

ವಿವಿಧ ಕಂಪನಿಗಳ ಷೇರು ಮೌಲ್ಯ ಹಾಗೂ ಇತಿಹಾಸ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರೋಕರೇಜ್ ಹೌಸ್ ಒಪಿಜಿ ಸೆಕ್ಯುರಿಟೀಸ್‌ನ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಗುಪ್ತಾರನ್ನು ಸಿಬಿಐ ಬಂಧಿಸಿದೆ.

ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಸಹ-ಸ್ಥಳ ಹಗರಣದ ಪ್ರಮುಖ ಫಲಾನುಭವಿಗಳಲ್ಲಿ ದೆಹಲಿ ಮೂಲದ ಬ್ರೋಕರೇಜ್‌ನ ಸಂಜಯ್ ಗುಪ್ತಾ ಹೆಸರು ಕೇಳಿ ಬಂದಿದೆ.

ಕಳೆದ ತಿಂಗಳು ದೇಶದ 10 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿ, ವಿವಿಧ ಸಂಸ್ಥೆಗಳ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ದೆಹಲಿ, ಮುಂಬೈ, ಕೋಲ್ಕತಾ, ಗಾಂಧಿನಗರ, ನೋಯ್ಡಾ ಹಾಗೂ ಗುರುಗ್ರಾಮದಲ್ಲಿನ ಹಣಕಾಸು ಸಂಸ್ಥೆಗಳ ಮೇಲೆ ದಾಳಿ ನಡೆದಿತ್ತು.

ಎನ್‌ಎಸ್‌ಇ ಸ್ಥಳ ಪರಭಾರೆ ಪ್ರಕರಣದಲ್ಲಿ, ಆರೋಪಿ ರಾಮಕೃಷ್ಣ ತನ್ನ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಆರೋಪಿ ಆನಂದ್ ಸುಬ್ರಮಣಿಯನ್ ಅವರನ್ನು ಗ್ರೂಪ್ ಆಪರೇಟಿಂಗ್ ಆಫೀಸರ್ ಮತ್ತು ಎಂಡಿ ಸಲಹೆಗಾರರನ್ನಾಗಿ ಮರು ನೇಮಕ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಸಿಬಿಐ ಹೇಳಿದೆ. ಏಪ್ರಿಲ್ 1, 2015 ರಿಂದ, NRC ಮತ್ತು ಮಂಡಳಿಯ ಗಮನಕ್ಕೆ ತರದೆ ನೇಮಕಾತಿ ಮಾಡಲಾಗಿದೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.

ನಕಲಿ ಕ್ರಿಪ್ಟೋಕರೆನ್ಸಿ ವಿನಿಮಯ ಜಾಲಕ್ಕೆ 1000 ಕೋಟಿ ರು ನಷ್ಟನಕಲಿ ಕ್ರಿಪ್ಟೋಕರೆನ್ಸಿ ವಿನಿಮಯ ಜಾಲಕ್ಕೆ 1000 ಕೋಟಿ ರು ನಷ್ಟ

ಫೆಬ್ರವರಿ 11 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಷೇರು ನಿಯಂತ್ರಕ ಸೆಬಿ ಆದೇಶ ಹೊರಡಿಸಿ, ಚಿತ್ರಾ ರಾಮಕೃಷ್ಣ ಅವರು ನೇಮಕಾತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 3 ಕೋಟಿ ರೂಪಾಯಿ ದಂಡವನ್ನು ವಿಧಿಸಿತ್ತು.

ಚಿತ್ರಾ ರಾಮಕೃಷ್ಣ ಅವರು 2013 ಮತ್ತು 2016 ರ ನಡುವೆ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (ಎನ್‌ಎಸ್‌ಇ) ನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಿಇಒ ಆಗಿದ್ದರು ಮತ್ತು "ವೈಯಕ್ತಿಕ ಕಾರಣಗಳನ್ನು" ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು. ಎನ್‌ಎಸ್‌ಇ ಮಾಜಿ ಎಂಡಿ ಮತ್ತು ಸಿಇಒ ಚಿತ್ರಾ ರಾಮಕೃಷ್ಣ ಅವರು ಮತ್ತು ಇತರರ ವಿರುದ್ಧ ತೆರಿಗೆ ವಂಚನೆ ತನಿಖೆಯ ಭಾಗವಾಗಿ ಮುಂಬೈನಲ್ಲಿ ಆದಾಯ ತೆರಿಗೆ ಇಲಾಖೆ ಇತ್ತೀಚೆಗೆ ದಾಳಿ ನಡೆಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

English summary

NSE Co-Location Case: Another Prime Accused Sanjay Gupta arrested by CBI

The Central Bureau of Investigation (CBI) has arrested the Managing Director of brokerage house OPG Securities Sanjay Gupta in connection with the National Stock Exchange (NSE) co-location case.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X