ಈರುಳ್ಳಿ ರಫ್ತು ಮೇಲಿನ ನಿಷೇಧವು 31 ಮಾರ್ಚ್ 2024 ರವರೆಗೆ ನಿಷೇಧವನ್ನು ಮುಂದುವರಿಸುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಲದೆ ಈರುಳ್ಳಿ ಮೇಲಿನ ನಿಷೇಧ ತೆಗೆದು ಹಾಕಿರುವ ವರದಿಯನ್ನು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ನಿರಾಕರಿಸಿದ್ದಾರೆ. ಈರುಳ್ಳಿ ರಫ್ತು ಮೇಲಿನ ನಿಷೇಧ ಮುಂದುವರಿದಿದ್ದು, ಅದರ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಹೇಳಿದರು.
ಕೇಂದ್ರ ಸರಕಾರವು ದೇಶೀಯ ಮಟ್ಟದಲ್ಲಿ ಈರುಳ್ಳಿಯ ಲಭ್ಯತೆಯನ್ನು ಹೆಚ್ಚಿಸಲು ಮತ್ತು ಬೆಲೆಗಳನ್ನು ನಿಯಂತ್ರಣದಲ್ಲಿಡಲು ಬಯಸುತ್ತಿದೆ. ಈ ಕಾರಣದಿಂದ ರಫ್ತು ನಿಷೇಧ ಮುಂದುವರಿಯಲಿದೆ ಎಂದು ಅವರು ವಿವರಿಸಿದ್ದಾರೆ.

ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ದೇಶೀಯ ಗ್ರಾಹಕರಿಗೆ ಸಮಂಜಸವಾದ ಬೆಲೆಯಲ್ಲಿ ಈರುಳ್ಳಿ ಸಮರ್ಪಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ದೊಡ್ಡ ಆದ್ಯತೆಯಾಗಿದೆ ಎಂದು ಅವರು ಹೇಳಿದರು. ಈಗಾಗಲೇ ಘೋಷಿಸಿರುವ 2024ರ ಮಾರ್ಚ್ 31ರ ತನಕ ಈರುಳ್ಳಿ ರಫ್ತು ನಿಷೇಧ ಮುಂದುವರಿಯಲಿದೆ ಎಂದು ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.
ಡಿಸೆಂಬರ್ 8, 2023 ರಂದು ಸರ್ಕಾರವು ಮಾರ್ಚ್ 31 ರವರೆಗೆ ಈರುಳ್ಳಿ ರಫ್ತು ನಿಷೇಧಿಸಿತ್ತು. ಈರುಳ್ಳಿ ರಫ್ತಿನ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಸುದ್ದಿ ಹೊರಬಿದ್ದ ತಕ್ಷಣ, ದೇಶದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾದ ಲಾಸಲ್‌ಗಾಂವ್‌ನಲ್ಲಿ ಫೆಬ್ರವರಿ 19, 2024 ರಂದು ಕ್ವಿಂಟಲ್‌ಗೆ 1,800 ರೂ.ಗೆ ಸಗಟು ಈರುಳ್ಳಿ ಬೆಲೆ 40.62 ಪ್ರತಿಶತದಷ್ಟು ಹೆಚ್ಚಾಗಿದೆ.
ರಫ್ತು ನಿಷೇಧದ ಹಿಂಪಡೆಯುವುದಿಲ್ಲ
2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಮುಂದಿನ ತಿಂಗಳು ಪ್ರಕಟವಾಗುವ ಸಾಧ್ಯತೆ ಇದೆ. ಮತ್ತು ಒಂದೂವರೆ ತಿಂಗಳ ನಂತರ ದೇಶದಲ್ಲಿ ಮತದಾನ ಪ್ರಾರಂಭವಾಗುವ ಸಾಧ್ಯತೆಯಿದೆ, ಇಂತಹ ಪರಿಸ್ಥಿತಿಯಲ್ಲಿ ಸರ್ಕಾರವು ದುಬಾರಿ ಈರುಳ್ಳಿಯ ಬೆಲೆ ಗಗನಕ್ಕೆ ಮುಟ್ಟುವದನ್ನು ನೋಡಲು ಬಯಸುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಾರ್ಚ್ 31ರ ನಂತರವೂ ಈರುಳ್ಳಿ ರಫ್ತಿನ ಮೇಲಿನ ನಿಷೇಧ ತೆರವಾಗುವ ಸಾಧ್ಯತೆಗಳು ತೀರಾ ಕಡಿಮೆ.

ಚಳಿಗಾಲ ಋತುವಿನಲ್ಲಿ ಈರುಳ್ಳಿ ಉತ್ಪಾದನೆಯು ವಿಶೇಷವಾಗಿ ಮಹಾರಾಷ್ಟ್ರದಲ್ಲಿ ಕಡಿಮೆ ಆಗಿರುತ್ತದೆ. 2023 ರ ಚಳಿಗಾಲದ ಋತುವಿನಲ್ಲಿ ಈರುಳ್ಳಿ ಉತ್ಪಾದನೆಯು 2.27 ಕೋಟಿ ಟನ್ ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಲ್ಲಿ ಕಡಿಮೆ ಗುಣ ಮಟ್ಟದ ಈರುಳ್ಳಿಗೆ ಕೆಜಿಗೆ 14 ರೂ. ಆಸುಪಾಸಿನಲ್ಲಿ ದರವಿದ್ದರೆ, ಉತ್ತಮ ಗುಣಮಟ್ಟದ ಈರುಳ್ಳಿಗೆ ಕೆಜಿಗೆ 20 ರೂ. ಆಸುಪಾಸಿನಲ್ಲಿ ದರವಿದೆ. ಆನ್‌ಲೈನ್ ತಾಣಗಳಲ್ಲಿ ಮಾತ್ರ ಕೆಜಿಗೆ 25 - 30 ರೂ. ಆಸುಪಾಸಿನಲ್ಲಿ ದರವಿದೆ.


Click it and Unblock the Notifications