ತೈಲ ಬಿಕ್ಕಟ್ಟು ಪರಿಹಾರಕ್ಕಾಗಿ ಸೌದಿ ಅರೇಬಿಯಾ ನೇತೃತ್ವದಲ್ಲಿನ ಕಚ್ಚಾ ತೈಲ ರಫ್ತು ದೇಶಗಳ ಸಂಘಟನೆ(ಒಪೆಕ್) ಮತ್ತು ಅದರ ಮಿತ್ರ ದೇಶಗಳು ಸೋಮವಾರ ಕರೆದಿದ್ದ ತುರ್ತು ಸಭೆ ಗುರುವಾರಕ್ಕೆ ಮುಂದೂಡಿಕೆಯಾಗಿದೆ.
ನೆಲಕಚ್ಚಿರುವ ತೈಲ ಬೆಲೆಯನ್ನು ಸುಧಾರಿಸಲು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ಕರೆಯಲಾಗಿತ್ತು, ಆದರೆ ಸಭೆ ಮುಂದೂಡಿರುವುದಾಗಿ ಒಪೆಕ್ ತಿಳಿಸಿದೆ. ಆದರೆ ಇದಕ್ಕೆ ಕಾರಣ ಏನು ಎಂಬುದನ್ನು ತಿಳಿಸಿಲ್ಲ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆಯು ತಳ ಮಟ್ಟಕ್ಕೆ ತಲುಪಿದ್ದು ಎರಡು ಮೂರಂಶದಷ್ಟು ಕುಸಿದಿರುವುದಕ್ಕೆ ಕಡಿವಾಣ ಹಾಕಲು ಈ ತುರ್ತು ಸಭೆ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ವಿಚಾರ ಖಚಿತವಾಗುತ್ತಿದ್ದಂತೆ ಬ್ರೆಂಟ್ ಕಚ್ಛಾ ತೈಲದ ದರ 10 ಪರ್ಸೆಂಟ್ ಏರಿಕೆ ಕಂಡಿತ್ತು.
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೌದಿ ಅರೇಬಿಯಾ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದ ಬಳಿಕ ಈ ಸಭೆ ಕರೆಯಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ತೈಲ ಉತ್ಪಾದನೆ ತಗ್ಗಿಸಲು ಸೌದಿ ಅರೇಬಿಯಾ ಮತ್ತು ಅಮೆರಿಕಾದೊಂದಿಗೆ ಸಹಕರಿಸಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ದಿನಕ್ಕೆ 1 ಕೋಟಿ ಬ್ಯಾರಲ್‌ಗಳಷ್ಟು ಉತ್ಪಾದನೆ ತಗ್ಗಿಸುವ ಕುರಿತು ತೈಲ ಉತ್ಪಾದನಾ ದೇಶಗಳೊಂದಿಗೆ ಚರ್ಚೆ ನಡೆಸಲು ಸಿದ್ಧತೆ ನಡೆಸಲಾಗಿದೆ.
More From GoodReturns

Petrol-Diesel Price: ಏರಿಕೆಯಾಗುವುದಿಲ್ಲ ಪೆಟ್ರೋಲ್, ಡೀಸೆಲ್ ಬೆಲೆ; ಭಾರತದ ಇಂಧನ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು?

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications