ತೈಲ ಬಿಕ್ಕಟ್ಟು ಪರಿಹಾರಕ್ಕಾಗಿ ಸೌದಿ ಅರೇಬಿಯಾ ನೇತೃತ್ವದಲ್ಲಿನ ಕಚ್ಚಾ ತೈಲ ರಫ್ತು ದೇಶಗಳ ಸಂಘಟನೆ(ಒಪೆಕ್) ಮತ್ತು ಅದರ ಮಿತ್ರ ದೇಶಗಳು(ಒಪೆಕ್ +) ರಷ್ಯಾದೊಂದಿಗೆ ಐತಿಹಾಸಿಕ ಒಪ್ಪಂದವನ್ನು ಮಾಡಿಕೊಂಡಿವೆ. ಕಚ್ಚಾ ತೈಲ ಉತ್ಪಾದಿಸುವ ಪ್ರಮುಖ ದೇಶಗಳು ಪ್ರತಿ ದಿನ 97 ಲಕ್ಷ ಬ್ಯಾರೆಲ್ ತೈಲ ಉತ್ಪಾದನೆ ಕಡಿತಗೊಳಿಸುವ ಒಪ್ಪಂದಕ್ಕೆ ಬಂದಿವೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಒಪೆಕ್ ಮತ್ತು ರಷ್ಯಾ ನೇತೃತ್ವದಲ್ಲಿನ ಮಿತ್ರ ದೇಶಗಳು ಒಪ್ಪಂದಕ್ಕೆ ಬಂದಿವೆ. ಈ ಸಭೆಯಲ್ಲಿ ತೈಲ ಉತ್ಪಾದನೆ ತಗ್ಗಿಸುವ ರಾಜಿ ಸೂತ್ರಕ್ಕೆ ಸಮ್ಮತಿಸಿವೆ. ಮೇ ತಿಂಗಳಿನಲ್ಲಿ ಪ್ರತಿ ದಿನ 97 ಲಕ್ಷ ಬ್ಯಾರೆಲ್‌ಗಳಷ್ಟು ಕಚ್ಚಾ ತೈಲ ಉತ್ಪಾದನೆ ಮಾಡಲು ಒಪ್ಪಿಕೊಂಡಿವೆ.

ಈ ಮೊದಲು ಪ್ರತಿದಿನಕ್ಕೆ 1 ಕೋಟಿ ಬ್ಯಾರೆಲ್‌ಗಳಷ್ಟು ಉತ್ಪಾದನೆ ತಗ್ಗಿಸುವ ನಿರ್ಧಾರಕ್ಕೆ ಬರಲಾಗಿತ್ತು. ಆದರೆ ಇದಕ್ಕೆ ಮೆಕ್ಸಿಕೊ ಒಪ್ಪಿಗೆ ನೀಡಿರಲಿಲ್ಲ. ಆದರೆ ಇದೀಗ ಮಾತುಕತೆ ಯಶಸ್ವಿಯಾಗಿ ಪ್ರತಿ ದಿನ 97 ಲಕ್ಷ ಬ್ಯಾರೆಲ್ ಕಡಿತಕ್ಕೆ ಮುಂದಾಗಲಿವೆ.
ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ವಿಶ್ವದಾದ್ಯಂತ ತೈಲ ಬೇಡಿಕೆ ಕುಸಿದಿರುವುದರಿಂದ ಪ್ರತಿ ದಿನ ಕ್ರಮವಾಗಿ 2.7 ಕೋಟಿ ಮತ್ತು 2 ಕೋಟಿ ಬ್ಯಾರೆಲ್‌ಗಳಷ್ಟು ಕಚ್ಚಾ ತೈಲ ಬಳಕೆ ಕಡಿಮೆಯಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಉತ್ಪಾದನೆ ಕಡಿತಗೊಳಿಸುವ ಒಮ್ಮತಾಭಿಪ್ರಾಯ ನೆಮ್ಮದಿ ತರಿಸುವುದು ಎಂದು ಕೆನಡಾ ಹೇಳಿದೆ.
ಈ ಒಪ್ಪಂದದ ಬಗ್ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಹರ್ಷ ವ್ಯಕ್ತಪಡಿಸಿದ್ದು, ಇದರಿಂದ ಅಮೆರಿಕದ ಇಂಧನ ವಲಯದಲ್ಲಿನ ಲಕ್ಷಾಂತರ ಉದ್ಯೋಗ ಅವಕಾಶಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದಿದ್ದಾರೆ.
More From GoodReturns

Petrol-Diesel Price: ಏರಿಕೆಯಾಗುವುದಿಲ್ಲ ಪೆಟ್ರೋಲ್, ಡೀಸೆಲ್ ಬೆಲೆ; ಭಾರತದ ಇಂಧನ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು?

Petrol-Diesel Price: ಮಧ್ಯಪ್ರಾಚ್ಯದ ಸಂಘರ್ಷ; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಾ?

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications