ಸೋಮವಾರ ಆರಂಭಿಕ ವಹಿವಾಟಿನಲ್ಲಿ ಷೇರು ಮಾರುಕಟ್ಟೆಯು ಕುಸಿತ ಕಂಡಿದೆ. ಜಾಗತಿಕ ಮಾರುಕಟ್ಟೆ ಬೆಳವಣಿಗೆಯನ್ನು ಅನುಸರಿಸಿದೆ. ಹೂಡಿಕೆದಾರರು ಆರ್ಥಿಕ ಹಿಂಜರಿತದ ಆತಂಕದಲ್ಲಿದ್ದು ಇದು ಷೇರು ಮಾರುಕಟ್ಟೆ ತತ್ತರಿಸುವಂತೆ ಮಾಡಿದೆ. ಆರಂಭಿಕ ವಹಿವಾಟಿನಲ್ಲಿಯೇ ಲಾಭ, ನಷ್ಟದ ಏರಿಳಿತ ಕಂಡು ಬಂದಿದೆ.
30-ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ ಆರಂಭಿಕ ಸೆಷನ್‌ನಲ್ಲಿ 102 ಪಾಯಿಂಟ್‌ಗಳು ಅಥವಾ ಶೇಕಡಾ 0.20 ರಷ್ಟು ಕುಸಿದು 52,805 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 47 ಪಾಯಿಂಟ್ ಅಥವಾ 0.30 ರಷ್ಟು ಕಡಿಮೆಯಾಗಿ 15,705 ಕ್ಕೆ ವಹಿವಾಟು ಆರಂಭ ಮಾಡಿದೆ.
ಈ ಸಂದರ್ಭದಲ್ಲೇ ನಿಫ್ಟಿ ಮಿಡ್‌ಕ್ಯಾಪ್ 100 ಶೇಕಡಾ 0.15 ರಷ್ಟು ಮತ್ತು ಸ್ಮಾಲ್ ಕ್ಯಾಪ್ ಶೇಕಡಾ 0.48 ರಷ್ಟು ಏರಿಕೆಯಾಗಿದೆ. 15 ಸೆಕ್ಟರ್ ಗೇಜ್‌ಗಳಲ್ಲಿ ನಾಲ್ಕು ನಷ್ಟವನ್ನು ಕಂಡಿದೆ. ನಿಫ್ಟಿ ಮೆಟಲ್, ನಿಫ್ಟಿ ಐಟಿ ಮತ್ತು ನಿಫ್ಟಿ ಆಯಿಲ್ ಮತ್ತು ಗ್ಯಾಸ್ ಕ್ರಮವಾಗಿ ಶೇಕಡಾ 1.84, ಶೇಕಡಾ 0.82 ಮತ್ತು ಶೇಕಡಾ 0.34 ರಷ್ಟು ಕುಸಿದಿದೆ.

ಒಎನ್‌ಜಿಸಿ ಟಾಪ್ ನಿಫ್ಟಿ ಲೂಸರ್
ಒಎನ್‌ಜಿಸಿ ಟಾಪ್ ನಿಫ್ಟಿ ಲೂಸರ್ ಆಗಿದೆ. ಒಎನ್‌ಜಿಸಿ ಸ್ಟಾಕ್ ಷೇರುಗಳು ಶೇಕಡಾ 4.24ರಷ್ಟು ಕುಸಿತ ಕಂಡು ರೂಪಾಯಿ 125.50 ಕ್ಕೆ ತಲುಪಿದೆ. ಹಿಂದಾಲ್ಕೊ, ಜೆಎಸ್‌ಡಬ್ಲ್ಯೂ ಸ್ಟೀಲ್, ಟಾಟಾ ಸ್ಟೀಲ್ ಮತ್ತು ಟಿಸಿಎಸ್ ಕೂಡ ನಷ್ಟವನ್ನು ಕಂಡಿದೆ.
ಬಿಎಸ್‌ಇಯಲ್ಲಿ 775 ಷೇರುಗಳು ಕುಸಿತ ಕಂಡರೆ 1,792 ಷೇರುಗಳು ಲಾಭವನ್ನು ಕಂಡಿದೆ. 30-ಷೇರುಗಳ ಬಿಎಸ್‌ಇ ಸೂಚ್ಯಂಕದಲ್ಲಿ, ಟಾಟಾ ಸ್ಟೀಲ್, ಟಿಸಿಎಸ್, ಎಂ & ಎಂ, ವಿಪ್ರೋ, ಟೆಕ್ ಮಹೀಂದ್ರಾ, ಎಚ್‌ಡಿಎಫ್‌ಸಿ, ಡಾ ರೆಡ್ಡೀಸ್, ಇನ್ಫೋಸಿಸ್, ಏಷ್ಯನ್ ಪೇಂಟ್ಸ್, ಅಲ್ಟ್ರಾಟೆಕ್ ಸಿಮೆಂಟ್, ಭಾರ್ತಿ ಏರ್‌ಟೆಲ್ ಮತ್ತು ಎಲ್ & ಟಿ ಭಾರೀ ನಷ್ಟವನ್ನು ಕಂಡಿದೆ. ಈ ನಡುವೆ ಇಂಡಸ್‌ಇಂಡ್ ಬ್ಯಾಂಕ್, ಐಟಿಸಿ, ಸನ್ ಫಾರ್ಮಾ, ಐಸಿಐಸಿಐ ಬ್ಯಾಂಕ್, ಪವರ್‌ಗ್ರಿಡ್ ಮತ್ತು ಮಾರುತಿ ಲಾಭವನ್ನು ಗಳಿಸಿದೆ.
ಎಲ್‌ಐಸಿ ಷೇರು ಏರಿಕೆ
ದೇಶದ ಅತಿದೊಡ್ಡ ವಿಮಾ ಸಂಸ್ಥೆ ಮತ್ತು ಅತಿದೊಡ್ಡ ದೇಶೀಯ ಹಣಕಾಸು ಹೂಡಿಕೆದಾರರಾದ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಷೇರುಗಳು ಶೇ 0.73 ರಷ್ಟು ಏರಿಕೆಯಾಗಿ ರೂಪಾಯಿ 681.70ರಲ್ಲಿ ವಹಿವಾಟು ಆರಂಭಿಸಿದೆ. ಶುಕ್ರವಾರದಂದು ಸೆನ್ಸೆಕ್ಸ್ 111 ಅಂಕಗಳು ಅಥವಾ ಶೇಕಡಾ 0.21 ರಷ್ಟು ಕುಸಿದು 52,908 ಕ್ಕೆ ತಲುಪಿದ್ದರೆ, ನಿಫ್ಟಿ 28 ಪಾಯಿಂಟ್ ಅಥವಾ ಶೇಕಡಾ 0.18 ಇಳಿದು 15,752 ಕ್ಕೆ ಸ್ಥಿರವಾಯಿತು.
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications