ಜಾಗತಿಕ ಮಾರುಕಟ್ಟೆಗಳ ಉತ್ತಮ ಬೆಳವಣಿಗೆಯ ನಡುವೆ ಭಾರತೀಯ ಷೇರುಗಳು ಗುರುವಾರ ಆರಂಭಿಕ ವ್ಯವಹಾರಗಳಲ್ಲಿ ಜಿಗಿದಿದೆ. ಯುಎಸ್ ಫೆಡರಲ್ ರಿಸರ್ವ್‌ನ ಆರಂಭಿಕ ಮೇ ಸಭೆಯ ನಂತರ ಯುಎಸ್ ಸ್ಟಾಕ್‌ಗಳು ಏರಿಕೆ ಕಂಡಿದೆ. ಮುಂಬರುವ ತಿಂಗಳುಗಳಲ್ಲಿ ಸೆಂಟ್ರಲ್ ಬ್ಯಾಂಕ್ ಇನ್ನೂ ದರ ಹೆಚ್ಚಳ ಮಾಡುವ ಸಾಧ್ಯತೆ ಕಂಡು ಬಂದಿದೆ.
ಆರಂಭಿಕ ವಹಿವಾಟಿನಲ್ಲಿ 30-ಷೇರು ಬಿಎಸ್‌ಇ ಸೆನ್ಸೆಕ್ಸ್ 304 ಪಾಯಿಂಟ್‌ಗಳು ಅಥವಾ ಶೇಕಡಾ 0.57 ರಷ್ಟು ಏರಿಕೆಯಾಗಿ 54,053 ಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ 85 ಪಾಯಿಂಟ್ ಅಥವಾ 0.53 ರಷ್ಟು ಏರಿಕೆಯಾಗಿ 16,111 ಕ್ಕೆ ವಹಿವಾಟು ನಡೆಸಿದೆ.
ನಿಫ್ಟಿ ಮಿಡ್‌ಕ್ಯಾಪ್ 100 ಶೇಕಡಾ 0.43 ರಷ್ಟು ಮತ್ತು ಸ್ಮಾಲ್ ಕ್ಯಾಪ್ ಶೇಕಡಾ 0.30 ರಷ್ಟು ಏರಿಕೆಯಾಗಿದೆ. ನಿಫ್ಟಿ ಬ್ಯಾಂಕ್, ನಿಫ್ಟಿ ಫೈನಾನ್ಷಿಯಲ್ ಸರ್ವಿಸಸ್ ಮತ್ತು ನಿಫ್ಟಿ ಐಟಿಗಳು ಕ್ರಮವಾಗಿ ಶೇಕಡಾ 0.95, 0.90 ಮತ್ತು 0.87 ರಷ್ಟು ಏರಿಕೆಯಾಗಿದೆ.

ಯಾರಿಗೆ ಲಾಭ, ಯಾರಿಗೆ ನಷ್ಟ?
ಎಚ್‌ಡಿಎಫ್‌ಸಿ ಟಾಪ್ ಗೇನರ್ ಆಗಿದೆ. ಎಚ್‌ಡಿಎಫ್‌ಸಿ ಷೇರುಗಳು ಶೇಕಡಾ 1.35 ರಷ್ಟು ಏರಿಕೆಯಾಗಿ ರೂಪಾಯಿ 2,267.70 ಕ್ಕೆ ತಲುಪಿದೆ. ಐಸಿಐಸಿಐ ಬ್ಯಾಂಕ್, ವಿಪ್ರೋ, ನೆಸ್ಲೆ ಇಂಡಿಯಾ ಮತ್ತು ಹಿಂಡಾಲ್ಕೊ ಸಹ ಲಾಭ ಗಳಿಸಿದೆ.
30-ಷೇರು ಸೂಚ್ಯಂಕದಲ್ಲಿ, ಎಚ್‌ಡಿಎಫ್‌ಸಿ ಟ್ವಿನ್ಸ್ (ಎಚ್‌ಡಿಎಫ್‌ಸಿ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್), ವಿಪ್ರೋ, ಟೆಕ್ ಮಹೀಂದ್ರ, ಟಿಸಿಎಸ್, ಐಸಿಐಸಿಐ ಬ್ಯಾಂಕ್, ನೆಸ್ಲೆ ಇಂಡಿಯಾ ಮತ್ತು ಸನ್ ಫಾರ್ಮಾ ಹೆಚ್ಚು ಲಾಭ ಗಳಿಸಿದೆ. ಏಷ್ಯನ್ ಪೇಂಟ್ಸ್, ಎನ್‌ಟಿಪಿಸಿ, ಹಿಂದೂಸ್ತಾನ್ ಯೂನಿಲಿವರ್, ಮಾರುತಿ, ಐಟಿಸಿ ಮತ್ತು ಎಂ & ಎಂ ನಷ್ಟವನ್ನು ಕಂಡಿದೆ.
ಬುಧವಾರದಂದು ಸೆನ್ಸೆಕ್ಸ್ 303 ಪಾಯಿಂಟ್ ಅಥವಾ ಶೇಕಡಾ 0.56 ರಷ್ಟು ಕುಸಿದು 53,749 ಕ್ಕೆ ತಲುಪಿದ್ದರೆ, ನಿಫ್ಟಿ 99 ಪಾಯಿಂಟ್ ಅಥವಾ 0.62 ಶೇಕಡಾ ಕುಸಿದು 16,026 ಕ್ಕೆ ಸ್ಥಿರವಾಯಿತು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications