ಪ್ರಸಕ್ತ ವರ್ಷದ ಮಾರ್ಚ್ 31ರ ವೇಳೆಗೆ ದೇಶದ ಒಟ್ಟು 18.74 ಕೋಟಿ ರೈತರು ಕೃಷಿ ಸಾಲದ ಋಣಭಾರ ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ತಿಳಿಸಿದೆ. ದೇಶದಲ್ಲಿ ಸಾಲ ಹೊಂದಿರುವ ರೈತರ ಪೈಕಿ ತಮಿಳುನಾಡು, ಉತ್ತರ ಪ್ರದೇಶ ಹಾಗೂ ಕರ್ನಾಟಕದ ರೈತರು ಸಾಲ ಬಾಕಿ ಉಳಿಸಿಕೊಂಡವರ ಪೈಕಿ ಮೊದಲ ಮೂರು ಸ್ಥಾನ ಪಡೆದುಕೊಂಡಿದ್ದಾರೆ ಎಂದು ಸಂಸತ್ತಿನ ಚಳಿಗಾಳದ ಅಧಿವೇಶನದಲ್ಲಿ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ಅವರು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ.
ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಮಿಳುನಾಡು
ಸದ್ಯ ಈಗಾಗಲೇ ತಿಳಿಸಿದಂತೆ ದೇಶದಲ್ಲಿ ಅತೀ ಹೆಚ್ಚು ಸಾಲ ಹೊಂದಿರುವ ರೈತರ ಪಟ್ಟಿಯಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿದೆ. ತಮಿಳುನಾಡು ಸುಮಾರು 2.88 ಕೋಟಿ ರೈತರು ಸಾಲ ಹೊಂದಿದ್ದು, ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ. ಉಳಿದಂತೆ 1.88 ಕೋಟಿ ರೈತರೊಂದಿಗೆ ಉತ್ತರ ಪ್ರದೇಶ ಎರಡನೇ ಸ್ಥಾನದಲ್ಲಿದೆ. ಇನ್ನು 1.62 ಕೋಟಿ ರೈತರೊಂದಿಗೆ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ ಎಂದು ಲಿಖಿತ ಉತ್ತರದಲ್ಲಿ ರಾಮನಾಥ್ ಠಾಕೂರು ಅವರು ತಿಳಿಸಿದ್ದಾರೆ.

2019ರಿಂದ ಇಲ್ಲಿಯ ವರೆಗೆ ಕೇಂದ್ರ ಸರ್ಕಾರವು ಯಾವುದೇ ಕೃಷಿ ಸಾಲ ಮನ್ನಾ ಯೋಜನೆಯನ್ನು ಘೋಷಿಸಿಲ್ಲ. ಕೆಲವು ರಾಜ್ಯಗಳು ಸ್ವಯಂಪ್ರೇರಿತವಾಗಿ ಕೃಷಿ ಸಾಲ ಮನ್ನಾ ಯೋಜನೆ ಘೋಷಿಸಿಕೊಂಡಿದೆ. ಯಾವುದೇ ರಾಜ್ಯಗಳು ರೈತರ ಪರಿಹಾರ ಕಾರ್ಯಕ್ರಮಕ್ಕೆ ಹೆಚ್ಚುವರಿ ನಿಧಿ ಕೋರಿ ಕೇಂದ್ರಕ್ಕೆ ಮನವಿ ಮಾಡಿಲ್ಲ. ಆದರೆ ಹಲವಾರು ರಾಜ್ಯ ಸರ್ಕಾರಗಳು ತಮ್ಮದೇ ಆದ ಸಾಲ ಮನ್ನಾ ಯೋಜನೆಗಳನ್ನು ಜಾರಿಗೆ ತಂದಿವೆ ಎಂದು ಅವರು ತಿಳಿಸಿದ್ದಾರೆ.
ಅತಿವೃಷ್ಟಿ, ಅನಾವೃಷ್ಟಿಯಿಂದ ಹೆಚ್ಚಿದ ಸಮಸ್ಯೆ
ಸದ್ಯ ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದ ಹವಾಮಾನದ ಮೇಲೆ ವ್ಯತಿರಿಕ್ತ ಪರಿಣಾಮಗಳು ಬೀರುತ್ತಿದ್ದು, ಇದರಿಂದ ಋತುವಿನಲ್ಲೂ ಬದಲಾವಣೆಗಳು ಕಂಡು ಬರುತ್ತಿದೆ. ಒಂದೆಡೆ ಮಾಲಿನ್ಯದಿಂದ ರೈತರ ಕೃಷಿ ಬೆಲೆಗಳಿಗೆ ತೀವ್ರ ಹಾನಿಯಾಗುತ್ತಿದ್ದರೆ ಮತ್ತೊಂದೆಡೆ ಅತಿವೃತ್ತಿಷ್ಟಿಯಿಂದ ರೈಗರ ಬೆಲೆಗಳು ಕೂಡ ನೆರೆಯಲ್ಲಿ ಕೊಚ್ಚಿಕೊಂಡು ಹೋಗಿವೆ. ಇನ್ನು ಅನಾವೃಷ್ಟಿ ಸಮಸ್ಯೆಯು ಭಾರತದ ರೈತರು ಹಿಂದಿನಿಂದಲೂ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಲ್ಲಿ ಒಂದಾಗಿದೆ.
ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರು ಒಂದು ವೇಳೆ ತಾವು ಬೆಳೆದ ಬೆಲೆಗಳು ಸರಿಯಾಗಿ ಫಲಕೊಡದಿದ್ದರೆ ಅಥವಾ ಕೈಗೆ ಸಿಗದಿದ್ದರೆ ಅದು ರೈತರ ಸಾಲ ಮರುಪಾವತಿಯ ಮೇಲೆ ಕೂಡ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಇತ್ತೀಚಿಗೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಹಲವೆಡೆ ಅತಿವೃಷ್ಟಿಯಿಂದ ರೈತರ ಬೆಲೆಗಳು ನೆರೆಯಿಂದ ಕೊಚ್ಚಿಹೋಗಿದ್ದವು. ಪರಿಣಾಮ ಈರುಳ್ಳಿ, ಟೊಮ್ಯಾಟೊ ಬೆಲೆಗಳು ಗಗನಕ್ಕೇರಿ, ಗ್ರಾಹಕರು ಸಮಸ್ಯೆಗೆ ಸಿಲುಕಿದ್ದರು.
ಅಲ್ಲದೆ ಅತ್ತ ಬೆಳೆಗಳು ನೀರಿನಲ್ಲಿ ಕೊಚ್ಚಿಕೊಂಡು ಹೋದ ಹಿನ್ನೆಲೆಯಲ್ಲಿ ರೈತರು ಕೂಡ ಸಹಜವಾಗಿಯೇ ಸಮಸ್ಯೆಗೆ ಸಿಲುಕಿದ್ದರು. ಅದರಲ್ಲೂ ನಮ್ಮ ರಾಜ್ಯ ಕರ್ನಾಟಕದ ಬಗ್ಗೆ ಎಲ್ಲರಿಗೂ ತಿಳಿದಿರುವ ವಿಚಾರ. ಉತ್ತರ ಕರ್ನಾಟಕ ಭಾಗದಲ್ಲಿ ಹಿಂದಿನಿಂದಲೂ ಕಡಿಮೆ ಮಳೆ ಬೀಳುವ ಹಿನ್ನೆಲೆಯಲ್ಲಿ ರೈತರು ಸಮಸ್ಯೆ ಅನುಭವಿಸುತ್ತಲೇ ಬಂದಿದ್ದಾರೆ.
ಅಲ್ಲದೆ ಸಾಮಾನ್ಯವಾಗಿ ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲಿ ಭಾರೀ ಅಥವಾ ಅಕಾಲಿಕ ಮಳೆಯ ಹಿನ್ನೆಲೆಯಲ್ಲಿ ಬೆಳೆಗಳು ಕೂಡ ನೆರೆಯಿಂದ ಕೊಚ್ಚಿಕೊಂಡು ಹೋಗಿವೆ. ಈ ಎಲ್ಲಾ ಪರಿಣಾಮಗಳು ಬ್ಯಾಂಕ್ ಸಾಲ ಮರುಪಾವತಿಯ ಮೇಲೆ ಕೂಡ ಪರಿಣಾಮ ಬೀರುತ್ತಿದೆ ಎಂದು ಕೃಷಿ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೇಂದ್ರದಿಂದ ಸಾಲಮನ್ನಾ ಇಲ್ಲ
ಈಗಾಗಲೇ ಹಲವಾರು ರಾಜ್ಯ ಸರ್ಕಾರಗಳು ತಮ್ಮದೇ ಆದ ಸಾಲ ಮನ್ನಾ ಯೋಜನೆಗಳನ್ನು ಜಾರಿಗೆ ತಂದಿದ್ದರೂ, 2019 ಮತ್ತು 2024 ರ ನಡುವೆ ಕೇಂದ್ರ ಸರ್ಕಾರ ಯಾವುದೇ ಕೃಷಿ ಸಾಲ ಮನ್ನಾವನ್ನು ಘೋಷಿಸಿಲ್ಲ ಎಂದು ಈಗಾಗಲೇ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ಅವರು ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಠಾಕೂರ್ ಅವರ ಪ್ರಕಾರ, ಕೆಲವೊಂದು ರಾಜ್ಯಗಳು ತಮ್ಮದೇ ಆದ ಕೃಷಿ ಸಾಲ ಮನ್ನಾ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಆಯಾ ರಾಜ್ಯಗಳಲ್ಲಿ ಮೂಲಸೌಕರ್ಯ ಕಾಮಗಾರಿಗಳಿಗೆ ಹಣ ಹೊಂದಿಸುವುದು ಕಷ್ಟವಾಗುವ ಸಾಧ್ಯತೆಗಳು ಕೂಡ ಇವೆ ಎಂದು ಹೇಳಲಾಗಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications