Pahalgam Attack: ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ಹೋಟ್ಸ್‌ಪಾಟ್ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಸಂಭವಿಸಿದೆ.ಈ ಘಟನೆ ಕೇವಲ ಭಾರತವನ್ನಷ್ಟೇ ಅಲ್ಲ. ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ.26 ಜನರನ್ನು ಉಗ್ರರು ಹತ್ಯೆ ಮಾಡಿದ್ದಾರೆ.ದೇಶದಾದ್ಯಂತ ಉಗ್ರರ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಕ್ತಪಾತ ನಡೆಸಿ ಓಡಿ ಹೋಗಿರುವ ಪಾಕಿಸ್ತಾನದ ಉಗ್ರರಿಗೆ ಇದೀಗ ಭಾರಿ ಹುಡುಕಾಟ ಶುರುವಾಗಿದೆ. ಒಂದು ಕಡೆ ಜಾಗತಿಕ ಮಟ್ಟದಲ್ಲೂ ಭಾರತಕ್ಕೆ ದೊಡ್ಡ ಮಟ್ಟದ ಬೆಂಬಲ ಸಿಕ್ಕಿದೆ. ಇದೀಗ ಭಾರತ ಸರ್ಕಾರ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಪ್ರಜೆಗಳಿಗೆ ನೀಡಿದ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸುವುದಾಗಿ ಗುರುವಾರ ಪ್ರಕಟಿಸಿದೆ.
ಹೌದು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗುರುವಾರ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. ಏಪ್ರಿಲ್ 27 ರಿಂದ ಜಾರಿಗೆ ಬರುವಂತೆ ಎಲ್ಲಾ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದುಗೊಂಡಿರುವುದರಿಂದ ಅವರು ಭಾರತವನ್ನು ತೊರೆಯಬೇಕಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಭಾರತೀಯರು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ವಿದೇಶಾಂಗ ಸಚಿವಾಲಯ ಸೂಚನೆಯನ್ನು ತಿಳಿಸಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತೆ ಕುರಿತ ಸಂಪುಟ ಸಮಿತಿಯು ತೆಗೆದುಕೊಂಡ ನಿರ್ಧಾರಗಳ ಮುಂದುವರಿಕೆಯಾಗಿ , ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ಎಲ್ಲಾ ಅಸ್ತಿತ್ವದಲ್ಲಿರುವ ಮಾನ್ಯ ವೀಸಾಗಳನ್ನು ಏಪ್ರಿಲ್ 27, 2025 ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು ಏಪ್ರಿಲ್ 29, 2025 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ ಎಂದು ಅದು ಹೇಳಿಕೆಯಲ್ಲಿ ಮಾಹಿತಿಯನ್ನು ತಿಳಿಸಿದೆ.
ತಿದ್ದುಪಡಿ ಮಾಡಲಾದ ವೀಸಾ ಗಡುವು ಮುಗಿಯುವ ಮೊದಲು ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ದೇಶವನ್ನು ತೊರೆಯಬೇಕು ಎಂದು MEA ಹೇಳಿಕೆಯಲ್ಲಿ ಮಾಹಿತಿಯನ್ನು ತಿಳಿಸಿದೆ.ಪಾಕಿಸ್ತಾನದಲ್ಲಿರುವ ಎಲ್ಲಾ ಭಾರತೀಯರು ತಕ್ಷಣ ಮರಳುವಂತೆ ಸರ್ಕಾರ ಸಹ ಕೇಳಿಕೊಂಡಿದೆ. ಪ್ರಸ್ತುತ ಪಾಕಿಸ್ತಾನದಲ್ಲಿರುವ ಭಾರತೀಯ ಪ್ರಜೆಗಳು ಸಹ ಆದಷ್ಟು ಬೇಗ ಭಾರತಕ್ಕೆ ಮರಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ
ಜಮ್ಮು ಮತ್ತು ಕಾಶ್ಮೀರದ ಪ್ರವಾಸಿ ಹೋಟ್ಸ್‌ಪಾಟ್ ಪಹಲ್ಗಾಮ್‌ನಲ್ಲಿ ಉಗ್ರರು ಭಾಷೆ ಕೇಳಿಲ್ಲ, ನಿಮ್ಮದು ಯಾವ ರಾಜ್ಯ ಎಂದು ಕೇಳಿಲ್ಲ... ಅವರು ಕೇಳಿದ್ದೆಲ್ಲವೂ ನಿಮ್ಮ ಧರ್ಮ ಯಾವುದು ಎನ್ನುವುದು. ಇದು ಸ್ಪಷ್ಟವಾಗಿ ಹಿಂದೂಗಳನ್ನೇ ಗುರಿಯಾಗಿಸಿಕೊಂಡು 26 ಜನರನ್ನು ಹತ್ಯೆ ಮಾಡಿದ್ದಾರೆ.
ಭಾರತವು ಪಾಕಿಸ್ತಾನದ ವಿರುದ್ಧ ಐದು ದಂಡನಾತ್ಮಕ ಕ್ರಮಗಳನ್ನು ಕೈಗೊಂಡಿತು, ಅವುಗಳಲ್ಲಿ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು, ಅಟ್ಟಾರಿ ಗಡಿಯಲ್ಲಿರುವ ಸಮಗ್ರ ಚೆಕ್ ಪೋಸ್ಟ್ ಅನ್ನು ಮುಚ್ಚುವುದು ಮತ್ತು ಹೈಕಮಿಷನ್‌ಗಳ ಒಟ್ಟಾರೆ ಬಲವನ್ನು ಕಡಿತಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅಮಾಯಕರ ಜೀವ ತೆಗೆದ ಪಾಪಿ ಉಗ್ರರನ್ನು ಹಿಗ್ಗಾಮುಗ್ಗಾ ಅಟ್ಟಾಡಿಸಿಕೊಂಡು ಹೋಗಿ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ.
ಭಾರತದ ಮಣ್ಣಿನ ಮೇಲೆ ಶತ್ರುಗಳು ದಾಳಿ ಮಾಡಿದ್ದಾರೆ. ಹಲವು ರಾಜ್ಯಗಳು ತಮ್ಮ ತಮ್ಮ ಮಕ್ಕಳನ್ನು ಕಳೆದುಕೊಂಡಿವೆ, ಹಾಗೇ ಭಯೋತ್ಪಾದಕರು ಮತ್ತೆ ಬಾಲ ಬಿಚ್ಚಿದ್ದಾರೆ. ಹೀಗಾಗಿ ಯಾರೂ ಊಹಿಸದ ರೀತಿಯಲ್ಲಿ ನಾವು ಉಗ್ರರನ್ನು ಶಿಕ್ಷಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅಲ್ಲದೆ ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಕೂಡ ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ಶತ್ರು ದೇಶಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ.


Click it and Unblock the Notifications