ಬೆಂಗಳೂರು, ಅಕ್ಟೋಬರ್ 06: ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ಮಹತ್ವದ ರಸ್ತೆ ಯೋಜನೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಶೀಘ್ರವೇ ಆರಂಭಿಸಲಿದೆ. ಈ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಈಗಾಗಲೇ ಬಿಡಿಎ 9 ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ. ಆಸ್ತಿ ಮಾಲೀಕರಿಗೆ ನೋಟಿಸ್ ನೀಡುವ ಕಾರ್ಯ ಆರಂಭವಾಗಿದೆ. ಈ ಯೋಜನೆಗೆ ಭೂಮಿ ನೀಡಿದರೆ ಆಸ್ತಿ ಮಾಲೀಕರಿಗೆ ಸಿಗುವ ಪರಿಹಾರ ಎಷ್ಟು? ಎಂಬುದು ಸದ್ಯದ ಪ್ರಶ್ನೆ.
ತುಮಕೂರು ರಸ್ತೆ- ಹೊಸೂರು ರಸ್ತೆ ಸಂಪರ್ಕಿಸುವ 8 ಪಥದ ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್) ನಿರ್ಮಾಣದ ಮೊದಲ ಹಂತದ ಕಾರ್ಯಗಳು ಆರಂಭವಗಿವೆ. ಪಿಆರ್‌ಆರ್ ಯೋಜನೆಯನ್ನು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ) ಎಂದು ಮರು ನಾಮಕಾರಣ ಮಾಡಲಾಗಿದೆ. 73 ಕಿ. ಮೀ. ಉದ್ದದ ಈ ರಸ್ತೆಯನ್ನು, ಬಿಡಿಎ ಸುಮಾರು 30,000 ಕೋಟಿ ರೂ. ಅನುದಾನದಲ್ಲಿ ನಿರ್ಮಾಣ ಮಾಡಲಿದೆ.

ಈ ಯೋಜನೆಗೆ ಮೊದಲು 1,800 ಎಕರೆ ಭೂಮಿ ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಆದರೆ 2022ರಲ್ಲಿ 2ನೇ ಹಂತದಲ್ಲಿ ಹೆಚ್ಚುವರಿಯಾಗಿ 600 ಎಕರೆ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸರ್ಕಾರವೇ ಏಕಾಂಗಿಯಾಗಿ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಈಗ ಯೋಜನೆ ವ್ಯಾಪ್ತಿಗೆ ಬರುವ ಮಾಲೀಕರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಬಿಡಿಎ ಅಧಿಕಾರಿಗಳನ್ನು ನೇಮಕ ಮಾಡಿದ್ದು, ನೋಟಿಸ್ ನೀಡುವ ಕಾರ್ಯ ಆರಂಭವಾಗಿದೆ.
ಎಷ್ಟು ಪರಿಹಾರ ಸಿಗಲಿದೆ?: ಬಿಡಿಎ ಬಿಬಿಸಿ ಯೋಜನೆ ವ್ಯಾಪ್ತಿಗೆ ಬರುವ ಭೂ ಮಾಲೀಕರಿಗೆ ಭೂ ಸ್ವಾಧೀನ ಕಾಯ್ದೆ, 1984ರ ಅಡಿ ನೋಟಿಸ್ ನೀಡಲಿದೆ. ರೈತರು, ಭೂ ಮಾಲೀಕರು ಭೂಮಿ ತಮ್ಮ ಒಡೆತನದಲ್ಲಿದೆ ಎಂಬುದಕ್ಕೆ ನೋಟಿಸ್ ಬಂದ ಬಳಿಕ ದಾಖಲೆಗಳನ್ನು ನೀಡಬೇಕು, ಭೂಮಿ ನೀಡಲು ಆಕ್ಷೇಪಣೆಗಳಿದ್ದರೆ ಸಲ್ಲಿಸಬೇಕು ಮತ್ತು ಭೂಮಿಗೆ ಈಗಿರುವ 2013ರ ನಿಯಮಗಳ ಅನ್ವಯ ಪರಿಹಾರಕ್ಕಾಗಿ ಬೇಡಿಕೆಯನ್ನು ಮಾಲೀಕರು ಸಲ್ಲಿಸಬಹುದು.
ಭೂ ಮಾಲೀಕರಿಗೆ ಪರಿಹಾರ ನಿಗದಿಗೊಳಿಸುವ ಪ್ರಕ್ರಿಯೆಯನ್ನು ಬಿಡಿಎ ಆರಂಭಿಸಿದೆ. 2007ರಲ್ಲಿ ಈ ಯೋಜನೆಯನ್ನು ರೂಪಿಸಲಾಗಿತ್ತು. ಆದರೆ ಯೋಜನೆ ಟೆಂಡರ್ ಪಡೆಯಲು ಯಾರೂ ಸಹ ಮುಂದೆ ಬಂದಿಲ್ಲ. ಅಂತಿಮವಾಗಿ ಈಗ ಸರ್ಕಾರ ಶೇ 70ರಷ್ಟು ಸಾಲ ಶೇ 30ರಷ್ಟು ಅನುದಾನದೊಂದಿಗೆ ಯೋಜನೆಯನ್ನು ಜಾರಿಗೊಳಿಸಲಿದೆ.
ಈ ಹಿಂದೆಯೂ ಭೂ ಮಾಲೀಕರಿಗೆ ಪರಿಹಾರ ನೀಡುವ ಸಂಬಂಧ ಗೊಂದಲಗಳು ಉಂಟಾಗಿದ್ದವು. ಈಗ ಗೊಂದಲ ಬಗೆಹರಿದಿದೆ, ಯೋಜನೆಯ ಭೂ ಸ್ವಾಧೀನಕ್ಕೆ ನ್ಯಾಯಾಲಯ ಸಹ ಒಪ್ಪಿಗೆ ನೀಡಿದೆ. ಆದ್ದರಿಂದ ಯೋಜನೆಗೆ ವೇಗ ಸಿಗುವ ನಿರೀಕ್ಷೆ ಇದೆ. ಯೋಜನೆಯ ಭೂ ಸ್ವಾಧೀನಕ್ಕಾಗಿಯೇ 9 ಕೆಎಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ, ಅವರು ಪರಿಹಾರ ಕಾರ್ಯದ ಬಗ್ಗೆಯೂ ಗಮನ ಹರಿಸಲಿದ್ದಾರೆ.
ವಿಶೇಷ ಭೂಸ್ವಾಧೀನ ಅಧಿಕಾರಿಗಳು, ತಹಶೀಲ್ದಾರ್, ಭೂ ಮಾಪಕರು ಮತ್ತು ಡೇಟಾ ಎಂಟ್ರಿ ಆಪರೇಟರ್ ಸೇರಿ 68 ಸಿಬ್ಬಂದಿ ಭೂ ಸಾಧ್ವೀನ, ಪರಿಹಾರ ಹಂಚಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶೀಘ್ರವೇ ಬಿಡಿಎ ಯೋಜನೆಗೆ ಭೂಮಿ ನೀಡಿದವರಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ? ಎಂದು ಘೋಷಣೆ ಮಾಡಲಿದೆ. ಬಳಿಕ ಭೂ ಮಾಲೀಕರು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಕೆ ಮಾಡಬಹುದು.
100 ಮೀಟರ್ ಉದ್ದದ ಈ ರಸ್ತೆ 73 ಕಿ. ಮೀ. ಇರಲಿದೆ. 1,800 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಕಾರ್ಯ ಅಂತಿಮ ಹಂತದಲ್ಲಿದೆ. ಹೊಸೂರು ಮತ್ತು ತುಮಕೂರು ರಸ್ತೆ ಸಂಪರ್ಕಿಸುವ ಈ ಕಾರಿಡಾರ್ ಬಳ್ಳಾರಿ ರಸ್ತೆ, ಹಳೆ ಮದ್ರಾಸ್ ರಸ್ತೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆ ಮೂಲಕ ಬೆಂಗಳೂರು ಉತ್ತರ, ಪೂರ್ವ ಮತ್ತು ಆನೇಕಲ್ ತಾಲೂಕುಗಳ ಮೂಲಕ ಹಾದು ಹೋಗಲಿದೆ.
2007ರಲ್ಲಿ ಮೊದಲ ಬಾರಿಗೆ 8 ಪಥದ ಪೆರಿಫೆರಲ್ ವರ್ತುಲ ರಸ್ತೆ ಯೋಜನೆ ಪ್ರಸ್ತಾಪವಾಯಿತು. ಆಗಲೇ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಗುರುತಿಸಲಾಯಿತು. ಕರ್ನಾಟಕ ಸರ್ಕಾರ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು ಮುಂದಾಗಿತ್ತು. ಆದರೆ ಯಾರೂ ಸಹ ಯೋಜನೆ ಬಗ್ಗೆ ಆಸಕ್ತಿಯನ್ನು ವಹಿಸಿ ಟೆಂಡರ್ ಸಲ್ಲಿಕೆ ಮಾಡಲಿಲ್ಲ, ಯೋಜನೆ ಕಾಗದದಲ್ಲಿಯೇ ಉಳಿಯಿತು.
2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಯೋಜನೆ ಜಾರಿಗೊಳಿಸಲು ಮುಂದಾದರು. ಸೆಪ್ಟೆಂಬರ್ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಏಕಾಂಗಿಯಾಗಿ ಯೋಜನೆಯನ್ನು ಜಾರಿಗೊಳಿಸಲು ಅನುಮೋದನೆ ನೀಡಿತು. ಆದ್ದರಿಂದ ಈಗ ಯೋಜನೆಯ ಭೂ ಸ್ವಾಧೀನ ಕಾರ್ಯ ಆರಂಭವಾಗುತ್ತಿದೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ



Click it and Unblock the Notifications