ಮಾ.26: ಒಂದೇ ವಾರದಲ್ಲಿ ನಾಲ್ಕನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಶನಿವಾರ, ಮಾರ್ಚ್ 26) ಕೂಡ ಇಂಧನ ಏರಿಕೆ ಕಂಡಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಅದಾದ ನಂತರ ಬುಧವಾರ (ಮಾರ್ಚ್ 23) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 84 ಪೈಸೆ ಏರಿಕೆ ಮಾಡಲಾಗಿತ್ತು. ನಿನ್ನೆ (ಶುಕ್ರವಾರ) ಕೂಡ ಇಂಧನ ದರದಲ್ಲಿ ಏರಿಕೆಯಾಗಿದೆ. ಇದೀಗ ಶನಿವಾರವಾದ ಇಂದು(ಮಾರ್ಚ್​ 26) ಸಹ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗಿದೆ. ಆ ಮೂಲಕ ಒಂದೇ ವಾರದಲ್ಲಿ ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ 98.61 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 80 ಪೈಸೆ ಹೆಚ್ಚಳದ ಮೂಲಕ 89.87 ದಾಖಲಾಗಿದೆ.

ಇನ್ನು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀಟರ್ ಪೆಟ್ರೋಲ್ ದರ 113.35 ರೂ. ಡೀಸೆಲ್ ಬೆಲೆ 97.55 ರೂ. ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.47 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 103.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.14 ರೂಪಾಯಿ ದಾಖಲಾಗಿದೆ.

ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 120.7 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್​ಗೆ ಹೋಲಿಸಿದರೆ 1.62 ಯುಎಸ್ ಡಾಲರ್‌ನಷ್ಟು ಏರಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮಾ. 26: 103.93 ರೂ.
ಮಾ. 25: 103.11 ರೂ.
ಮಾ. 24: 102.26 ರೂ.
ಮಾ. 23: 102.26 ರೂ.
ಮಾ. 22: 101.42 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 26: 88.14 ರೂ.
ಮಾ. 25: 87.38 ರೂ.
ಮಾ. 24: 86.58 ರೂ.
ಮಾ. 23: 86.58 ರೂ.
ಮಾ. 22: 85.80 ರೂ.

 ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮಾ. 26: 98.61 ರೂ.
ಮಾ. 25: 97.91 ರೂ.
ಮಾ. 24: 97.01 ರೂ.
ಮಾ. 23: 97.01 ರೂ.
ಮಾ. 22: 96.21 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 26: 89.87 ರೂ.
ಮಾ. 25: 89.07 ರೂ.
ಮಾ. 24: 88.27 ರೂ.
ಮಾ. 23: 88.27 ರೂ.
ಮಾ. 22: 87.47 ರೂ.

 ಮುಂಬೈನಲ್ಲಿ  5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮಾ. 26: 113.35 ರೂ.
ಮಾ. 25: 112.51 ರೂ.
ಮಾ. 24: 111.67 ರೂ.
ಮಾ. 23: 111.67 ರೂ.
ಮಾ. 22: 110.82 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 26: 97.55 ರೂ.
ಮಾ. 25: 96.70 ರೂ.
ಮಾ. 24: 95.85 ರೂ.
ಮಾ. 23: 95.85 ರೂ.
ಮಾ. 22: 95.00 ರೂ.

 ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮಾ. 26: 104.43 ರೂ.
ಮಾ. 25: 103.67 ರೂ.
ಮಾ. 24: 102.91 ರೂ.
ಮಾ. 23: 102.91 ರೂ.
ಮಾ. 22: 102.16 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 26: 94.47 ರೂ.
ಮಾ. 25: 93.71 ರೂ.
ಮಾ. 24: 92.95 ರೂ.
ಮಾ. 23: 92.95 ರೂ.
ಮಾ. 22: 92.19 ರೂ.

 ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮಾ. 26: 111.80 ರೂ.
ಮಾ. 25: 110.91 ರೂ.
ಮಾ. 24: 110.01 ರೂ.
ಮಾ. 23: 110.01 ರೂ.
ಮಾ. 22: 109.10 ರೂ.

ಡೀಸೆಲ್ ದರ (ಪ್ರತಿ ಲೀಟರ್)
ಮಾ. 26: 98.10 ರೂ.
ಮಾ. 25: 97.24 ರೂ.
ಮಾ. 24: 96.37 ರೂ.
ಮಾ. 23: 95.50 ರೂ.
ಮಾ. 22: 94.62 ರೂ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಶನಿವಾರ, ಮಾರ್ಚ್ 19) ಕೂಡ ಇಂಧನ ಏರಿಕೆ ಕಂಡಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 120.7 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್​ಗೆ ಹೋಲಿಸಿದರೆ 1.62 ಯುಎಸ್ ಡಾಲರ್‌ನಷ್ಟು ಏರಿಕೆಯಾಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+