ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದೆ. ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಪೆಟ್ರೋಲ್, ಡೀಸೆಲ್ ಪರಿಷ್ಕರಣೆಯನ್ನು ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಮತ್ತೆ ಪ್ರತಿ ದಿನ ಪರಿಷ್ಕರಣೆ ಮಾಡಲು ಆರಂಭ ಮಾಡಿದೆ. ಈ ಪರಿಷ್ಕರಣೆಯ ವೇಳೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರಿಕೆ ಆಗುತ್ತಿದೆ. ದೇಶದಲ್ಲಿ ಕಳೆದ 16 ದಿನಗಳಲ್ಲಿ 14 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ. ಇಂದು ಕೂಡಾ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದೆ. ಪ್ರತಿ ದಿನವೂ ಏರಿಕೆ ಆಗುತ್ತಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಎರಡು ದಿನ ಹೊರತು ಪಡಿಸಿ ಮತ್ತೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿದೆ. ಈ ಹಿಂದೆ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕೊಂಚ ಕುಗ್ಗಿ 106.8 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ. 6: 111.16 ರೂ.
ಏ. 5: 110.25 ರೂ.
ಏ.4: 109.41 ರೂ.
ಏ.3: 108.99 ರೂ.
ಏ.2: 108.14 ರೂ.
ಏ.1: 107.30 ರೂ.
ಡೀಸೆಲ್ (ಪ್ರತಿ ಲೀಟರ್)
ಏ. 6: 94.86 ರೂ.
ಏ. 5: 94.01 ರೂ.
ಏ.4: 93.23 ರೂ.
ಏ.3: 92.83 ರೂ.
ಏ.2: 92.05 ರೂ.
ಏ.1: 91.27 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ. 6: 105.41 ರೂ.
ಏ. 5: 104.61 ರೂ.
ಏ.4: 103.81 ರೂ.
ಏ.3: 103.41 ರೂ.
ಏ.2: 102.61 ರೂ.
ಏ.1: 101.81 ರೂ.
ಡೀಸೆಲ್ (ಪ್ರತಿ ಲೀಟರ್)
ಏ. 6: 96.67 ರೂ.
ಏ. 5: 95.87 ರೂ.
ಏ.4: 95.07 ರೂ.
ಏ.3: 94.67 ರೂ.
ಏ.2: 93.87 ರೂ.
ಏ.1: 93.07 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ. 6: 120.51 ರೂ.
ಏ. 5: 119.67 ರೂ.
ಏ.4: 118.83 ರೂ.
ಏ.3: 118.41 ರೂ.
ಏ.2: 117.57 ರೂ.
ಏ.1: 116.72 ರೂ.
ಡೀಸೆಲ್ (ಪ್ರತಿ ಲೀಟರ್)
ಏ. 6: 104.77 ರೂ.
ಏ. 5: 103.92 ರೂ.
ಏ.4: 103.07 ರೂ.
ಏ.3: 102.64 ರೂ.
ಏ.2: 101.79 ರೂ.
ಏ.1: 100.94 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ. 6: 110.95 ರೂ.
ಏ. 5: 110.11 ರೂ.
ಏ.4: 109.34 ರೂ.
ಏ.3: 108.96 ರೂ.
ಏ.2: 107.4 ರೂ.
ಏ.1: 107.45 ರೂ.
ಡೀಸೆಲ್ (ಪ್ರತಿ ಲೀಟರ್)
ಏ. 6: 101.04 ರೂ.
ಏ. 5: 100.19 ರೂ.
ಏ.4: 99.42 ರೂ
ಏ.3: 99.04 ರೂ
ಏ.2: 97.52 ರೂ.
ಏ.1: 97.52 ರೂ.


Click it and Unblock the Notifications