ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದೆ. ಈ ನಡುವೆ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪ್ರತಿ ದಿನ ಪರಿಷ್ಕರಣೆ ಮಾಡಲು ಆರಂಭ ಮಾಡಿ ಏರಿಕೆ ಕಂಡಿತ್ತು. ಆದರೆ ಕಳೆದ ಹಲವಾರು ದಿನಗಳಿಂದ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಸ್ಥಿರವಾಗಿದೆ. ದೇಶಾದ್ಯಂತ ಸತತ 14ನೇ ದಿನವೂ ಇಂಧನ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು ಆ ಬಳಿಕ ಸ್ಥಿರವಾಗಿದೆ. ಕೋಟಕ್ ಸೆಕ್ಯುರಿಟೀಸ್‌ನ ವರದಿಯ ಪ್ರಕಾರ, "ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಹಲವಾರು ದೇಶಗಳು ರಷ್ಯಾದ ಇಂಧನ ರಫ್ತುಗಳನ್ನು ನಿರ್ಬಂಧಿಸಿದೆ. ಅದರ ಪರಿಣಾಮವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲೆ ಉಂಟಾಗಿದೆ."
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಬುಧವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಎರಡು ದಿನ ಹೊರತು ಪಡಿಸಿ ಮತ್ತೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿತ್ತು. ಆದರೆ ಸತತ ಹಲವಾರು ದಿನಗಳಿಂದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೆ ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿಲ್ಲ. ಮಾರ್ಚ್ 22ರಿಂದ ಪ್ರತಿದಿನ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರವು ಕಳೆದ 13 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಹಿಂದೆ ಯುಎಸ್‌ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರಲ್‌ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರಲ್‌ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕೊಂಚ ಹಿಗ್ಗಿ 108.2 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.20: 111.09 ರೂ.
ಏ.19: 111.09 ರೂ.
ಏ.18: 111.09 ರೂ.
ಏ.17: 111.09 ರೂ.
ಏ.16: 111.09 ರೂ.
ಏ.15: 111.09 ರೂ.
ಏ.14: 111.09 ರೂ.
ಏ.13: 111.09 ರೂ.
ಡೀಸೆಲ್ (ಪ್ರತಿ ಲೀಟರ್)
ಏ.20:94.79 ರೂ.
ಏ.19: 94.79 ರೂ.
ಏ.18: 94.79 ರೂ.
ಏ.17: 94.79 ರೂ.
ಏ.16: 94.79 ರೂ.
ಏ.15: 94.79 ರೂ.
ಏ.14: 94.79 ರೂ.
ಏ.13: 94.79 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.20:105.41 ರೂ.
ಏ.19: 105.41 ರೂ.
ಏ.18: 105.41 ರೂ.
ಏ.17: 105.41 ರೂ.
ಏ.16: 105.41 ರೂ.
ಏ.15: 105.41 ರೂ.
ಏ.14: 105.41 ರೂ.
ಏ.13: 105.41 ರೂ.
ಡೀಸೆಲ್ (ಪ್ರತಿ ಲೀಟರ್)
ಏ.20: 96.67 ರೂ.
ಏ.19: 96.67 ರೂ.
ಏ.18: 96.67 ರೂ.
ಏ.17: 96.67 ರೂ.
ಏ.16: 96.67 ರೂ.
ಏ.15: 96.67 ರೂ.
ಏ.14: 96.67 ರೂ.
ಏ.13: 96.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.20:120.51 ರೂ.
ಏ.19: 120.51 ರೂ.
ಏ.18: 120.51 ರೂ.
ಏ.17: 120.51 ರೂ.
ಏ.16: 120.51 ರೂ.
ಏ.15: 120.51 ರೂ.
ಏ.14: 120.51 ರೂ.
ಏ.13: 120.51 ರೂ.
ಡೀಸೆಲ್ (ಪ್ರತಿ ಲೀಟರ್)
ಏ.20: 104.77 ರೂ.
ಏ.19: 104.77 ರೂ.
ಏ.18: 104.77 ರೂ.
ಏ.17: 104.77 ರೂ.
ಏ.16: 104.77 ರೂ.
ಏ.15: 104.77 ರೂ.
ಏ.14: 104.77 ರೂ.
ಏ.13: 104.77 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.20: 110.85 ರೂ.
ಏ.19: 110.85 ರೂ.
ಏ.18: 110.85 ರೂ.
ಏ.17: 110.85 ರೂ.
ಏ.16: 110.85 ರೂ.
ಏ.15: 110.85 ರೂ.
ಏ.14: 110.85 ರೂ.
ಏ.13: 110.85 ರೂ.
ಡೀಸೆಲ್ (ಪ್ರತಿ ಲೀಟರ್)
ಏ.20: 100.94 ರೂ.
ಏ.19: 100.94 ರೂ.
ಏ.18: 100.94 ರೂ.
ಏ.17: 100.94 ರೂ.
ಏ.16: 100.94 ರೂ.
ಏ.15: 100.94 ರೂ.
ಏ.14: 100.94 ರೂ.
ಏ.13: 100.94 ರೂ.


Click it and Unblock the Notifications